Tuesday, August 26, 2025
Homeರಾಜಕೀಯ | Politicsಸಿದ್ದರಾಮಯ್ಯ ರಾಜೀನಾಮೆ ನೀಡುವ ಪರಿಸ್ಥಿತಿ ಬರುತ್ತೆ : ವಿಜಯೇಂದ್ರ

ಸಿದ್ದರಾಮಯ್ಯ ರಾಜೀನಾಮೆ ನೀಡುವ ಪರಿಸ್ಥಿತಿ ಬರುತ್ತೆ : ವಿಜಯೇಂದ್ರ

ಮೈಸೂರು, ಆ.10- ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದಿಲ್ಲ ಎಂದು ಹೇಳುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆಯೋ ಇಲ್ಲವೋ ಮುಂದಿನ ದಿನಗಳಲ್ಲಿ ತಿಳಿಯುತ್ತದೆ.

ಅವರು ರಾಜೀನಾಮೆ ನೀಡಲೇಬೇಕಾದ ಪರಿಸ್ಥಿತಿ ಬರುತ್ತದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿಂದು ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ ಪಾದಯಾತ್ರೆಯ ಪರಿಣಾಮದಿಂದ ಮುಖ್ಯಮಂತ್ರಿಗಳು ರಾಜೀನಾಮೆ ನೀಡಲೇಬೇಕಾಗುತ್ತದೆ ಎಂದರು.

ಇಂದು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸಮಾವೇಶವನ್ನು ಹಮಿಕೊಳ್ಳಲಾಗಿದೆ. ಅದಕ್ಕಾಗಿ ನಾನು ಆಂಜನೇಯ ಸ್ವಾಮಿ ಪೂಜೆ ಸಲ್ಲಿಸಿದ್ದು ಪಾದಯಾತ್ರೆ ಮೂಲಕ ಮಹಾರಾಜ ಕಾಲೇಜಿಗೆ ತೆರಳಿ ಅಲ್ಲಿ ಸಮಾವೇಶ ನಡೆಸುತ್ತಿದ್ದೇ ವೆ ಎಂದು ಹೇಳಿದರು.

ಕಾಂಗ್ರೆಸ್‌‍ ಪಕ್ಷದಿಂದ ರಾಜ್ಯದ ಜನತೆಗೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಹಾಗಾಗಿ ಭ್ರಷ್ಟ ಸರ್ಕಾರವನ್ನು ಕಿತ್ತೋಗೆಯಲು ಈ ಪಾದಯಾತ್ರೆ ಹಮಿಕೊಂಡಿದ್ದೆವು, ಅದು ಯಶಸ್ವಿಯಾಗಿದೆ. ಸಮಾವೇಶ ನಡೆಸುವ ಮೂಲಕ ನಾಡಿನ ಜನತೆಗೆ ಕಾಂಗ್ರೆಸ್‌‍ ಸರ್ಕಾರದ ಭ್ರಷ್ಟಾಚಾರ ಹಾಗೂ ಅವರು ನಡೆಸುತ್ತಿರುವ ದುರಾಡಳಿತ ಬಗ್ಗೆ ಮನವರಿಕೆ ಮಾಡಿಕೊಡುತ್ತಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ನಾಗೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

Latest News