Friday, November 22, 2024
Homeರಾಜ್ಯಕಾರ್ಯಕರ್ತರ ಹರ್ಷೋದ್ಘಾರಗಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಪದಗ್ರಹಣ

ಕಾರ್ಯಕರ್ತರ ಹರ್ಷೋದ್ಘಾರಗಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಪದಗ್ರಹಣ

ಬೆಂಗಳೂರು,ನ.15- ಕಳೆಗುಂದಿದ್ದ ಪಕ್ಷಕ್ಕೆ ಹೊಸ ಚೈತನ್ಯ ನೀಡುವ ದೃಢಸಂಕಲ್ಪ ಹಾಗೂ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಿಸುವ ಪ್ರತಿಜ್ಞೆಯೊಂದಿಗೆ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು.

ಮಲ್ಲೇಶ್ವರಂನ ಜಗನ್ನಾಥ ಭವನದಲ್ಲಿಂದು ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ಹರ್ಷೋದ್ಘಾರಗಳ ನಡುವೆ ಪದಗ್ರಹಣ ಮಾಡಿದರು.ನಿರ್ಗಮಿತ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ನೂತನ ಅಧ್ಯಕ್ಷರಿಗೆ ಪಕ್ಷದ ಬಾವುಟ ನೀಡಿ ವಿದ್ಯುಕ್ತವಾಗಿ ಅಧಿಕಾರ ಹಸ್ತಾಂತರಿಸಿ ಶುಭಕೋರಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರ ಸಮ್ಮುಖದಲ್ಲಿ ಅಕಾರ ಸ್ವೀಕಾರ ಮಾಡಿದ್ದು, ರಾಜ್ಯದಲ್ಲಿ ಇಂದಿನಿಂದ ವಿಜಯೇಂದ್ರ ಪರ್ವ ಆರಂಭವಾಗಿದ್ದು, ಚಿಕ್ಕ ವಯಸ್ಸಿನಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ಬಿಜೆಪಿ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಪುಟಿದೇಳಲು ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕಲ್ಪಿಸಿದೆ.

ರಶ್ಮಿಕಾ ಮಂದಣ್ಣ ಡೀಪ್‍ಫೇಕ್ ಪ್ರಕರಣದಲ್ಲಿ ಬಿಹಾರದ ಯುವಕನ ವಿಚಾರಣೆ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರಬಲ ಸಮುದಾಯ ವೀರಶೈವ ಲಿಂಗಾಯುತ ಸಮುದಾಯ ಹಿಂದೆ ಸರಿದಿದ್ದರಿಂದ ಪಕ್ಷಕ್ಕೆ ಹೀನಾಯ ಸೋಲುನ್ನುಂಟಾಗಿತ್ತು. ಮತ್ತೆ ಮತದಾರರನ್ನು ತನ್ನತ್ತ ಸೆಳೆಯಲು ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅವರಿಗೆ ಮಣೆ ಹಾಕಿತ್ತು. ಹಲವು ಹಿರಿಯ ನಾಯಕರ ಅಸಮಾಧಾನದೊಂದಿಗೆ ಇದೀಗ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿ ಅಕಾರ ಸ್ವೀಕರಿಸಿದ್ದು, 2024ರ ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಮಹತ್ವದ ಹೊಣೆಗಾರಿಕೆ ಬಿ.ವೈ.ವಿ ಅವರ ಮೇಲಿದೆ.

ಮುಖಂಡರಾದ ವಿ. ಸೋಮಣ್ಣ, ಸಿ.ಟಿ. ರವಿ, ಬಸವನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರು ಬಹಿರಂಗವಾಗಿ ಪಕ್ಷದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿಲ್ಲವಾದರೂ ಆಂತರಿಕವಾಗಿ ಅಸಮಾಧಾನಗೊಂಡಿದ್ದು, ಮುಂದಿನ ದಿನಗಳಲ್ಲಿ ಸಹಕಾರ ನೀಡಲಿದ್ದಾರೆಯೇ ಎಂಬುವುದು ಯಕ್ಷಪಪ್ರಶ್ನೆಯಾಗಿದೆ.

ಇಂದು ಬೆಳಿಗ್ಗೆ ಡಾಲರ್ಸ್ ಕಾಲೋನಿ ಧವಳಗಿರಿ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಯಡಿಯೂರಪ್ಪ ಅವರ ಆಶೀರ್ವಾದ ಪಡೆದು ಪಕ್ಷದ ಕಚೇರಿಗೆ ವಿಜಯೇಂದ್ರ ಅವರು ಆಗಮಿಸಿದರು.ಈ ವೇಳೆ ಹಿರಿಯ ನಾಯಕರು, ಕಾರ್ಯಕರ್ತರು ಹೂಗುಚ್ಛ ನೀಡಿ ಅಭಿನಂದನೆಗಳ ಸುರಿಮಳೆ ಗೈದರು.

ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸದಾನಂದಗೌಡ, ಸಂಸದರಾದ ತೇಜಸ್ವಿ ಸೂರ್ಯ, ಬಿ.ವೈ. ರಾಘವೇಂದ್ರ, ಜಿಎಸ್ ಬಸವರಾಜ್, ಮಾಜಿ ಸಚಿವರಾದ ಕೆ. ಗೋಪಾಲಯ್ಯ, ಆರ್. ಆಶೋಕ್, ಈಶ್ವರಪ್ಪ , ಕಾರಜೋಳ ಸೇರಿದಂತೆ ಹಾಲಿ ಶಾಸಕರು, ನಾಯಕರು, ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು.

RELATED ARTICLES

Latest News