ಬೆಂಗಳೂರು,ಜು.8- ಕಮಿಷನ್ ದಂಧೆಗೆ ಕನಿಷ್ಠ ಅಲ್ಪವಿರಾಮನ್ನಾದರೂ ನೀಡಿ ಜನರನ್ನು ಹಸಿವೆಂಬ ಬಾಧೆ ಬಾಧಿಸದಂತೆ ಈ ಕೂಡಲೇ ಲಾರಿ ಮಾಲೀಕರ ಬಾಕಿ ಹಣವನ್ನು ಪಾವತಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್‌್ಸಲ್ಲಿ ಹಣ ಬಿಡುಗಡೆ ಮಾಡದರುವ ರಾಜ್ಯ ಸರ್ಕಾರದ ವಿರುದ್ಧ ಲಾರಿ ಮಾಲೀಕರ ಸಂಘ ಮುಷ್ಕರ ನಡೆಸುತ್ತಿರುವುದನ್ನು ತೀವ್ರವಾಗಿ ಖಂಡಿಸಿರುವ ಅವರು, ಹಸಿದವರ ಆಕೋಶ ಹಾಗೂ ಲಾರಿಯನ್ನು ನಂಬಿ ಜೀವನ ಮಾಡುತ್ತಿರುವ ಲಾರಿ ಮಾಲೀಕರು ಹಾಗೂ ಚಾಲಕರ ಕುಟುಂಬಗಳ ಶಾಪಕ್ಕೆ ಗುರಿಯಾಗುವುದನ್ನು ತಪ್ಪಿಸಿಕೊಳ್ಳಿ ಎಂದು ಕಿಡಿಕಾರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಅನ್ನ ಭಾಗ್ಯದ ಆಹಾರ ಧಾನ್ಯಗಳನ್ನು ಸಾಗಿಸುವ ಲಾರಿಗಳಿಗೆ ಬಾಡಿಗೆ ಕೊಡುವ ಸ್ಥಿತಿಯಲ್ಲೂ ಇಲ್ಲದ ಕೆಟ್ಟ ಪರಿಸ್ಥಿತಿಗೆ ತಲುಪಿದೆ ಎಂದರೆ ಸರ್ಕಾರದ ಆರ್ಥಿಕ ಸ್ಥಿತಿ ದಿವಾಳಿಯತ್ತ ಸಾಗಿರುವುದರ ಸೂಚನೆಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಅನ್ನಭಾಗ್ಯದ ಯೋಜನೆಯಡಿಯಲ್ಲಿ ರಾಜ್ಯಸರ್ಕಾರವೊಂದೇ ಸಾಗಣಿಕೆ ವೆಚ್ಚ ಭರಿಸಬೇಕಿಲ್ಲ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ನೀಡುತ್ತಿರುವ ಉಚಿತ 5 ಕೆ.ಜಿ. ಅಕ್ಕಿಯ ಜೊತೆಗೆ ಆಹಾರ ಧಾನ್ಯ ಸಾಗಣೆಯ ವೆಚ್ಚವನ್ನೂ ಭರಿಸುತ್ತಿದೆ.
ಆದರೂ ಲಾರಿ ಮಾಲೀಕರಿಗೆ ಬಾಡಿಗೆ ಕೊಡದೆ ಏಕಿಷ್ಟು ಸತಾಯಿಸುತ್ತಿದ್ದೀರಿ? ನಿಮ ಸರ್ಕಾರದ ಭ್ರಷ್ಟ ವ್ಯವಹಾರಗಳಿಗೆ ಆದಾಯ ಮೂಲಗಳನ್ನು ಕಂಡುಕೊಳ್ಳಲು ಬೆಲೆ ಏರಿಕೆ, ಅವೈಜ್ಞಾನಿಕ ತೆರಿಗೆಗಳನ್ನು ಜನರ ಮೇಲೆ ಹೇರುತ್ತಲೇ ಇದ್ದೀರಿ ಎಂದು ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
- ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರೊಂದಿಗೆ ಡಿಸಿಎಂ ಚರ್ಚೆ
- ಇಡಿ ಯಿಂದ ಡಿ.ಕೆ.ಸುರೇಶ್ ವಿಚಾರಣೆ
- ಇಂದು ಅಮರನಾಥನ ದರ್ಶನಕ್ಕೆ ಹೊರಟ 7500 ಭಕ್ತರು
- ಗಾಂಜಾ ನಾಶಕ್ಕೆ ಟೊಂಕ ಕಟ್ಟಿ ನಿಂತ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
- ಬಿಹಾರ ಮಹಿಳೆಯರಿಗೆ ಮಾತ್ರ ಉದ್ಯೋಗ ಮೀಸಲಾತಿ : ನಿತೀಶ್ ಕುಮಾರ್ ಘೋಷಣೆ