Wednesday, January 15, 2025
Homeರಾಜ್ಯಕಾಂಗ್ರೆಸ್ ಸರ್ಕಾರದ ಪಾಪದ ಕೂಡ ತುಂಬಿದೆ, ಜನತೆ ತಿರುಗಿ ಬೀಳುವ ಕಾಲ ದೂರವಿಲ್ಲ : ವಿಜಯೇಂದ್ರ...

ಕಾಂಗ್ರೆಸ್ ಸರ್ಕಾರದ ಪಾಪದ ಕೂಡ ತುಂಬಿದೆ, ಜನತೆ ತಿರುಗಿ ಬೀಳುವ ಕಾಲ ದೂರವಿಲ್ಲ : ವಿಜಯೇಂದ್ರ ಎಚ್ಚರಿಕೆ

BY Vijayendra warn Congress government

ಬೆಂಗಳೂರು,ಜ.14- ದನದ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ತಂಡವು ಇಂದು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಕಾಟನ್‌ ಪೇಟೆಯ ದುಂಡು ಮಾರಿಯಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ ನೀಡಿತು.

ಇದೇವೇಳೆ ತಂಡವು ಹಸುಗಳ ಮಾಲೀಕನಿಗೆ ಧೈರ್ಯ ತುಂಬಿತು. ಸರಕಾರದ ನಿಷ್ಕ್ರಿಯತೆ, ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟ  ಬಗೆಯ ಕುರಿತು ತಂಡವು ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಮಕರ ಸಂಕ್ರಾಂತಿಯ ಹಿನ್ನೆಲೆಯಲ್ಲಿ ಗೋಪೂಜೆಯನ್ನೂ ನೆರವೇರಿಸಲಾಯಿತು. ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌, ಸಂಸದ ಪಿ.ಸಿ. ಮೋಹನ್‌, ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮಾಜಿ ಐಪಿಎಸ್‌‍ ಅಧಿಕಾರಿ ಮತ್ತು ಬಿಜೆಪಿ ಮುಖಂಡ ಭಾಸ್ಕರ್‌ ರಾವ್‌, ಪಕ್ಷದ ಪ್ರಮುಖರು, ಸ್ಥಳೀಯ ಮುಖಂಡರು ಈ ತಂಡದಲ್ಲಿದ್ದರು.

ಕಾಂಗ್ರೆಸ್ ಸರ್ಕಾರದ ಪಾಪದ ಕೂಡ ತುಂಬಿದೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಪಾಪದ ಕೂಡ ತುಂಬಿರುವ ಕಾರಣ ಹಸುಗಳ ಮೇಲೆ ಪೈಶಾಚಿಕ ಕ್ಯತ್ಯ ನಡೆಯುತ್ತಿದ್ದು, ಜನತೆ ತಿರುಗಿ ಬೀಳುವ ಕಾಲ ದೂರವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.

ದನದ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ತಂಡವು ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಕಾಟನ್ ಪೇಟೆಯ ದುಂಡು ಮಾರಿಯಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ ನೀಡಿ, ಹಸುಗಳ ಮಾಲೀಕನಿಗೆ ಧೈರ್ಯ ತುಂಬಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ ದೇಶದಲ್ಲಿ ಗೋವನ್ನ ತಾಯಿಯ ಸಮಾನವಾಗಿ ಕಾಣುತ್ತೇವೆ. ಇಂತಹ ಗೋವಿಗೆ ಯಾವ ಪರಿಸ್ಥಿತಿ ಆಗಿದೆ ಎಂಬುದನ್ನು ಕಾಂಗ್ರೆಸ್ ಸರ್ಕಾರದಲ್ಲಿ ನೋಡಿದ್ದೇವೆ. ಇದಕ್ಕೆಲ್ಲಾ ಸರ್ಕಾರವೇ ಹೊಣೆ ಎಂದು ಕಿಡಿಕಾರಿದರು..

ನಮ ಬಿಜೆಪಿ ತಂಡವು ಗೋಪಾಲಕ ಕರ್ಣನ ಕುಟುಂಬಕ್ಕೆ ಧೈರ್ಯ ಹೇಳಿದೆ. ಇದೊಂದು ಅಕ್ಷಮ್ಯ ಅಪರಾಧ. ಸಿದ್ದರಾಮಯ್ಯ ಸಿಎಂ ಆದ ಮೇಲೆ ಗೋ ರಕ್ಷಣೆ ಆಗುತ್ತಿಲ್ಲ.
ಇಂತಹ ಪರಿಸ್ಥಿತಿಗೆ ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯನವರೇ ಕಾರಣ ಕರ್ತರು. ಇದು ಇಬ್ಬರಿಗೂ ಒಳ್ಳೆಯದು ಆಗುವುದಿಲ್ಲ. ಇವರ ಪಾಪದ ಕೊಡ ತುಂಬಿರುವುದರಿಂದಲೇ ಈ ರೀತಿಯ ದುರ್ಘಟನೆಯಾಗಿದೆ. ಯಾರೋ ಒಬ್ಬನನ್ನು ಹಿಡಿದು ಅವನೇ ಈ ಘಟನೆಗೆ ಕಾರಣ ಎಂದು ದೂರಿದರು.

ಸಂಸದ ಪಿ.ಸಿ.ಮೋಹನ್ ಮಾತನಾಡಿ, ಕಾಂಗ್ರೆಸ್ನವರು ಹಸುಗಳನ್ನು ತೆಗದುಕೊಳ್ಳಲು ಒತ್ತಾಯ ಮಾಡುತ್ತಿದ್ದಾರೆ. ನಾವು ಹಿಂದೂಗಳು. ಹಸುವಿನ ಮಾಲೀಕನಿಗೆ 10 ಅಲ್ಲ 20 ಹಸುಗಳನ್ನು ಕೊಡಿಸುತ್ತೇವೆ. ಈ ಘಟನೆಯನ್ನು ನಿಜವಾಗಿ ಯಾರು ಮಾಡಿದ್ದಾರೆ ಅವನ ಬಂಧನ ಮಾಡಬೇಕು ಎಂದು ಒತ್ತಾಯ ಮಾಡಿದರು.

ಹಸಿವಿನ ಮಾಲೀಕ ಕರ್ಣ ಮಾತನಾಡಿ, ನಾನು 40 ವರ್ಷದಿಂದ ಇಲ್ಲಿದ್ದೇವೆ. ಇಂತಹ ಘಟನೆ ನಮಗಾದಂತೆ ಮತ್ತೆ ಯಾರಿಗೂ ಆಗಬಾರದು. ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಹಸುಗಳ ಆರೈಕೆಗೆ ಹಣ ನೀಡಿದ್ದಾರೆ. ಈ ಕೃತ್ಯ ಮಾಡಿದವನು ಮಾನಸಿಕ ಅಸ್ವಸ್ಥ ಅಲ್ಲ. ಒಂದು ವೇಳೆ ಆತ ಮಾನಸಿಕ ಆಸ್ವಸ್ಥನಾಗಿದ್ದರೆ ಆತನಿಗೆ ಹೇಗೆ ಕೆಲಸ ಕೊಡುತ್ತಿದ್ದರು ಎಂದು ಪ್ರಶ್ನೆ ಮಾಡಿದರು.

ಈ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿಜೆಪಿ ಮುಖಂಡ ಭಾಸ್ಕರ್ ರಾವ್, ಪಕ್ಷದ ಪ್ರಮುಖರು, ಸ್ಥಳೀಯ ಮುಖಂಡರು ಈ ತಂಡದಲ್ಲಿದ್ದರು.

ಗೋವುಗಳ ಕೆಚ್ಚಲು ಕೊಯ್ದ ಘಟನೆ ವಿರೋಧಿಸಿ ಬಿಜೆಪಿ ಪ್ರತಿಭಟನೆ
ಚಾಮರಾಜಪೇಟೆ ಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣದ ಸೂಕ್ತ ತನಿಖೆಗಾಗಿ ಆಗ್ರಹಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲಿದೆ. ಈ ಘಟನೆಯಿಂದ ಹಿಂದೂಗಳನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದು, ರಕ್ತ ಸುರಿಯುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಆದರೆ ಇದು ಒಬ್ಬರೇ ಮಾಡಿದ ಕೃತ್ಯವಲ್ಲ. ಇದರಲ್ಲಿ ಹಲವರು ಭಾಗಿಯಾಗಿದ್ದಾರೆ. ಈ ಕುರಿತು ಪೊಲೀಸರು ಸರಿಯಾಗಿ ತನಿಖೆ ಮಾಡಬೇಕಿತ್ತು. ಈಗ ಸಂಕ್ರಾಂತಿ ಹಬ್ಬ ನಡೆಯುತ್ತಿದೆ. ಪ್ರಯಾಗ್ರಾಜ್ನಲ್ಲಿ ಮಹಾಕುಂಭಮೇಳ ನಡೆಯುತ್ತಿದೆ. ಇಂತಹ ಸಮಯದಲ್ಲೇ ಈ ಕೃತ್ಯ ಮಾಡುವುದರ ಜೊತೆಗೆ ಹಸು ಮಾಲೀಕ ಕರ್ಣ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಹಸುವನ್ನು ಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ದೂರಿದರು.

1 ಲಕ್ಷ ರೂ. ಪರಿಹಾರವನ್ನು ಹಸು ಮಾಲೀಕ ಕರ್ಣ ಅವರಿಗೆ ಬಿಜೆಪಿ ವತಿಯಿಂದ ನೀಡಲಾಗಿದೆ. ಹಿಂದೂಗಳು ಬೇಡುವ ಸ್ಥಿತಿಯಲ್ಲಿಲ್ಲ. ಕಾಂಗ್ರೆಸ್ನವರು ಒಂದು ಕೈಯಲ್ಲಿ ಹಸುವನ್ನು ನೀಡುತ್ತಾರೆ. ಮತ್ತೊಂದು ಕಡೆ ಅವರ ಕಡೆಯವರೇ ನೀಡುವ ಹಸುವನ್ನು ಕತ್ತರಿಸುತ್ತಾರೆ. ನನಗೀಗ ಪೊಲೀಸರು ಹಾಗೂ ಸರ್ಕಾರದ ಮೇಲೆಯೇ ಅನುಮಾನ ಬಂದಿದೆ. ಆರೋಪಿ ಜೇಬಿನಲ್ಲಿ ಬ್ಲೇಡ್ ಇಟ್ಟುಕೊಂಡು ಓಡಾಡುತ್ತಿದ್ದ, ಆತನಿಗೆ ಮತಿಭ್ರಮಣೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇಂತಹ ವ್ಯಕ್ತಿ 10 ವರ್ಷ ಫ್ಯಾಕ್ಟರಿಯಲ್ಲಿ ಕೆಲಸ ಮಾಡಲು ಹೇಗೆ ಸಾಧ್ಯ?, ಮುಂಜಾನೆ 3-4 ಗಂಟೆಗೆ ಆತ ಇಲ್ಲಿಗೆ ಬರಲು ಹೇಗೆ ಸಾಧ್ಯ?, ಪ್ರತಿಭಟನೆಯಲ್ಲಿ ಪಾಲ್ಗೊಂಡ ಕರ್ಣ ಅವರ ಹಸುವಿನ ಕೆಚ್ಚಲನ್ನೇ ಕೊಯ್ದಿದ್ದೇಕೆ? ಎಂದು ಪ್ರಶ್ನೆ ಮಾಡಿದರು.

ಇಲ್ಲಿ ಪಶು ಆಸ್ಪತ್ರೆ ಬಹಳ ಕಡಿಮೆ ಸಂಖ್ಯೆಯಲ್ಲಿದೆ. ಅದರ ಜಾಗ ಲೂಟಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾತೆ ತಿದ್ದುಪಡಿ ಮಾಡಿ ವಕ್‌್ಫ ಮಂಡಳಿಗೆ ನೀಡಿದ್ದಾರೆ. ಹಸು ಮಾಲೀಕ ಕರ್ಣನ ಮೇಲೆ ದಾಳಿ ಮಾಡಲು ಸಾಧ್ಯವಾಗಿಲ್ಲ. ಆದರೆ ಹಸುವಿನ ಮೇಲೆ ದಾಳಿ ಮಾಡಿ ಕರ್ಣನಿಗೆ ಎಚ್ಚರಿಕೆ ನೀಡಿದ್ದಾರೆ. ಆದರೂ ಸಿಎಂ ಸಿದ್ದರಾಮಯ್ಯನವರ ಬಾಯಲ್ಲಿ ಯಾವುದೇ ವಿರೋಧದ ಮಾತು ಬಂದಿಲ್ಲ. ಮುಸಲಾನರಿಗೆ ಏನಾದರೂ ಆಗಿದ್ದರೆ ಅವರೇ ಮುಂದೆ ಬಂದು ಮಾತಾಡುತ್ತಿದ್ದರು. ಆದರೆ ಈ ಮತಬ್ಯಾಂಕ್ ರಾಜಕಾರಣಕ್ಕೆ ನಾವ್ಯಾರೂ ಹೆದರುವುದಿಲ್ಲ. ಇದು ಧರ್ಮಯುದ್ಧವಾಗಿದ್ದು, ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡಲಿದೆ. ಗೋವುಗಳ ಹತ್ಯೆ, ಹಿಂದೂಗಳ ಮೇಲಿನ ದಾಳಿ ಖಂಡಿಸಿ ಹೋರಾಡುತ್ತೇವೆ ಎಂದರು.

ತನಿಖೆ ಏಕೆ ಆಗಿಲ್ಲ? :
ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಬಂಧಿಸಿ ಕಬ್ಬಿನ ಗ್ದೆಯಲ್ಲಿ ಇರಿಸಲಾಗಿತ್ತು. ಆದರೆ ಈ ಪ್ರಕರಣದ ಆರೋಪಿಯನ್ನು ನೇರವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪೊಲೀಸರು ತನಿಖೆ ಮಾಡಲು ಆರೋಪಿಯನ್ನು ಕಸ್ಟಡಿಗೆ ಪಡೆಯಬೇಕಿತ್ತು. ಅದನ್ನು ಮಾಡದೆ ತನಿಖೆ ಸ್ಥಗಿತಗೊಳಿಸಲಾಗಿದೆ ಎಂದು ಆಕೋಶ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯನವರು ಔಟ್ ಗೋಯಿಂಗ್ ಸಿಎಂ. ಇಂತಹ ಸಮಯದಲ್ಲಿ ಹಾಲು ನೀಡುವ ಹಸುವಿಗೆ ನ್ಯಾಯ ನೀಡುವ ಕೆಲಸ ಮಾಡಲಿ. ಗೋಮಾತೆಗೆ ಮೋಸ ಮಾಡಬೇಡಿ ಎಂದರು. ಕಾಂಗ್ರೆಸ್ ಒಡೆದ ಮನೆಯಾಗಿದ್ದು, ಇನ್ನು ಈ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲ್ಲ. ಸಿಎಂ ಕುರ್ಚಿಗಾಗಿ ಜಗಳ ನಡೆಯುತ್ತಿದೆ ಎಂದರು.

RELATED ARTICLES

Latest News