ಉಪಚುನಾವಣೆಗಳಲ್ಲಿ ಪ್ರಾದೇಶಿಕ ಪಕ್ಷಗಳ ಮೇಲುಗೈ

Social Share

ನವದೆಹಲಿ,ಡಿ.8- ಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಜೊತೆಯಲ್ಲಿ ನಡೆದಿದ್ದ ಒಂದು ಲೋಕಸಭೆ ಮತ್ತು ಆರು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಕೂಡ ಪ್ರಕಟಗೊಂಡಿದ್ದು, ಸ್ಥಳೀಯ ಪಕ್ಷಗಳು ಮೇಲುಗೈ ಸಾಧಿಸಿವೆ.

ಉತ್ತರ ಪ್ರದೇಶದಲ್ಲಿ ಎರಡು ವಿಧಾನಸಭೆ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ಮೈನಾಪುರಿ ಕ್ಷೇತ್ರ ತೆರವಾಗಿತ್ತು. ಅಲ್ಲಿ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಸ್ರ್ಪಧಿಸಿದ್ದರು. ಆರಂಭದಿಂದಲೂ ಮತ ಎಣಿಕೆಯಲ್ಲಿ ಮುನ್ನೆಡೆ ಸಾಧಿಸಿದ ಅವರು ಜಯ ದಾಖಲಿಸಿದ್ದಾರೆ. ಆಡಳಿತಾರೂಢ ಬಿಜೆಪಿಯ ಅಭ್ಯರ್ಥಿ ರಘುರಾಜ್ ಸಿಂಗ್ ಎರಡನೇ ಸ್ಥಾನ ಪಡೆದಿದ್ದಾರೆ.

ಗುಜರಾತ್ ಚುನಾವಣೆ ಮೇಲೆ ಪರಿಣಾಮ ಬಿರದ ಮೊರ್ಬಿ ಸೇತುವೆ ದುರಂತ

ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲೂ ಆಡಳಿತಾ ರೂಢ ಬಿಜೆಪಿ ಮುಖಭಂಗ ಅನುಭವಿಸಿದೆ. ಕೌತಲಿ ಕ್ಷೇತ್ರದಲ್ಲಿ ರಾಷ್ಟ್ರೀಯ ಲೋಕದಳ ಅಭ್ಯರ್ಥಿ ಮದನ್ ಬಯ್ಯಾಗೆಲುವು ಸಾಧಿಸಿದರೆ, ಬಿಜೆಪಿ ಅಭ್ಯರ್ಥಿ ರಾಜ್‍ಕುಮಾರಿ ಹಿನ್ನೆಡೆ ಅನುಭವಿಸಿದ್ದಾರೆ. ರಾಮ್‍ಪುರ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಮೊಹ್ಮದ್ ಅಸಿಂ ರಜಾ ಗೆಲುವು ಸಾಸಿದರೆ, ಬಿಜೆಪಿ ಅಭ್ಯರ್ಥಿ ಅಕಾಶ್ ಸಕ್ಸೇನಾ ಎರಡನೇ ಸ್ಥಾನ ಪಡೆದಿದ್ದಾರೆ.

ರಾಜಸ್ತಾನದ ಸರ್ದರ್ಶಹರ್ ಕ್ಷೇತ್ರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಅನಿಲ್ ಕುಮಾರ್ ಶರ್ಮಾ ಬಿಜೆಪಿಯ ಅಶೋಕ್ ಕುಮಾರ್ ಅವರನ್ನು ಸೋಲಿಸಿದ್ದಾರೆ. ರಾಷ್ಟ್ರೀಯ ಲೋಕ ತಾಂತ್ರಿಕ ಪಕ್ಷದ ಅಭ್ಯರ್ಥಿ ಲಾಲ್ ಚಂದ್ ಮುಂದ್ ಮೂರನೇ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.

ರಾಷ್ಟ್ರೀಯ ಪಕ್ಷವಾದ ಅಮ್ ಆದ್ಮಿ ಪಾರ್ಟಿ

ಬಿಹಾರ ರಾಜ್ಯದ ಕೌರ್ಹನಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಅಭ್ಯರ್ಥಿ ಮನೋಜ್ ಸಿಂಗ್ ಗೆಲುವು ದಾಖಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆದಾರ್ ಪ್ರಸಾದ್ ಗುಪ್ತಾ ಎರಡನೇ ಸ್ಥಾನದಲ್ಲಿದ್ದಾರೆ. ಜೆಡಿಯು ಜೊತೆ ಸೇರಿ ಸರ್ಕಾರ ರಚಿಸಿರುವ ಕಾಂಗ್ರೆಸ್ ಮತ್ತು ಆರ್‍ಜೆಡಿ ಮಿತ್ರ ಪಕ್ಷಗಳು ಇಲ್ಲಿ ಚುನಾವಣೆಯಿಂದ ಹಿಂದೆ ಸರಿದಿದ್ದವು.

ಚತ್ತೀಸ್‍ಗಡ ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿರುವ ಕಾಂಗ್ರೆಸ್ ಅಭ್ಯರ್ಥಿ ಸವಿತ್ರಿ ಮನೋಜ್ ಮಾಂಡವಿ ಭಾನುಪ್ರತಾಪ್‍ಪುರ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಹ್ಮಾನಂದ ನೆಥಂ ಎರಡನೇ ಸ್ಥಾನದಲ್ಲಿದ್ದಾರೆ. ಪಕ್ಷೇತರ ಅಭ್ಯರ್ಥಿ ಅಕ್ಬರ್ ರಾಮ್ ಕೊರ್ರಂ ತೃತೀಯ ಸ್ಥಾನದಲ್ಲಿದ್ದಾರೆ.

ಒಡಿಸ್ಸಾ ರಾಜ್ಯದ ಪದ್ಮಪುರ್ ಕ್ಷೇತ್ರದಲ್ಲಿ ಆಡಳಿತಾರೂಢ ಬಿಜುಜನತಾದಳ (ಬಿಜೆಡಿ) ಅಭ್ಯರ್ಥಿ ಬರ್ಶಾ ಸಿಂಗ್ ಬರಿಹ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರದೀಪ್ ಪುರೋಹಿತ್ ಎರಡನೇ ಸ್ಥಾನದಲ್ಲಿದ್ದಾರೆ.
ಎಲ್ಲಾ ಉಪಚುನಾವಣೆಗಳಲ್ಲಿ ಬಿಜೆಪಿ ಮುಖಭಂಗ ಅನುಭವಿಸಿದೆ.

Byelection, Results, regional parties, win,

Articles You Might Like

Share This Article