Friday, November 22, 2024
Homeರಾಜ್ಯಕೋಟ್ಯಂತರ ಹಿಂದೂಗಳ ಭಾವನೆಗೆ ಕಾಂಗ್ರೆಸ್ ಧಕ್ಕೆ ತಂದಿದೆ : ಬಿಎಸ್‌ವೈ

ಕೋಟ್ಯಂತರ ಹಿಂದೂಗಳ ಭಾವನೆಗೆ ಕಾಂಗ್ರೆಸ್ ಧಕ್ಕೆ ತಂದಿದೆ : ಬಿಎಸ್‌ವೈ

ಬೆಂಗಳೂರು,ಜ.11- ರಾಮಲಲ್ಲಾ ಟ್ರಸ್ಟ್ ಆಹ್ವಾನ ಕೊಟ್ಟಿದ್ದರೂ ಅದನ್ನು ತಿರಸ್ಕರಿಸುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗೆ ಕಾಂಗ್ರೆಸ್ ಧಕ್ಕೆ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಇದೇ 22 ರಂದು ನಡೆಯುವ ರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಪಾಲ್ಗೊಳ್ಳುವಂತೆ ಖುದ್ದು ಟ್ರಸ್ಟ್‍ನವರೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾಗಾಂಧಿಯವರಿಗೆ ಆಹ್ವಾನ ಪತ್ರ ನೀಡಿದ್ದರು.

ಆದರೆ ಕುಂಟು ನೆಪ ಹೇಳಿ ಕಾಂಗ್ರೆಸ್ ನಾಯಕರು ಕಾರ್ಯಕ್ರಮಕ್ಕೆ ಗೈರು ಹಾಜರಾಗಿರುವುದು ಹಿಂದೂಗಳಿಗೆ ಮಾಡಿದ ಅಪಮಾನ. ಲೋಕಸಭೆ ಚುನಾವಣೆಯಲ್ಲಿ ಜನತೆಯೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

ಆಯೋಧ್ಯೆ ಪ್ರವಾಸಕ್ಕೆ ವಾರ್ಷಿಕ ಉಚಿತ ರೈಲು ಪ್ರಯಾಣ ಯೋಜನೆ

ರಾಮಮಂದಿರ ಉದ್ಘಾಟನೆ ಮತ್ತು ರಾಮನ ಮೂರ್ತಿಯ ಪ್ರತಿಷ್ಠಾಪನೆಯ ವಿಶೇಷ ಸಂದರ್ಭದಲ್ಲಿ ನಾವಿದ್ದೇವೆ. ಕಾಂಗ್ರೆಸ್ ಮುಖಂಡರಿಗೆ ಆಹ್ವಾನ ಇದ್ದರೂ ತಾವು ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದು ಅತ್ಯಂತ ದುರ್ದೈವದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ ನಿಲುವನ್ನು ನಾನು ಖಂಡಿಸುತ್ತೇನೆ ಎಂದು ತಿಳಿಸಿದರು. ರಾಮರಾಜ್ಯ, ರಾಮನ ಕನಸು ನನಸು ಆಗಬೇಕಿದೆ. ಆದರೆ, ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕಾಂಗ್ರೆಸ್ಸಿಗರು ಯಾವ ಕಾರಣಕ್ಕಾಗಿ ರಾಮಮಂದಿರ ಉದ್ಘಾಟನೆಗೆ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಇಂಥವರು ಸೇರಿ ಒಂದು ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಮುಂದೆ ಅವರೇ ಪಶ್ಚಾತ್ತಾಪ ಪಡುತ್ತಾರೆ ಎಂದು ನುಡಿದರು.

RELATED ARTICLES

Latest News