ಬೆಂಗಳೂರು, ಡಿ.31– ಕೆಲವು ಪ್ರಭಾವಿ ವ್ಯಕ್ತಿಗಳ ನಿದರ್ಶನದಂತೆ ಬೆಳಗಾವಿಯಲ್ಲಿ ರಾತ್ರಿ ಇಡೀ ನಿರ್ಜನ ಪ್ರದೇಶಗಳಲ್ಲಿ ಸುತ್ತಾಡಿಸಿ, ಸಂಪೂರ್ಣವಾಗಿ ಕಾನೂನಿನ ಉಲ್ಲಂಘನೆ ಮಾಡಿದ ಪೊಲೀಸ್ ಇಲಾಖೆಯ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ದೂರು ನೀಡಿದ್ದಾರೆ.
ನಗರದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರನ್ನು ಭೇಟಿಯಾಗಿ ದೂರು ನೀಡಿದ ಅವರು, ಹಕ್ಕು ಚ್ಯುತಿ ಉಲ್ಲಂಘಿಸಿರುವ ಪೊಲೀಸರನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ.
ನನ್ನನ್ನು ಬೆಳಗಾವಿಯಲ್ಲಿ ಅಕ್ರಮವಾಗಿ ಪೊಲೀಸರು ಬಂಧಿಸಿದ್ದರು. ದೂರು ಕೊಟ್ಟ ಬಳಿಕವೂ ಪೊಲೀಸರು ಎಫ್.ಐ.ಆರ್. ಹಾಕದೆ ನನ್ನ ಮೇಲೆ ದೌರ್ಜನ್ಯವೆಸಗಿದ್ದರು ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.