ಬೆಂಗಳೂರು,ಡಿ.21- ಸಚಿವೆ ಲಕ್ಷಿ ಹೆಬ್ಬಾಳ್ಕರ್ಗೆ ಅಸಾಂವಿಧಾನಿಕ ಪದ ಬಳಸಿದ ಆರೋಪದ ಮೇಲೆ ಬಂಧನವಾಗಿದ್ದ ಬಿಜೆಪಿ ಎಂಎಲ್ಸಿ ಸಿ.ಟಿ ರವಿಗೆ ನ್ಯಾಯಾಲಯ ಜಾಮೀನು ನೀಡಿದೆ. ಈ ಬೆನ್ನಲ್ಲೇ ಬೆಂಗಳೂರಿಗೆ ಆಗಮಿಸಿದ್ದು, ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ ಸಿಕ್ಕಿತು.
ಕಾರ್ಯಕರ್ತರು ಪಟಾಕಿ ಸಿಡಿಸಿ, ಹಾರ ಹಾಕಿ ಅದ್ಧೂರಿ ಸ್ವಾಗತದೊಂದಿಗೆ ಬರಮಾಡಿಕೊಂಡಿದ್ದಾರೆ. ಸಿ.ಟಿ.ರವಿ ಅವರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ್ದಾರೆ. ಇದೇ ವೇಳೆ ಕೈ ಮುಗಿದು ಧನ್ಯವಾದ ಹೇಳಿರುವ ಸಿ.ಟಿ.ರವಿಗೆ, ನಿಮೊಂದಿಗೆ ನಾವಿದ್ದೇವೆ, ಹೆದರಬೇಡಿ ಅಭಯ ನೀಡಿದ್ದಾರೆ.
ಅದಕ್ಕೆ ಪ್ರತಿಯಾಗಿ ರವಿ, ನೀವೆಲ್ಲ ನನಗೆ ಧೈರ್ಯ ತುಂಬಿದ್ದೀರಿ, ಎಲ್ಲವನ್ನೂ ಮಾತನಾಡೋಣ, ತುಂಬಾ ಧನ್ಯವಾದ ಎಂದು ಭಾವುಕರಾಗಿದ್ದರು.ಕಾರ್ಯಕರ್ತರಿಗೆ ಅಭಿ ನಂದನೆ: ಇನ್ನು ತಮ ಪರವಾಗಿ ನಿಂತ ಪಕ್ಷದ ಕಾರ್ಯಕರ್ತರಿಗೆ ರವಿ ಅವರು ಭಾವನಾತಕವಾಗಿ ಅಭಿನಂದನೆ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂದು ನನ್ನ ಮೇಲೆ ದಾಖಲಾದ ಸುಳ್ಳು ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ ನನ್ನ ಜೊತೆಗಿದ್ದು ಧೈರ್ಯ ತುಂಬಿದ ನನ್ನ ನೆಚ್ಚಿನ ಬಿಜೆಪಿ ಕಾರ್ಯಕರ್ತ ಬಂಧುಗಳಿಗೆ, ಜೊತೆಗೆ ನಿಂತ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಎಲ್ಲಾ ರಾಷ್ಟ್ರೀಯ ನಾಯಕರು, ವಿರೋಧ ಪಕ್ಷದ ನಾಯಕರಾದ ಅಶೋಕ್ ಹಾಗೂ ಶಾಸಕರು, ಸಂಸದರು, ಮಾಜಿ ಸಚಿವರು, ಹಿರಿಯ ನಾಯಕರು, ಸ್ನೇಹಿತರು, ಮಾಧ್ಯಮದ ಮಿತ್ರರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
ರಾಜ್ಯಾದ್ಯಂತ ತುಘಲಕ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ ನನ್ನ ಕಾರ್ಯಕರ್ತ ಬಂಧುಗಳೇ, ನಿಮೆಲ್ಲರ ಬೆಂಬಲ ನನ್ನ ಶಕ್ತಿಯನ್ನು ಇಮುಡಿಗೊಳಿಸಿದೆ/ ದುಷ್ಟ ಶಕ್ತಿಗಳ ವಿರುದ್ಧ ಇನ್ನೂ ಹೆಚ್ಚಾಗಿ ಹೋರಾಡಲು ಶಕ್ತಿ ತುಂಬಿದೆ. ಭಾರತೀಯ ಜನತಾ ಪಾರ್ಟಿಯ ನಾವೆಲ್ಲರೂ ಒಂದಾಗಿ ಕರ್ನಾಟಕವನ್ನು ಗೂಂಡಾ ರಿಪಬ್ಲಿಕ್ ಮಾಡಲು ಅವಕಾಶ ಕೊಡುವುದಿಲ್ಲ ಎಂದು
ಅವರು ತಿಳಿಸಿದ್ದಾರೆ.