Friday, January 17, 2025
Homeರಾಜ್ಯಸದನದಲ್ಲಿ ಸಚಿವೆ ಲಕ್ಷಿ ಹೆಬ್ಬಾಳ್ಕರ್‌ಗೆ ಸಿ.ಟಿ.ರವಿ ನಿಂದಿಸಿದ್ದು ಫೋರೆನ್ಸಿಕ್‌ ಪರೀಕ್ಷೆಯಲ್ಲಿ ದೃಢ

ಸದನದಲ್ಲಿ ಸಚಿವೆ ಲಕ್ಷಿ ಹೆಬ್ಬಾಳ್ಕರ್‌ಗೆ ಸಿ.ಟಿ.ರವಿ ನಿಂದಿಸಿದ್ದು ಫೋರೆನ್ಸಿಕ್‌ ಪರೀಕ್ಷೆಯಲ್ಲಿ ದೃಢ

C.T. Ravi's abusive remarks against Minister Lakshi Hebbalkar in the House have been confirmed

ಬೆಂಗಳೂರು,ಜ.17- ಸದನದಲ್ಲಿ ಸಚಿವೆ ಲಕ್ಷಿ ಹೆಬ್ಬಾಳ್ಕರ್‌ ವಿರುದ್ಧ ಎಂಎಲ್‌ಸಿ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದು ಖಚಿತ ಎಂದು ಸಿಐಡಿ ಮೂಲಗಳು ತಿಳಿಸಿವೆ. ಅಸಲಿ ವೀಡಿಯೋ ಇದೀಗ ಸಿಐಡಿಗೆ ಲಭ್ಯವಾಗಿದೆ.

ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ ಒಳಪಡಿಸಿದಾಗ ಸಿಟಿ ರವಿ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್‌ ಪರೀಕ್ಷೆಯಲ್ಲಿ ದೃಢವಾಗಿದೆ ಎಂದು ತಿಳಿದುಬಂದಿದೆ.

ನಾಲ್ಕು ಗಂಟೆಯ ವಿಡಿಯೋ ರೆಕಾರ್ಡ್‌ನಲ್ಲಿ ಒಟ್ಟು ಏಳು ಬಾರಿ ಅವಾಚ್ಯ ಶಬ್ದ ಬಳಕೆ ಮಾಡಲಾಗಿದೆ ಎಂದು ಪೊಲೀಸ್‌‍ ಮೂಲಗಳಿಂದ ತಿಳಿದಬಂದಿದೆ, ಅವಾಚ್ಯ ಶಬ್ದ ಬಳಸಿದ ಧ್ವನಿ ಪತ್ತೆಗೆ ಸಿಟಿ ರವಿ ವಾಯ್‌್ಸ ಸ್ಯಾಂಪಲ್‌ ಪಡೆಯಲು ಸಿಐಡಿ ಮುಂದಾಗಿದೆ. ಆದರೆ ತಾನು ಅವಾಚ್ಯ ಶಬ್ದ ಬಳಸಿಲ್ಲ ಎಂದು ಸಿಟಿ ರವಿ ಹೇಳುತ್ತಿದ್ದಾರೆ. ಜೊತೆಗೆ ವಾಯ್‌್ಸ ಸ್ಯಾಂಪಲ್‌ ನೀಡಲು ನಿರಾಕರಿಸಿದ್ದಾರೆ. ಹೀಗಾಗಿ, ನ್ಯಾಯಾಲಯದ ಮೂಲಕ ವಿಚಾರಣೆಗೆ ಮತ್ತು ವಾಯ್‌್ಸ ಸ್ಯಾಂಪಲ್‌ ಪಡೆಯಲು ಸಿಐಡಿ ಮುಂದಾಗಿದೆ.

ಸಿ.ಟಿ.ರವಿ ವಾಯ್‌್ಸ ಸ್ಯಾಂಪಲ್‌ ಪಡೆಯಲು ಸಿಐಡಿ ಮುಂದಾಗಿತ್ತು. ಆದರೆ, ಅದಕ್ಕೆ ಸಿ.ಟಿ.ರವಿ ನಿರಾಕರಿಸಿದ್ದರು. ಕೊನೆಗೆ ಡಿಪಿಎಆರ್‌ನಿಂದ ಅಸಲಿ ವೀಡಿಯೋವನ್ನು ಸಿಐಡಿ ವಶಕ್ಕೆ ಪಡೆದಿತ್ತು.

ಬೆಳಗಾವಿ ಅಧಿವೇಶನದ ವೇಳೆ ಮೇಲನೆಯಲ್ಲಿ ನಡೆದಿದ್ದ ಘಟನಾವಳಿಗಳ ಕುರಿತು ವೀಡಿಯೋ-ಆಡಿಯೋ ದಾಖಲೆ ನೀಡುವಂತೆ ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆಗೆ (ಡಿಪಿಎಆರ್‌) ಸಿಐಡಿ ಮನವಿ ಮಾಡಿತ್ತು.ಸದನದಲ್ಲಿ ನಿಂದನೆ ಕೃತ್ಯ ನಡೆದ ವೇಳೆ ಚಿತ್ರೀಕರಿಸಿದ್ದ 4 ಗಂಟೆ ವೀಡಿಯೋವನ್ನು ಸಿಐಡಿಗೆ ಸಲ್ಲಿಸಲಾಗಿತ್ತು.

ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿಸೆಂಬರ್‌ 19 ರಂದು ವಿಧಾನಪರಿಷತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌‍ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಮಾತಿನ ಚಕಮಕಿ ನಡುವೆ ಸಿಟಿ ರವಿ ಅವರು ಸಚಿವೆ ಲಕ್ಷೀ ಹೆಬ್ಬಾಳ್ಕರ್‌ ಅವರಿಗೆ ಅಸಂಸದೀಯ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಹಿರೇಬಾಗೇವಾಡಿ ಪೊಲೀಸ್‌‍ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

RELATED ARTICLES

Latest News