Thursday, May 2, 2024
Homeರಾಜ್ಯಕರ್ನಾಟಕದಲ್ಲೂ ಜಾರಿಯಾಗುತ್ತಾ ಸಿಎಎ..? ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..?

ಕರ್ನಾಟಕದಲ್ಲೂ ಜಾರಿಯಾಗುತ್ತಾ ಸಿಎಎ..? ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..?

ಬೆಂಗಳೂರು, ಮಾ.13- ಕೇಂದ್ರ ಸರ್ಕಾರ ಅಸೂಚಿಸಿರುವ ಸಿಎಎ ಜಾರಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎ ಬಗ್ಗೆ ಈವರೆಗೂ ಚರ್ಚೆಯಾಗಿಲ್ಲ. ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಹಾಗೂ ಸಂಪುಟದ ಇತರ ಸಚಿವರುಗಳು ಚರ್ಚೆ ನಡೆಸಿ, ಅದನ್ನು ಅಂಗೀಕರಿಸಬೇಕೊ ಅಥವಾ ತಿರಸ್ಕರಿಸಬೇಕೊ ಎಂಬ ಬಗ್ಗೆ ಸಂಪುಟದಲ್ಲಿ ತೀರ್ಮಾನಿಸಲಾಗುವುದು.

ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಸಿಎಎಯನ್ನು ಜಾರಿಗೊಳಿಸುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿಗಳು ಹೇಳುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ. ಆದರೆ ಯಾವ ರೀತಿ ಎಂದು ಸದ್ಯಕ್ಕೆ ಹೇಳಲಾಗುವುದಿಲ್ಲ ಎಂದರು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕಲಬುರಗಿ ಲೋಕಸಭಾ ಚುನಾವಣೆಯಿಂದ ಸ್ಪರ್ಧೆ ಮಾಡಿದ್ದಾದರೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಲ ಬರಲಿದೆ ಎಂದು ಹೇಳಿದರು.

ಖರ್ಗೆಯವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ಸ್ಪರ್ಧೆಯ ಬಗ್ಗೆ ಅವರೇ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು. ಇದರಲ್ಲಿ ನಾವು ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಅವರು ಯಾವುದೇ ತೀರ್ಮಾನ ತೆಗೆದುಕೊಂಡರೂ ನಾವು ಅವರ ಜೊತೆಯಲ್ಲಿರುತ್ತೇವೆ ಎಂದರು.

ಬ್ಯಾಡಗಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಗಲಭೆಗೆ ಸಂಬಂಧಪಟ್ಟಂತೆ 42 ಮಂದಿಯನ್ನು ಬಂಸಲಾಗಿದೆ. ಸಿಸಿಟಿವಿಯ ದೃಶ್ಯಾವಳಿಯನ್ನು ಪರಿಶೀಲಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಗಲಾಟೆಯಲ್ಲಿ ಭಾಗಿಯಾಗಿದ್ದ ಕೆಲವರು ಆಂಧ್ರ ಪ್ರದೇಶಕ್ಕೆ ಓಡಿಹೋಗಿದ್ದಾರೆ. ಕೆಲವರು ಅಲ್ಲಿಂದಲೇ ಬಂದಿರುವ ಮಾಹಿತಿ ಇದೆ.

ಮೆಣಸಿನಕಾಯಿ ಬೆಲೆ ಕುಸಿತದಿಂದಾಗಿ ಸಿಟ್ಟಾದ ರೈತರು ತತ್ಕ್ಷಣಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಗಲಭೆಯ ಹಿಂದೆ ವ್ಯವಸ್ಥಿತ ಪಿತೂರಿ ಇದೆಯೇ ಎಂಬುದನ್ನು ಪರಿಶೀಲಿಸುತ್ತಿದ್ದೇವೆ. ಬಂತರ ಪೈಕಿ ಪ್ರತಿಯೊಬ್ಬರನ್ನೂ ತಪಾಸಣೆಗೊಳಪಡಿಸುತ್ತಿದ್ದು, ಗಲಾಟೆಯಲ್ಲಿ ಅವರ ಪಾತ್ರ ಏನು ಎಂಬುದನ್ನು ಪತ್ತೆ ಹಚ್ಚುವ ಕೆಲಸವಾಗುತ್ತಿದೆ ಎಂದು ಹೇಳಿದರು.ಗಲಾಟೆಗೆ ಪ್ರಚೋದನೆ ಇರುವುದೂ ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

RELATED ARTICLES

Latest News