Thursday, September 19, 2024
Homeರಾಷ್ಟ್ರೀಯ | NationalBIG NEWS : 7 ದಿನಗಳಲ್ಲಿ ಭಾರತದಾದ್ಯಂತ ಸಿಎಎ ಜಾರಿ : ಶಂತನೂ ಠಾಕೂರ್

BIG NEWS : 7 ದಿನಗಳಲ್ಲಿ ಭಾರತದಾದ್ಯಂತ ಸಿಎಎ ಜಾರಿ : ಶಂತನೂ ಠಾಕೂರ್

ಕೋಲ್ಕತ್ತಾ,ಜ.29- ಮುಂದಿನ ಏಳು ದಿನಗಳಲ್ಲಿ ದೇಶದಾದ್ಯಂತ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಶಂತನೂ ಠಾಕೂರ್ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ಏಳು ದಿನಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಭಾರತದಾದ್ಯಂತ ಸಿಎಎ ಜಾರಿಗೆ ಬರಲಿದೆ ಎಂದು ನಾನು ಖಾತರಿ ನೀಡಬಲ್ಲೇ ಎಂದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಸಿಎಎ ಹೇಳಿಕೆಯಲ್ಲಿ ಹೇಳಿದ್ದನ್ನು ಬಂಗಾಳದ ಬಂಗಾವ್‍ನ ಬಿಜೆಪಿಯ ಲೋಕಸಭಾ ಸಂಸದ ಶಂತನೂ ಠಾಕೂರ್ ಪುನರುಚ್ಚರಿಸಿದ್ದಾರೆ. ಕಳೆದ ವರ್ಷ ಡಿಸೆಂಬರ್‍ನಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಿಎಎಯನ್ನು ಜಾರಿಗೆ ತರಲಿದೆ ಮತ್ತು ಅದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಪ್ರತಿಪಾದಿಸಿದ್ದರು. ಸಿಎಎಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಗುರಿಯಾಗಿಸಿ ಅವರ ಹೇಳಿಕೆಗಳು ಬಂದಿರುವುದು ವಿಶೇಷವಾಗಿದೆ.

ಬಿಜೆಪಿ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ : ಸಚಿವ ಖರ್ಗೆ ಕಿಡಿ

ಈ ತಿಂಗಳ ಆರಂಭದಲ್ಲಿ ಸಿಎಎ ನಿಯಮಗಳು ಕೇಂದ್ರದೊಂದಿಗೆ ಸಿದ್ಧವಾಗಿವೆ ಮತ್ತು ಲೋಕಸಭೆ ಚುನಾವಣೆಯ ಘೋಷಣೆಗೆ ಬಹಳ ಮುಂಚೆ ಸೂಚನೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಅರ್ಜಿದಾರರು ಪ್ರಯಾಣ ದಾಖಲೆಗಳಿಲ್ಲದೆ ಭಾರತವನ್ನು ಪ್ರವೇಶಿಸಿದ ವರ್ಷವನ್ನು ಘೋಷಿಸಬೇಕಾಗುತ್ತದೆ. ಅರ್ಜಿದಾರರಿಂದ ಯಾವುದೇ ದಾಖಲೆಯನ್ನು ಕೇಳಲಾಗುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

RELATED ARTICLES

Latest News