ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಕ್ಯಾಬ್ ಚಾಲಕ ಸಾವು..!
ಬೆಂಗಳೂರು,ಮಾ.31- ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಕ್ಯಾಬ್ ಚಾಲಕ ಪ್ರತಾಪ್ ಚಿಕಿತ್ಸೆ ಫಲಿಸದೆ ಮಧ್ಯರಾತ್ರಿ ಸಾವನ್ನಪ್ಪಿದ್ದಾರೆ. ರಾಮನಗರ ಮೂಲದ ಪ್ರತಾಪ್ ಅವರು ಉದ್ಯೋಗ ಅರಸಿಕೊಂಡು ಬೆಂಗಳೂರಿಗೆ ಬಂದು ಚಾಲಕ ವೃತ್ತಿ ಮಾಡಲು ಸಾಲ ಮಾಡಿ ಕಾರು ಖರೀದಿಸಿ ಅದರ ದುಡಿಮೆಯಿಂದಲೇ ಜೀವನ ನಿರ್ವಹಿಸುತ್ತಿದ್ದರು.
ಕೋವಿಡ್ನಿಂದಾಗಿ ಪ್ರತಾಪ್ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಕೆಎಸ್ಟಿಡಿಸಿ ಗುತ್ತಿಗೆ ಆಧಾರದಲ್ಲಿ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಚಾಲಕ ವೃತ್ತಿ ಮಾಡುತ್ತಿದ್ದ ಪ್ರತಾಪ್ ಅವರು ತಮಗೆ ಬಾಡಿಗೆ ಸಿಗುತ್ತಿಲ್ಲ ಎಂದು ಸಹ ಚಾಲಕರೊಂದಿಗೆ ಬೇಸರ ವ್ಯಕ್ತಪಡಿಸಿದ್ದರು.
ಈ ನಡುವೆ ನಿನ್ನೆ ವಿಮಾನ ನಿಲ್ದಾಣದ ಟ್ಯಾಕ್ಸಿ ನಿಲುಗಡೆ ಸ್ಥಳದಲ್ಲಿ ತಮ್ಮ ಕಾರಿನೊಳಗೆ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಪ್ರತಾಪ್ ಅವರನ್ನು ಭದ್ರತಾ ಸಿಬ್ಬಂದಿ ಕಾರಿನ ಗಾಜು ಒಡೆದು ರಕ್ಷಿಸಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರಾದರೂ ಚಿಕಿತ್ಸೆ ಫಲಿಸದೆ ಮಧ್ಯರಾತ್ರಿ ಮೃತಪಟ್ಟಿದ್ದಾರೆ. ಈ ಬಗ್ಗೆ ಅಂತಾರಾಷ್ಟ್ರೀಯ ಏರ್ಪೆÇೀರ್ಟ್ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.