ಸಂಕ್ರಾಂತಿ ವೇಳೆಗೆ ಸಂಪುಟ ವಿಸ್ತರಣೆ

Social Share

ಬೆಂಗಳೂರು,ಡಿ.25- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ನವದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮಾತುಕತೆ ನಡೆಸಲಿದ್ದಾರೆ. ಈ ಬಾರಿ ಸಚಿವ ಸಂಪುಟ ವಿಸ್ತರಣೆ/ಪುನಾರಚನೆ ಖಚಿತ ಎನ್ನಲಾಗುತ್ತಿದ್ದು, ದೆಹಲಿ ಭೇಟಿ ಹಿಂದಿಗಿಂತಲೂ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಬೇಕೆಂದು ಹಲವಾರು ಆಕಾಂಕ್ಷಿಗಳು ಸಿಎಂ ಮೇಲೆ ಒತ್ತಡ ಹಾಕಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಸೂಚನೆ ಮೇರೆಗೆ ಬೊಮ್ಮಾಯಿ ದೆಹಲಿಗೆ ತೆರಳುತ್ತಿದ್ದು ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಕುರಿತಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ.

ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದು ಈವರೆಗೂ ಖಚಿತಪಟ್ಟಿಲ್ಲವಾದರೂ ಎರಡರಲ್ಲಿ ಯಾವುದಾದರೊಂದು ನಡೆಯಲಿದೆ ಎಂದು ಮೂಲಗಳು ಖಚಿತಪಡಿಸಿವೆ. ಈ ಹಿಂದೆ ಬೊಮ್ಮಾಯಿ ಅವರು ನಾಲ್ಕೈದು ಬಾರಿ ದೆಹಲಿಗೆ ತೆರಳಿದ್ದಾರೂ ವರಿಷ್ಠರಿಂದ ಹಸಿರುನಿಶಾನೆ ಸಿಕ್ಕಿರಲಿಲ್ಲ. ಸಮಯ ಬಂದಾಗ ಸಂದೇಶ ರವಾನಿಸುತ್ತೇವೆ ಎಂದಷ್ಟೇ ಹೇಳಿದ್ದರು.

ಚಳಿಗಾಲದ ಚಂಡಮಾರುತಕ್ಕೆ ಅಮೆರಿಕ ತತ್ತರ, 18 ಮಂದಿ ಸಾವು

ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮುಗಿದಿರುವುದರಿಂದ ಇದೀಗ ವರಿಷ್ಠರು ಕರ್ನಾಟಕದತ್ತ ಗಮನಹರಿಸಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ರಮೇಶ್ ಜಾರಕಿಹೊಳಿ ಅವರನ್ನು ಅವೇಶನ ನಡೆಯುತ್ತಿದ್ದ ಸಂದರ್ಭದಲ್ಲೇ ಭೇಟಿಯಾಗಿದ್ದ ಬೊಮ್ಮಾಯಿ ಅವರು ಶೀಘ್ರದಲ್ಲೇ ಶುಭ ಸುದ್ದಿ ನೀಡುವ ಸಂದೇಶವನ್ನು ರವಾನಿಸಿದ್ದರು.

ಮೂಲಗಳ ಪ್ರಕಾರ ಜನವರಿ ತಿಂಗಳ ಮೊದಲ ವಾರ ಇಲ್ಲವೇ 2ನೇ ವಾರದಲ್ಲಿ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನೇನು ವಿಧಾನಸಭೆ ಚುನಾವಣೆಗೆ ನಾಲ್ಕೇ ತಿಂಗಳು ಬಾಕಿ ಇರುವಂತೆ ಸಂಪುಟದಲ್ಲಿ ಖಾಲಿ ಇರುವ ಆರು ಸ್ಥಾನಗಳನ್ನು ಭರ್ತಿ ಮಾಡುವುದು ಇಲ್ಲವೇ ಕೆಲವರನ್ನು ಸಂಪುಟದಿಂದ ಕೈಬಿಟ್ಟು ಹೊಸಬರಿಗೆ ಅವಕಾಶ ಕಲ್ಪಿಸಿಕೊಡಬೇಕೆಂಬ ಬೇಡಿಕೆ ಇದೆ.

ಕಳೆದ 8 ತಿಂಗಳಲ್ಲಿ ತಿಮ್ಮಪ್ಪನ ಹುಂಡಿಗೆ ಹರಿದುಬಂದ ಕಾಣಿಕೆ ಎಷ್ಟು ಗೊತ್ತೇ..?

ಹಿಂದೆ ಸಂಪುಟದಲ್ಲಿ ಅವಕಾಶ ಸಿಗದಿರುವ ಜಿಲ್ಲೆಗಳು, ಜಾತಿ, ಪ್ರದೇಶವಾರು, ಸಂಘ ಪರಿವಾರದ ಹಿನ್ನಲೆ, ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಸಂಪುಟ ವಿಸ್ತರಣೆ ಮಾಡಬೇಕೆಂಬ ಕೂಗು ಹೆಚ್ಚಾಗಿದೆ.

ಅಂತಿಮವಾಗಿ ವರಿಷ್ಠರು ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಹೀಗಾಗಿ ಸಿಎಂ ಬೊಮ್ಮಾಯಿ ಅವರ ದೆಹಲಿ ಯಾತ್ರೆ ಈ ಬಾರಿಯಾದರೂ ಯಶಸ್ವಿಯಾಗುವುದೇ ಅಥವಾ ಮತ್ತೊಂದು ದಂಡ ಯಾತ್ರೆ ಆಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಕಾಡುತ್ತಿದೆ.

#CabinetExpansion, #Sankranti, #CMBommai,

Articles You Might Like

Share This Article