ಬೆಂಗಳೂರು,ಆ.25- ಮುಂಬರುವ ಮಳೆಗಾಲದ ಅಧಿವೇಶನವು ಸೆ.12ರಿಂದ 10 ದಿನಗಳ ಕಾಲ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು. ಸೆ.12ರಿಂದ 10 ದಿನಗಳ ಕಾಲ ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.
ತುಮಕೂರು ಜಿಲ್ಲೆ ಶಿರಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಸರ್ಕಾರ 5 ಲಕ್ಷ ರೂ. ಪರಿಹಾರ ನೀಡಿದೆ. ಗಾಯಾಳುಗಳಿಗೆ ಸರ್ಕಾರದ ವತಿಯಿಂದಲೇ ಚಿಕಿತ್ಸೆ ನೀಡಲಾಗುವುದು ಎಂದು ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಸಿಎಂ, ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ ಎಂದರು.