ಬೆಂಗಳೂರು, ಜೂ.20– ಅಮೆರಿಕ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡದೇ ಇದ್ದರೆ ನ್ಯಾಯಾಲಯದಲ್ಲಿ ಪ್ರಶ್ನಿಸುವಂತೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂರವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆಗೆ ಸಲಹೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಪಿ.ಚಿದಂಬರಂ, ಅಮೆರಿಕದಲ್ಲಿ ನಡೆಯುವ ಕೆಲ ಕಾರ್ಯಕ್ರಮಗಳಿಗೆ ಆಹ್ವಾನದ ಮೇರೆಗೆ ತೆರಳಲು ಪ್ರಿಯಾಂಕ್ ಖರ್ಗೆ ಮುಂದಾಗಿದ್ದರು. ಅಲ್ಲಿ ಬಂಡವಾಳ ಹೂಡಿಕೆದಾರರು ಹಾಗೂ ವಿವಿಧ ಕ್ಷೇತ್ರಗಳ ಪರಿಣಿತರ ಜೊತೆ ಚರ್ಚೆ ನಿಗದಿಯಾಗಿತ್ತು. ಆದರೆ ಪ್ರಿಯಾಂಕ್ ಖರ್ಗೆಯವರಿಗೆ ಅಮೆರಿಕ ಪ್ರವಾಸಕ್ಕೆ ಅನುಮತಿ ನೀಡದೆ ಭಾರೀ ನಿರಾಸೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಕೇಂದ್ರ ಸರ್ಕಾರ ತಕ್ಷಣವೇ ಉತ್ತರ ನೀಡಬೇಕು. ಆ ಉತ್ತರ ಸಮರ್ಪಕವಾಗಿಲ್ಲ ಎಂದಾದರೆ ಪ್ರಿಯಾಂಕ್ ಖರ್ಗೆಯವರು ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದಾಗಿದೆ.ಪ್ರತಿಯೊಬ್ಬರಿಗೂ ಪ್ರವಾಸ ಮಾಡುವ ಮತ್ತು ಮಾತನಾಡುವ ಸ್ವಾತಂತ್ರ್ಯ ಇದೆ. ಕೇಂದ್ರ ಸರ್ಕಾರ ಇದಕ್ಕೆ ಕಡಿವಾಣ ಹಾಕಲು ಸರ್ವಾಧಿಕಾರಿಯಂತೆ ವರ್ತಿಸುವುದು ಸರಿಯಲ್ಲ ಎಂದು ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ.
- ಪ್ರಿಯತಮನೊಂದಿಗೆ ಸೇರಿ ಪತಿ ಕೊಂದಿದ್ದ ಪತ್ನಿ : ಸಾಕ್ಷಿ ಹೇಳಿದ 3 ವರ್ಷದ ಮಗು
- ರೈಲ್ವೆ ಪ್ಲಾಟ್ಫಾರ್ಮ್ನಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ ಯೋಧನಿಗೆ ಸೇನೆ ಶ್ಲಾಘನೆ
- ಹಾವೇರಿ : ಹೃದಯಾಘಾತ ಲಾರಿ ಚಾಲಕ ಸಾವು
- ನಾಳೆ ಭಾರತ್ ಬಂದ್ : ಬ್ಯಾಂಕಿಂಗ್ ಸೇರಿದಂತೆ ದೇಶದಾದ್ಯಂತ ಅನೇಕ ಸೇವೆಗಳು ವ್ಯತ್ಯಯ
- ಡಿಕೆಶಿ ಸಿಎಂ ಆದರೆ ಸಾಕು, ನನಗೆ ಸಚಿವ ಸ್ಥಾನ ಬೇಡ : ಸಿ.ಪಿ.ಯೋಗೇಶ್ವರ್