ಲಗೇಜ್ ಆಟೋಗೆ ಕ್ಯಾಂಟರ್ ಡಿಕ್ಕಿ ,ಚಾಲಕ ಸಾವು

Social Share

ಬೆಂಗಳೂರು, ಫೆ.23- ಅತಿ ವೇಗವಾಗಿ ಬಂದ ಕ್ಯಾಂಟರ್ ವಾಹನವೊಂದು ಲಗೇಜ್ ಆಟೋಗೆ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಚಾಲಕನ ಮೇಲೆ ಕ್ಯಾಂಟರ್ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಮಲಾನಗರದ ನಿವಾಸಿ ಚಂದ್ರಪ್ಪ(54) ಮೃತಪಟ್ಟ ಗೂಡ್ಸ್ ಆಟೋ ಚಾಲಕ. ಇಂದು ಬೆಳಗ್ಗೆ 9.30ರ ಸುಮಾರಿನಲ್ಲಿ ಮಂಜುನಾಥ ನಗರದ ವೆಸ್ಟ್ ಆಫ್ ಕಾರ್ಡ್ ರೋಡ್‍ನ ಸರ್ವೀಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕ್ಯಾಂಟರ್ ವಾಹನವೊಂದು ಲಗೇಜ್‍ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ.

ಮಂಡ್ಯದಲ್ಲಿ ಭೀಕರ ಕೊಲೆ, ಬೆಚ್ಚಿಬಿದ್ದ ಜನ

ಡಿಕ್ಕಿ ರಭಸಕ್ಕೆ ಆಟೋ ಚಾಲಕ ಚಂದ್ರಪ್ಪ ರಸ್ತೆಗೆ ಬಿದ್ದಾಗ ಅವರ ಮೇಲೆಯೇ ಕ್ಯಾಂಟರ್ ಚಕ್ರ ಹರಿದ ಪರಿಣಾಮ ಅವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.

ಸುದ್ದಿ ತಿಳಿದು ವಿಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

canter, collision, auto, Driver killed,

Articles You Might Like

Share This Article