ಗಡಿ ವಿವಾದ ಕೆದಕಿದ ಮಹಾರಾಷ್ಟ್ರ : ಸಿಎಂ ಬೊಮ್ಮಾಯಿ ಆಕ್ರೋಶ

Social Share

ಬೆಂಗಳೂರು,ನ.22-ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವನ್ನು ಮುಂದಿಟ್ಟುಕೊಂಡು ನೆರೆ ರಾಜ್ಯ ಬೆಂಕಿ ಹಚ್ಚುವ ಕೆಲಸ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜಕೀಯ ಲಾಭಕ್ಕಾಗಿ ಮಹಾರಾಷ್ಟ್ರ ಸರ್ಕಾರ ಯಾವಾಗಲೂ ಗಡಿ ವಿವಾದ ವನ್ನು ಕೆಣಕಿ ರಾಜಕೀಯ ಲಾಭ ಪಡೆದುಕೊಳ್ಳಲು ಹುನ್ನಾರ ನಡೆಸುತ್ತದೆ. ಇದಕ್ಕೆ ನಮ್ಮ ಸರ್ಕಾರ ಅವಕಾಶ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಗಡಿ ವಿವಾದ ಮುಗಿದ ಅಧ್ಯಾಯವಾಗಿದ್ದರೂ ಪದೇ ಪದೇ ಕೆಣಕಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಸೌಹಾರ್ದಯುತ ವಾತಾವರಣ ಹಾಳುಗೆಡುವುದು ಅಲ್ಲಿನ ಸರ್ಕಾರದ ಉದ್ದೇಶವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮತದಾರರ ಪಟ್ಟಿ ಅಕ್ರಮ : ನಾಳೆ ಕಾಂಗ್ರೆಸ್‍ನಿಂದ ಆಯೋಗಕ್ಕೆ ದೂರು

ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ಏಕೀಕರಣ ಹೋರಾಟ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರಿಗೆ ಪಿಂಚಣಿ ಕೊಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ. ಯಾರ್ಯಾರೆಲ್ಲಾ ಹೋರಾಟ ಮಾಡಿದ್ದರೋ ಅವರೆಲ್ಲರಿಗೂ ಪಿಂಚಣಿ ನೀಡುತ್ತೇವೆ ಎಂದು ಸಿಎಂ ಘೋಷಣೆ ಮಾಡಿದರು.

ಈ ಹಿಂದೆ ಮಹಾರಾಷ್ಟ್ರದ ಜೆತ್ ತಾಲ್ಲೂಕು ತೀವ್ರ ಬರಗಾಲಕ್ಕೆ ತುತ್ತಾಗಿ ಕುಡಿಯುವ ನೀರು, ಆಹಾರದ ಸಮಸ್ಯೆ ಎದುರಾಗಿತ್ತು. ನಾವು ಮಾನವೀಯತೆ ದೃಷ್ಟಿಯಿಂದ ಅಲ್ಲಿನ ಜನರಿಗೆ ನೀರು, ಆಹಾರ ಪೊಟ್ಟಣ, ಹಾಸಿಗೆ, ಹೊದಿಕೆಗಳನ್ನು ಕಳುಹಿಸಿಕೊಟ್ಟಿದ್ದೆವು. ವ್ಯಾಜ್ಯ ಹಚ್ಚುವ ಕೆಲಸವನ್ನು ಈಗಲಾದರೂ ಮಹಾರಾಷ್ಟ್ರ ಸರ್ಕಾರ ನಿಲ್ಲಿಸಬೇಕೆಂದು ಎಚ್ಚರಿಸಿದರು.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಅಗ್ನಿಪರೀಕ್ಷೆಯಾಗಲಿರುವ ಪೂರ್ವಭಾವಿ ಸಭೆ

ನಮ್ಮ ಗಡಿ ಪ್ರಾಕಾರದಿಂದ ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಗಳಿಗೆ ವಿಶೇಷ ಅನುದಾನ ಕೊಡುವ ತೀರ್ಮಾನ ಮಾಡಿದ್ದೇವೆ. ಮಹಾರಾಷ್ಟ್ರದಲ್ಲಿದ್ದರೂ ಅಲ್ಲಿನ ಜನರೇ ಜೆತ್ ತಾಲ್ಲೂಕನ್ನು ಕರ್ನಾಟಕಕ್ಕೆ ಸೇರಿಸುವ ನಿರ್ಣಯವನ್ನೂ ಮಾಡಿದ್ದಾರೆ. ನಾವು ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಮಹಾರಾಷ್ಟ್ರದ ಈ ಬೇಡಿಕೆಗಳು ಅರ್ಥವಿಲ್ಲದ್ದು ಎಂದರು.

Capable, protect, state, border, CM Bommai, boundary, row, Maharashtra,

Articles You Might Like

Share This Article