ಡಿವೈಡರ್ ಹಾರಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರು, ನಾಲ್ವರು ಸಾವು

Spread the love

ನೆಲಮಂಗಲ,ಮಾ.13- ಸಿಫ್ಟ್ ಕಾರೊಂದು ಡಿವೈಡರ್‍ನಿಂದ ಹಾರಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ಸಮೀಪದ ಎಂಟಗಾನಹಳ್ಳಿ ಬಳಿ ಇಂದು ಬೆಳಗೆ ಸಂಭವಿಸಿದೆ. ಬೆಂಗಳೂರಿನ ಹೆಬ್ಬಾಳದ ಕೆಂಪಾಪುರದ ನಿವಾಸಿಗಳಾದ ಕಾವೇರಮ್ಮ(80), ರಶ್ಮಿ(50) ಹಾಗೂ ಹಿರಿಸಾವೆಯ ಶಿವಕುಮಾರ್(27), ಕಿರಣ(24) ಮೃತಪಟ್ಟವರು.

ಇಂದು ಬೆಳಗ್ಗೆ 8 ಗಂಟೆ ಸಮಯದಲ್ಲಿ ಹಿರಿಸಾವೆಯಿಂದ ಬೆಂಗಳೂರಿಗೆ ಬರುತ್ತಿದ್ದ ಸಿಫ್ಟ್ ಡಿಸೈರ್ ಕಾರು ಹಾಗೂ ಬೆಂಗಳೂರಿನಿಂದ ಮಡಿಕೇರಿಗೆ ಮದುವೆಗೆಂದು ಹೋಗುತ್ತಿದ್ದ ಇಕೋ ಕಾರಿಗೆ ಸಿಫ್ಟ್ ಕಾರು ರಸ್ತೆಯ ಡಿವೈಡರ್ ಹಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ಕಾರಿನಲ್ಲಿ ಇಬ್ಬರು ಇಬ್ಬರು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕೆಲಕಾಲ ಟ್ರಾಫಿಕ್‍ಜಾಮ್ ಉಂಟಾಗಿತ್ತು. ಸುದ್ದಿ ತಿಳಿದ ಕೂಡಲೆ ನೆಲಮಂಗಲ ಸಂಚಾರಿ ಹಾಗೂ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸ್ಥಳಕ್ಕೆ ಸಂಚಾರಿ ಠಾಣೆಯ ವೀರೇಂದ್ರ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook Comments