ಯಾದಗಿರಿ, ಜ.19- ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಹೆಡ್ ಕಾನ್ಸ್ಸ್ಟೇಬಲ್ಗಳು ಗಾಯಗೊಂಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೆಪೊಲೀಸ್ ಠಾಣೆಯ ಹೆಡ್ ಕಾನ್ಸ್ಸ್ಟೇಬಲ್ಗಳಾದ ಮಂಜುನಾಥ್, ನರೇಶ್, ಶ್ರೀನಿವಾಸ್ ಗಾಯಗೊಂಡವರು.
ಪ್ರಕರಣವೊಂದರ ಸಂಬಂಧ ಇವರು ಬಳ್ಳಾರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಅಶೋಕ್ ಸಿz್ದದ್ದಾಪುರ ಬಳಿ ಲಾರಿ ಓವರ್ ಟೆಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಹೆಡ್ ಕಾನ್ಸ್ಸ್ಟೇಬಲ್ಗಳು ಗಾಯಗೊಂಡಿದ್ದಾರೆ.
ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕುವತ್ತ ಭಾರತ ದಾಪುಗಾಲು
ತಕ್ಷಣ ಗಾಯಾಳುಗಳನ್ನು ಬಳ್ಳಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ರಾಂಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Car, collides, divider, Three, constables, injured,