Saturday, May 18, 2024
Homeರಾಜ್ಯಕಾರ್ತಿಕ್‌ ಗೌಡ ಮಲೇಷ್ಯಾಕ್ಕೆ ಹೋಗಿದ್ದಾನೆ ಎಂದ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರತ್ಯುತ್ತರ

ಕಾರ್ತಿಕ್‌ ಗೌಡ ಮಲೇಷ್ಯಾಕ್ಕೆ ಹೋಗಿದ್ದಾನೆ ಎಂದ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರತ್ಯುತ್ತರ

ಬೆಂಗಳೂರು, ಮೇ 8- ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಕಾರ್ತಿಕ್‌ ಗೌಡ ವಿದೇಶಕ್ಕೆ ಹೋಗಿದ್ದಾನೆ ಎಂದು ಮಾಜಿಮುಖ್ಯಮಂತ್ರಿ ಹಾಗೂ ಜೆಡಿಎಸ್‌‍ನಾಯ ಹೆಚ್‌.ಡಿ.ಕುಮಾರಸ್ವಾಮಿ ಬಿಂಬಿಸಿದ್ದರು. ಆದರೆ ಆತ ರಾಜ್ಯದಲ್ಲೇ ಇದ್ದು ಮಾಧ್ಯಮಗಳ ಮುಂದೆ ಹಾಜರಾಗಿದ್ದಾನೆ ಎಂದು ಕಾಂಗ್ರೆಸ್‌‍ ತಿಳಿಸಿದೆ.

ತನ್ನ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಬ್ರದರ್‌ ಸ್ವಾಮಿಗಳು ಹಗ್ಗವನ್ನು ತೋರಿಸಿ ಹಾವು ಎಂದು ನಂಬಿಸಲು ಸಾಹಸ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಲಾಗಿದೆ.

ಡ್ರೈವರ್‌ ಕಾರ್ತಿಕ್‌ ಗೌಡ ಮಲೇಷ್ಯಾಕ್ಕೆ ಹೋಗಿದ್ದಾನೆ, ಯಾರೋ ಕಳಿಸಿದ್ದಾರೆ ಎಂದು ಕುಮಾರಸ್ವಾಮಿ ಬಾಯಿ ಬಡಿದುಕೊಂಡಿದ್ದರು. ಆದರೆ ಕಾರ್ತಿಕ್‌ ಗೌಡ ಬಳಿ ಪಾಸ್‌‍ರ್ಪೋರ್ಟ್‌ ಇಲ್ಲವಂತೆ ಹಾಗೂ ಕಾರ್ತಿಕ್‌ ಗೌಡ ರಾಜ್ಯದಲ್ಲೇ ಇದ್ದು ಚಾನಲ್‌ ಗಳಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್‌‍ ಸ್ಪಷ್ಟ ಪಡಿಸಿದೆ.

ಬ್ರದರ್‌ ಸ್ವಾಮಿಯ ಸುಳ್ಳಿನ ಫ್ಯಾಕ್ಟರಿ ಜೊತೆಗೆ ಬಿಜೆಪಿಯ ಫೇಕ್‌ ಫ್ಯಾಕರಿಯೂ ಸೇರಿ ಸುಳ್ಳಿನ ಸಾಮ್ರಾಜ್ಯ ಕಟ್ಟಲು ಹೊರಟಿದ್ದಾರೆ ಎಂದು ಕಾಂಗ್ರೆಸ್‌‍ ವಾಗ್ದಾಳಿ ನಡೆಸಿದೆ.

RELATED ARTICLES

Latest News