ಚಿತ್ರದುರ್ಗದಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿ ಕಾರು, ಸ್ಥಳದಲ್ಲೇ ಮೂವ ಸಾವು

Social Share

ಚಿತ್ರದುರ್ಗ, ಅ.25- ವೇಗವಾಗಿ ಬಂದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಪ್ರವಾಸಿ ಮಂದಿರದ ಮುಂಭಾಗದಲ್ಲಿ ತಡರಾತ್ರಿ ನಡೆದಿದೆ.

ಚಳ್ಳಕೆರೆ ತಾಲೂಕಿನ ಕಾಮಸಮುದ್ರ ಗ್ರಾಮದ ಕಾರು ಚಾಲಕ ಮನು (21), ಚಿತ್ರದುರ್ಗ ತಾಲೂಕಿನ ಮೆದೇಹಳ್ಳಿ ಗ್ರಾಮದ ಹರೀಶ್ (25), ಸಚಿನ್ (25) ಮೃತಪಟ್ಟ ದುರ್ದೈವಿಗಳು.

ಇಂಡಿಕಾ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದು, ಪ್ರವಾಸಿ ಮಂದಿರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹರ್ಷ ಕುಟುಂಬದವರಿಗೆ ಕೊಲೆ ಬೆದರಿಕೆ, ಶಿವಮೊಗ್ಗದಲ್ಲಿ ಮತ್ತೆ ಆತಂಕ

ಕಾರಿನಲ್ಲಿ ಎಲ್ಲಿಗೆ ತೆರಳುತ್ತಿದ್ದರು ಎಂಬುದರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಹಬ್ಬದ ದಿನವೇ ಈ ಅವಘಡ ನಡೆದಿದ್ದು, ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ.

Articles You Might Like

Share This Article