ಹಾಸನ,ಫೆ.2- ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಾವ, ಸೊಸೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅರಸೀಕೆರೆ ತಾಲೂಕಿನ ಯಾದಲಪುರ ಬೈಪಾಸ್‌ನಲ್ಲಿ ನಡೆದಿದೆ. ಗಂಗಾಧರನಾಯಕ (50), ಪ್ರಿಯಾ (30) ಮೃತಪಟ್ಟ ದುರ್ದೈವಿಗಳು.
ಬೆಂಗಳೂರು ಕಡೆಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಕಾರು ಅರಸೀಕೆರೆಯಿಂದ ಮುರುಂಡಿ ಕಡೆಗೆ ತೆರಳುತ್ತಿದ್ದ ಸ್ಕೂಟರ್‌ಗೆ ರಸ್ತೆ ತಿರುವಿನಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ನಲ್ಲಿದ್ದ ಇವರು ರಸ್ತೆಗೆ ಉರುಳಿಬಿದ್ದುದ್ದರಿಂದ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.