ಶಿವಮೊಗ್ಗ, ಡಿ.11- ಕಾರು- ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕು ಕಲ್ಲಾಪುರ ಗ್ರಾಮದ ಬಳಿ ಇಂದು ಬೆಳಗಿನ ಜಾವ ನಡೆದಿದೆ.
ಕಾರ್ತಿಕ್(21), ವಿವೇಕ್(22) ಹಾಗೂ ಮೋಹನ್(21) ಸ್ಥಳದಲ್ಲಿಯೇ ಮೃತಪಟ್ಟ ದುರ್ದೈವಿಗಳು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರುದ್ರೇಶ್ ಎಂಬುವವರನ್ನು ಇಲ್ಲಿನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಪಟ್ಟವರು ದಾವಣಗೆರೆ ಕಾಲೇಜೊಂದರ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.
ಕಾಂಗ್ರೆಸ್‍ಗೆ ಕಂಟಕವಾದ AAP ಮತ್ತು AIMIM
ಶಿವಮೊಗ್ಗದಿಂದ ಸವಳಂಗ ಮೂಲಕ ದಾವಣಗೆರೆ ಕಡೆ ಹೊರಟಿದ್ದ ಕಾರು ಸವಳಂಗ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಮೆಕ್ಕೆ ಜೋಳ ತುಂಬಿದ ಲಾರಿ ನಡುವೆ ಅಪಘಾತ ಉಂಟಾಗಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.
ಶರ್ಮಿಳಾ ಅನಿರ್ದಿಷ್ಟಾವಧಿ ಉಪವಾಸಕ್ಕೆ ಬ್ರೇಕ್ : ಆಸ್ಪತ್ರೆಗೆ ಸ್ಥಳಾಂತರಿಸಿದ ಪೊಲೀಸರು
ಲಾರಿ ಚಾಲಕ ಪರಾರಿಯಾಗಿದ್ದು, ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.
car-lorry collision, 3 students killed,