Friday, April 4, 2025
Homeಬೆಂಗಳೂರುಆಟವಾಡುತ್ತಿದ್ದ ಮಗು ಮೇಲೆ ಹರಿದ ಕಾರು

ಆಟವಾಡುತ್ತಿದ್ದ ಮಗು ಮೇಲೆ ಹರಿದ ಕಾರು

ಬೆಂಗಳೂರು, ಮೇ 26- ಕಾರು ಗುದ್ದಿದ ಪರಿಣಾಮ ಮನೆ ಮುಂದೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ನಗರದ ಹೊರವಲಯದ ಕಗ್ಗಲಿಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ನಾಗಮಣಿ (6) ಅಪಘಾತದಲ್ಲಿ ಮೃತಪಟ್ಟ ಬಾಲಕಿ.

ಈಕೆ ನಿನ್ನೆ ಸಂಜೆ 6 ಗಂಟೆ ಸಮಯದಲ್ಲಿ ಬನ್ನೇರುಘಟ್ಟ ರಸ್ತೆಯಲ್ಲಿರುವ ತಮ ಮನೆಯ ಮುಂದೆ ಆಟವಾಡುತ್ತಿದ್ದಳು. ಆ ಸಂದರ್ಭದಲ್ಲಿ ಪಕ್ಕದ ಮನೆಯವರು ಮನೆಯಿಂದ ಕಾರನ್ನು ಹೊರಗೆ ತೆಗೆದುಕೊಂಡು ಬಂದಾಗ ಈಕೆಗೆ ಗುದ್ದಿದ ಪರಿಣಾಮ ತೀವ್ರ ಗಾಯಗೊಂಡ ಬಾಲಕಿ ಮೃತಪಟ್ಟಿದ್ದಾಳೆ.

ಸುದ್ದಿ ತಿಳಿದ ಕಗ್ಗಲಿಪುರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಕಾರನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.ಕಾರು ಚಾಲನೆಯನ್ನು ಕಲಿಯಲು ಹೋಗಿ ಮಹಿಳೆಯೊಬ್ಬರು ಈ ಅಪಘಾತವೆಸಗಿದ್ದಾರೆ ಎಂದು ಶಂಕಿಸಲಾಗಿದೆ.

RELATED ARTICLES

Latest News