Wednesday, January 15, 2025
Homeರಾಜ್ಯಸುವರ್ಣಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನಿಸಿದವರ ಪ್ರಕರಣ ದಾಖಲು

ಸುವರ್ಣಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನಿಸಿದವರ ಪ್ರಕರಣ ದಾಖಲು

Case registered against those who attempted to attack C.T. Ravi at Suvarna Soudha

ಬೆಳಗಾವಿ,ಡಿ.23- ಡಿ.19 ರಂದು ಬೆಳಗಾವಿ ಸುವರ್ಣ ಸೌಧದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಿ.ಟಿ.ರವಿ ಅವರಿಗೆ ಜೀವ ಬೆದರಿಕೆ ಹಾಕಲಾಗಿದ್ದು, ಹಲ್ಲೆಕೋರರು ಅವರನ್ನು ಹತ್ಯೆ ಮಾಡುವ ಉದ್ದೇಶ ಹೊಂದಿದ್ದರು ಎಂದು ಆರೋಪಿಸಿ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸ್‌‍ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳ ವಿರುದ್ಧ ಬಿಎನ್‌ಎಸ್‌‍ 189(2), 191(2), 190, 126(2), 352, ಮತ್ತು 351(2) ಸೇರಿದಂತೆ ಕಾನೂನಿನ ವಿವಿಧ ವಿಭಾಗಗಳ ಅಡಿಯಲ್ಲಿ ದೂರನ್ನು ದಾಖಲಿಸಲಾಗಿದೆ.

ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷೀ ಹೆಬ್ಬಾಳ್ಕರ್‌ ವಿರುದ್ಧ ಸಿ.ಟಿ.ರವಿ ಅವರ ಆಕ್ಷೇಪಾರ್ಹ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ.ಆರಂಭಿಕವಾಗಿ ಸಿ.ಟಿ.ರವಿ ಅವರ ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರಾದ ಎಂಎಲ್ಸಿ ಡಿ.ಎಸ್‌‍.ಅರುಣ್‌‍, ಪೊ.ಎಸ್‌‍.ವಿ.ಸಂಕನೂರ ಅವರು ಈ ಹಿಂದೆ ಗೃಹ ಇಲಾಖೆ ಕಾರ್ಯದರ್ಶಿಗೆ ದೂರು ನೀಡಿದ್ದರು. ಅಂತಿಮವಾಗಿ ಕಿಶೋರ ಬಿ.ಆರ್‌ ಅವರು ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

RELATED ARTICLES

Latest News