Saturday, September 23, 2023
Homeಆರೋಗ್ಯ / ಜೀವನಶೈಲಿಜು.10ರಂದು 'ಅಕ್ಕಿ ಜೊತೆ ರೊಕ್ಕ' ಯೋಜನೆಗೆ ಚಾಲನೆ

ಜು.10ರಂದು ‘ಅಕ್ಕಿ ಜೊತೆ ರೊಕ್ಕ’ ಯೋಜನೆಗೆ ಚಾಲನೆ

- Advertisement -

ಬೆಂಗಳೂರು, ಜು.5- ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಯ ಬದಲಾಗಿ ಹಣ ನೀಡುವ ಯೋಜನೆಯನ್ನು ಜುಲೈ 10 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.ಅಂದು ಬೆಳಿಗ್ಗೆ ವಿಧಾನಸೌಧದ ಬ್ಯಾಂಕ್ವೆಟ್‍ಹಾಲ್‍ನಲ್ಲಿ ಕೂಲಿಕಾರ್ಮಿಕರ ಜೊತೆ ಸಂವಾದ ನಡೆಸಿ ಸರ್ಕಾರದ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಬಳಿಕ ಸಂಜೆ ಅನ್ನಭಾಗ್ಯ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

- Advertisement -

ಬಹುನಿರೀಕ್ಷಿತ ಅನ್ನಭಾಗ್ಯ ಯೋಜನೆಯಡಿ ರಾಜ್ಯಸರ್ಕಾರ 5 ಕೆ.ಜಿ. ಸೇರಿ ಒಟ್ಟು 10 ಕೆ.ಜಿ. ಅಕ್ಕಿ ನೀಡುವುದಾಗಿ ಪ್ರಕಟಿಸಿತ್ತು. ಆದರೆ ಕೇಂದ್ರಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ ಮತ್ತು ಹಲವು ರಾಜ್ಯಗಳಲ್ಲಿ ಪ್ರಯತ್ನ ಮಾಡಿದರೂ ಕೂಡ ಅನ್ನಭಾಗ್ಯ ಯೋಜನೆಯಡಿ ನೀಡಲು ಅಗತ್ಯವಾದ 2.8 ಲಕ್ಷ ಮೆಟ್ರಿಕ್ ಟನ್ ಲಭ್ಯವಾಗುತ್ತಿಲ್ಲ.

ಅನುಮಾನ ಮೂಡಿಸಿದೆ ಅಧಿವೇಶನದಲ್ಲಿ ಕಾಂಗ್ರೆಸ್ ಮೌನ

ಈ ಹಿನ್ನೆಲೆಯಲ್ಲಿ ಪ್ರತಿ ಕೆ.ಜಿ. ಗೆ ಕೇಂದ್ರ ಸರ್ಕಾರ ನಿಗದಿಪಡಿಸಿರುವಂತೆ 34 ರೂ.ಗಳ ಹಣದಂತೆ 5 ಕೆ.ಜಿ.ಗೆ 170 ರೂ.ಗಳನ್ನು ಬಿಪಿಎಲ್ ಕಾರ್ಡ್‍ನ ಕುಟುಂಬದ ಸದಸ್ಯರಿಗೆ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ಲಭ್ಯವಿರುವ ಪಡಿತರ ಚೀಟಿದಾರರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಲಿದೆ. ಜು.7ರಂದು ಬಜೆಟ್ ಮಂಡನೆ ಮಾಡಲಿರುವ ಮುಖ್ಯಮಂತ್ರಿಗಳು, ಅದಕ್ಕೂ ಮುನ್ನ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಸಿ ಅಭಿಪ್ರಾಯ ಪಡೆಯಲು ಮುಂದಾಗಿದ್ದಾರೆ.

#FreeRice, #CashwithRice, Siddaramaiah, #CongressGovt, #CongressGuarantee,

- Advertisement -
RELATED ARTICLES
- Advertisment -

Most Popular