ಗ್ರಾಮೀಣ ವಿದ್ಯಾರ್ಥಿಗಳಿಗೆ ಐಎಎಸ್/ ಕೆಎಎಸ್ ಉಚಿತ ತರಬೇತಿಗೆ

ಮಾಲೂರು, ಸೆ.18- ಬಡವ, ರೈತರ ಹಾಗೂ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಐಎಎಸ್/ ಕೆಎಎಸ್ ಅಧ್ಯಯನ ಮಾಡಲು ನೆರವಾಗುವ ಸನ್ಮಿತ್ರರ ಸಹಕಾರದಿಂದ ಕೋಲಾರದಲ್ಲಿ ಆರಂಭಿಸಲಾಗಿರುವ ಅಕಾಡೆಮಿಯಲ್ಲಿ ಉಚಿತವಾಗಿ ಎಲ್ಲ ಸೌಲಭ್ಯ ಬಳಸಿಕೊಂಡು ಉನ್ನತ ಹುದ್ದೆ ಪಡೆಯುವ ಅವಕಾಶ ಕಲ್ಪಿಸಲಾಗಿದೆ ಎಂದು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಕರೆ ನೀಡಿದರು. ತಾಲೂಕು ಒಕ್ಕಲಿಗರ ನೌಕರರ ಸಂಘದ ಹಮ್ಮಿಕೊಂಡಿದ್ದ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರದಲ್ಲಿ ಮಾತನಾಡಿದ ಅವರು ಅಕಾಡೆಮಿಯಲ್ಲಿ ಅಧ್ಯಯನಕ್ಕೆ ಪೂರಕ ಸಾಮಗ್ರಿ ಒದಗಿಸುವಲ್ಲಿ ನೆರವಾಗುವ ಖ್ಯಾತ […]

ಲಿಮ್ಕಾ ದಾಖಲೆ ಬರೆದ ಬೃಹತ್ ತ್ರಿವರ್ಣ ಧ್ವಜ

ಕೋಲಾರ, ಆ.16- ಸ್ವಾತಂತ್ರ್ಯದ 75 ಸಂವತ್ಸರಗಳನ್ನು ಪೂರೈಸಿದ ಸಂಭ್ರಮದಲ್ಲಿ ಜಿಲ್ಲೆಯಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶಿಸಿ ಲಿಮ್ಕಾ ಪುಸ್ತಕದಲ್ಲಿ ದಾಖಲೆ ನಿರ್ಮಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೋಲಾರ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳ ಹರ್ ಘರ್ ತಿರಂಗಾ ಅಭಿಯಾನದ ಕರೆಗೆ ಓಗೊಟ್ಟು ಸಂಸದ ಎಸ್.ಮುನಿಸ್ವಾಮಿ ಅವರ ನೇತೃತ್ವದಲ್ಲಿ ದೇಶದ ಅತಿ ದೊಡ್ಡ ರಾಷ್ಟ್ರಧ್ವಜವನ್ನು ಕ್ರೀಡಾಂಗಣದ ಉದ್ದಗಲಕ್ಕೂ ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ರಕ್ಷಣಾ ಇಲಾಖೆಯ ಸೇನಾ ಹೆಲಿಕಾಪ್ಟರ್‍ನಿಂದ ಪುಷ್ಪವೃಷ್ಟಿ ಸಲ್ಲಿಸಲಾಯಿತು.ಆ ಕ್ಷಣದಲ್ಲಿ ಕ್ರೀಡಾಂಗಣದಲ್ಲಿ […]

13 ಸಾವಿರ ಮೀಟರ್ ಬಟ್ಟೆಯ ಬೃಹತ್ ರಾಷ್ಟ್ರಧ್ವಜ

ಕೋಲಾರ,ಆ.15-ದೇಶಕ್ಕೆ ಸ್ವಾತಂತ್ರ್ಯ ಬಂದು 75 ಸಂವತ್ಸರ ಕಳೆದು ಅಮೃತ ಮಹೋತ್ಸವ ಆಚರಿಸುತ್ತಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ ಜನತೆಯೊಂದಿಗೆ ಸರ್ಕಾರ ಸದಾ ಇರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹೇಳಿದರು.ನಗರದ ಸರ್ ಎಂ.ವಿ.ಕ್ರೀಡಾಂಗಣದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಪಥ ಸಂಚಲನದ ವಂದನೆ ಸ್ವೀಕರಿಸಿ ಜನತೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ದೇಶವನ್ನು ಪರಕೀಯರ ಆಳ್ವಿಕೆಯಿಂದ ತಪ್ಪಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನು ಸ್ಮರಿಸಿ ಶುಭಾಶಯ ಕೋರಿದರು. ಜಿಲ್ಲೆಯ ಕೃಷಿ, ಪಶುಸಂಗೋಪನೆ, ರೇಷ್ಮೆ ಉದ್ಯಮವನ್ನೇ ನಂಬಿದ್ದ ಜನತೆಯು ಇದೀಗ ಕೈಗಾರಿಕೆಗಳಿಗೆ […]

ಅಗ್ನಿವೀರರಿಗೆ ಧೈರ್ಯ ತುಂಬಿದ ಎಸ್‍ಪಿ

ಕೋಲಾರ, ಜು.21- ಸೈನ್ಯಕ್ಕೆ ಸೇರಲು ಬಯಸಿದ ಅಗ್ನಿವೀರರಿಗೆ ತರಬೇತಿ ನಡೆಯುತ್ತಿರುವ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ದೇವರಾಜ್ ಭೇಟಿ ನೀಡಿ ಸೂರ್ತಿ ತುಂಬಿದರು. ನಗರದ ರೈಲ್ವೆ ನಿಲ್ದಾಣ ಸಮೀಪದ ಮೈದಾನದಲ್ಲಿ ಕೋಲಾರ ಸೋರ್ಟ್ ಕ್ಲಬ್ ವತಿಯಿಂದ ಅಗ್ನಿವೀರರಿಗೆ 20 ದಿನಗಳಿಂದ ಉಚಿತ ತರಬೇತಿ ನೀಡಲಾಗುತ್ತಿದ್ದು, ಇಂದು ಬೆಳಗ್ಗೆ ಎಸ್‍ಪಿ ದೇವರಾಜ್ ಅವರು ಭೇಟಿ ನೀಡಿ ಕವಾಯತುಗಳನ್ನು ವೀಕ್ಷಿಸಿದ ನಂತರ ಅಗ್ನಿವೀರರಿಗೆ ಸೂರ್ತಿ ತುಂಬಿ ಧೈರ್ಯದ ಸಲಹೆಗಳನ್ನು ನೀಡಿ ಬೆನ್ನು ತಟ್ಟಿ ಪ್ರೋತ್ಸಾಹಿಸಿದರು. ಅಗ್ನಿವೀರರಿಗೆ ನಿವೃತ್ತ ಸೈನಿಕರಾದ ಸುರೇಶ್, ಕೃಷ್ಣಮೂರ್ತಿ […]

ಪೊಲೀಸರು ಬಲೆಗೆ ಬಿದ್ದ ನಕಲಿ ಎಸಿಬಿ ಅಧಿಕಾರಿಗಳು

ಕೋಲಾರ, ಜು.19- ಎಸಿಬಿ ಅಧಿಕಾರಿಗಳೆಂದು ಬೆದರಿಸಿ ಸುಲಿಗೆ ಮಾಡುತ್ತಿದ್ದ ಮೂವರನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕೋಡಿಯ ಸಾದಲಗ ಮೂಲದ ಮುರಿಗಪ್ಪ, ಸಕಲೇಶಪುರ ಮೂಲದ ರಜನಿಕಾಂತ್, ಮಹಾರಾಷ್ಟ್ರ ಕೊಲ್ಲಾಪುರ ಮೂಲದ ರಾಜೇಶ್ ಬಂಧಿತ ಆರೋಪಿಗಳು. ಬಂಧಿತ ಆರೋಪಿ ಮುರಿಗಪ್ಪ 2008ರಲ್ಲಿ ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಪೊಲೀಸ್ ಸೇವೆಯಿಂದ ವಜಾಗೊಳಿಸಲಾಗಿತ್ತು ಎಂದು ತಿಳಿದುಬಂದಿದೆ. ಕೋಲಾರದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ನಾರಾಯಣಗೌಡ ಎಂಬುವವರಿಗೆ ತಾವು ಎಸಿಬಿ ಅಧಿಕಾರಿಗಳು ಎಂದು ಕರೆ ಮಾಡಿ ನಿಮ್ಮ ಮೇಲೆ ದೂರು ಬಂದಿದೆ. ಹಣ […]

ಐಟಿ ಅಧಿಕಾರಿಗಳ ಸೋಗಿನಲ್ಲಿ 1 ಕೆಜಿ ಚಿನ್ನ, 25 ಲಕ್ಷ ನಗದು ಡಕಾಯಿತಿ

ಕೋಲಾರ,ಮಾ.1- ಆದಾಯ ತೆರಿಗೆ ಅಧಿಕಾರಿಗಳ ಸೋಗಿನಲ್ಲಿ ಬಂದ ಆರು ಮಂದಿ ಡಕಾಯಿತರು ಎಪಿಎಂಸಿ ಮಾಜಿ ಅಧ್ಯಕ್ಷರ ಮನೆಗೆ ನುಗ್ಗಿ ಪಿಸ್ತೂಲು, ಮಾರಕಾಸ್ತ್ರ ತೋರಿಸಿ ಬೆದರಿಸಿ 25 ಲಕ್ಷ ನಗದೂ ಸೇರಿದಂತೆ 45 ಲಕ್ಷ ಮೌಲ್ಯದ 1 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಕೋಲಾರದ ಸಿ.ಬೈರೇಗೌಡನಗರ(ಬೆಮೆಲ್ ಲೇಔಟ್)ದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ರಮೇಶ್ ಅವರ ಮನೆಯಲ್ಲಿ ಈ ಡಕಾಯಿತಿ ನಡೆದಿದೆ.ಎರಡು ಅಂತಸ್ತಿನ ಮನೆಯ ಮೊದಲನೆ ಮಹಡಿಯಲ್ಲಿ ಪತ್ನಿ, ಮಗನೊಂದಿಗೆ […]