ವೋಟರ್ ಡೇಟಾ ಹಗರಣ : ಇಬ್ಬರು ಐಎಎಸ್ ಅಧಿಕಾರಿಗಳಿಗೆ ಮತ್ತೆ ಡ್ರಿಲ್

ಬೆಂಗಳೂರು,ಡಿ.7- ಚಿಲುಮೆ ಸಂಸ್ಥೆಯ ಮತದಾರರ ವೈಯಕ್ತಿಕ ಮಾಹಿತಿ ಕಳುವು ಪ್ರಕರಣದಿಂದ ಅಮಾನತುಗೊಂಡಿರುವ ಇಬ್ಬರು ಐಎಎಸ್ ಅಧಿಕಾರಿಗಳನ್ನು ಇಂದು ಮತ್ತೊಮ್ಮೆ ಪೊಲೀಸರು ವಿಚಾರಣೆ ನಡೆಸುವ ಸಾಧ್ಯತೆಗಳಿವೆ. ಪ್ರಕರಣ ಬೆಳಕಿಗೆ ಬಂದ ನಂತರ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾಗಿದ್ದ ಶ್ರೀನಿವಾಸ್ ಹಾಗೂ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಆರೋಪಕ್ಕೆ ಗುರಿಯಾಗಿದ್ದ ಇಬ್ಬರು ಐಎಎಸ್ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರೂ ಇಬ್ಬರು ವಿಚಾರಣೆಗೆ ಹಾಜರಾಗಿರಲಿಲ್ಲ. ಸಿದ್ಧಾಂತ ಮರೆತವರಿಗೆ ಬಿಸಿ ಮುಟ್ಟಿಸಲು ವ್ಯೂಹ ರಚಿಸಿದ […]

ಸಿದ್ರಾಮುಲ್ಲಾಖಾನ್ ನಾಮಕರಣಕ್ಕೆ ಬೇಸರವಿಲ್ಲ: ಸಿದ್ದರಾಮಯ್ಯ

ಬೆಂಗಳೂರು,ಡಿ.7- ಮುಖ್ಯಮಂತ್ರಿಯಾಗಿ ಜನರಿಗಾಗಿ ಮಾಡಿರುವ ಸೇವೆಯನ್ನು ಗುರುತಿಸಿ ಬಹಳಷ್ಟು ಜನ ನನ್ನನ್ನು ಅನ್ನ ರಾಮಯ್ಯ’, ರೈತರಾಮಯ್ಯ, ಕನ್ನಡರಾಮಯ್ಯ, ದಲಿತರಾಮಯ್ಯ ಎಂದೆಲ್ಲಾ ಕರೆಯುತ್ತಾರೆ. ಅದೇ ರೀತಿ ಮುಸ್ಲಿಮ್ ಸಮುದಾಯಕ್ಕೆ ನಾನು ಮಾಡಿರುವ ಕೆಲಸವನ್ನು ಗುರುತಿಸಿ ನನ್ನನ್ನುಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಅದಕ್ಕೂ ಖುಷಿಪಡುವೆ ಎಂದಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಸಿದ್ರಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವ ಬಗ್ಗೆ ನನಗೇನು ಬೇಸರವಿಲ್ಲ. ಮುಸ್ಲಿಮ್ ಕುಟುಂಬದಲ್ಲಿ ಹುಟ್ಟಿ ಗೋವಿಂದ ಭಟ್ಟರ ಶಿಷ್ಯನಾಗಿ ಈಗಲೂ ನಮ್ಮ ಆತ್ಮಸಾಕ್ಷಿಯನ್ನು ಎಚ್ಚರಿಸುತ್ತಲೇ […]

ಸಿದ್ಧಾಂತ ಮರೆತವರಿಗೆ ಬಿಸಿ ಮುಟ್ಟಿಸಲು ವ್ಯೂಹ ರಚಿಸಿದ ಕಾಂಗ್ರೆಸ್

ಬೆಂಗಳೂರು,ಡಿ.7- ರಾಜ್ಯ ಕಾಂಗ್ರೆಸ್‍ನಲ್ಲಿ ನಾಯಕತ್ವದ ಗೊಂದಲ ಸೃಷ್ಟಿಸಿ, ವ್ಯಕ್ತಿಪೂಜೆ ಮಾಡಿದ ನಾಯಕರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಹಂತದ ಟಿಕೆಟ್ ಘೋಷಣೆ ವೇಳೆ ಕೈ ಕೊಡಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ. ರಾಜ್ಯದಲ್ಲಿ ಬಹಳಷ್ಟು ಮಂದಿ 2ನೇ ಹಂತದ ಮುಖಂಡರು ಪಕ್ಷ ಅಧಿಕಾರಕ್ಕೆ ಬಂದ ವೇಳೆ ಮುಖ್ಯಮಂತ್ರಿಯಾಗುವ ಸಮರ್ಥರ ಬಗ್ಗೆ ಪದೇ ಪದೇ ಹೇಳಿಕೆ ನೀಡಿ ಗೊಂದಲ ಮೂಡಿಸಿದ್ದಾರೆ. ಹಲವು ಬಾರಿ ಎಚ್ಚರಿಕೆ ನೀಡಿದಾಗ್ಯೂ ಸೊಪ್ಪು ಹಾಕದೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ಬಹಿರಂಗ ಹೇಳಿಕೆ ನೀಡಿ […]

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ, ರಾಜ್ಯದಲ್ಲಿ ಮಳೆ ಸಾಧ್ಯತೆ

ಬೆಂಗಳೂರು, ಡಿ.7- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ಸ್ವರೂಪದ ವಾಯುಭಾರ ಕುಸಿತವು ಚಂಡಮಾರುತವಾಗಿ ಮಾರ್ಪಾಡಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಗಳಿವೆ. ಕಳೆದ ಎಂಟು ಹತ್ತು ದಿನಗಳಿಂದ ಮಳೆ ಬಿಡುವು ಕೊಟ್ಟಿದ್ದು, ಒಣ ಹವೆ ಮುಂದುವರೆದಿತ್ತು. ಆದರೂ ಚಳಿಯ ತೀವ್ರತೆ ಅಷ್ಟಾಗಿ ಕಂಡು ಬರುತ್ತಿಲ್ಲ. ಚಂಡಮಾರುತದ ಪರಿಣಾಮದಿಂದ ನಾಳೆಯಿಂದ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಡಿ.9ರಿಂದ 12ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಪೂರ್ವಭಾಗದ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ […]

ಮಹಾರಾಷ್ಟ್ರಕ್ಕೆ ಒಂದಿಂಚೂ ಜಾಗ ಬಿಡಲ್ಲ : ಕಾರಜೋಳ

ಬೆಂಗಳೂರು,ಡಿ.7- ಯಾವುದೇ ಕಾರಣಕ್ಕೂ ಕರ್ನಾಟಕದ ಒಂದಿಂಚೂ ಜಾಗವನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಗೋವಿಂದ.ಎಂ ಕಾರಜೋಳ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಗಡಿವಿವಾದ ಸಂಬಂಧ ಮಹಾಜನ್ ವರದಿಯೇ ಅಂತಿಮ. ರಾಜ್ಯದಲ್ಲಿ ಮರಾಠಿ ಮಾತನಾಡುವ ಪ್ರದೇಶಗಳು ಸೇರಿದಂತೆ ಒಂದಿಂಚು ಜಾಗವನ್ನು ಬಿಟ್ಟು ಕೊಡುವುದಿಲ್ಲ ಎಂದು ಗುಡುಗಿದರು. ರಾಜಕೀಯಕ್ಕಾಗಿ ಮಹಾರಾಷ್ಟ್ರದವರು ಪದೇ ಪದೇ ಗಡಿ ವಿವಾದವನ್ನು ಕೆಣಕಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಎರಡು ಉಭಯ ರಾಜ್ಯಗಳ ನಡುವೆ […]

ರಾಜ್ಯಕ್ಕೆ ಲಗ್ಗೆಯಿಡಲಿದ್ದಾರೆ ಬಿಜೆಪಿ ಘಟಾನುಘಟಿ ನಾಯಕರು

ಬೆಂಗಳೂರು,ಡಿ.7- ಗುಜರಾತ್ ಮತ್ತು ಹಿಮಾಚಲಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶವನ್ನು ಎದುರು ನೋಡುತ್ತಿರುವ ರಾಜ್ಯ ಬಿಜೆಪಿ ನಾಯಕರು ಪ್ರದೇಶವಾರಿನಂತೆ ಘಟಾನುಘಟಿ ನಾಯಕರನ್ನು ಕರ್ನಾಟಕಕ್ಕೆ ಆಹ್ವಾನಿಸಲು ಮುಂದಾಗಿದ್ದಾರೆ. ಅಭಿವೃದ್ಧಿ ಮತ್ತು ಹಿಂದುತ್ವವನ್ನು ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ವಿಭಿನ್ನವಾದ ಪ್ರಚಾರ ತಂತ್ರವನ್ನು ಹೆಣೆದಿದೆ. ಪ್ರಧಾನಿ ನರೇಂದ್ರಮೋದಿ ಅವರಿಂದ ಅಭಿವೃದ್ಧಿ ಅಜೆಂಡಾ ಪ್ರಸ್ತಾಪವಾದರೆ ಹಿಂದೂ ಫೈರ್ ಬ್ರಾಂಡ್ ಎಂದೇ ಗುರುತಿಸಿಕೊಂಡಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹಿಂದೂತ್ವ ಅಸ್ತ್ರವನ್ನು ಬಳಸಲಿ ದ್ದಾರೆ. ಯಾವ ನಾಯಕರು ಎಲ್ಲಿ, ಯಾವ […]

ಮತ್ತೊಮ್ಮೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ

ಬೆಂಗಳೂರು,ಡಿ.7- ಶೀಘ್ರದಲ್ಲೇ ಸಿಲಿಕಾನ್ ಸಿಟಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಗಮನವಾಗಲಿದೆ.ಸಧ್ಯದಲ್ಲೇ ಉದ್ಘಾಟನೆಗೊಳ್ಳಲಿರುವ ಮೆಟ್ರೋ ಎರಡನೇ ಹಂತದ ರೈಲು ಯೋಜನೆಗೆ ಮೋದಿ ಅವರು ಹಸಿರು ನಿಶಾನೆ ತೋರಿಸಲು ಸಮ್ಮತಿಸಿದ್ದಾರೆ ಎಂದು ತಿಳಿದುಬಂದಿದೆ. ವೈಟ್ ಫೀಲ್ಡನಿಂದ ಬೈಯಪ್ಪನಹಳ್ಳಿವರೆಗಿನ ಮೆಟ್ರೋ ಮಾರ್ಗದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ರೈಲು ಮಾರ್ಗವನ್ನು ಮೋದಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ನಾಳಿನ ಗುಜರಾತ್, ಹಿಮಾಚಲ ಪ್ರದೇಶ ರಾಜ್ಯ ಚುನಾವಣಾ ಫಲಿತಾಂಶ ಪ್ರಕಟಗೊಂಡ ನಂತರ ಮೋದಿ ಅವರ ಚಿತ್ತ ಮುಂದಿನ ದಿನಗಳಲ್ಲಿ ನಡೆಯಲಿರುವ ಕರ್ನಾಟಕದ […]

BEST CEO ಅವಾರ್ಡ್ ಗೆ ಎನ್.ಜಯರಾಮ್ ಭಾಜನ

ಬೆಂಗಳೂರು/ಬೆಳಗಾವಿ,ಡಿ.7-ಸಾರ್ವಜನಿಕ ಆಡಳಿತದಲ್ಲಿ ಉತ್ಕರ್ಷ ಸೇವೆ ಸಲ್ಲಿಸಿದ್ದಕ್ಕಾಗಿ ಹಿರಿಯ ಐಎಎಸ್ ಅಧಿಕಾರಿ ಎನ್. ಜಯರಾಮ ಅವರಿಗೆ ಐಐಎಂಎಂ ಸಂಸ್ಥೆಯ 2022 ನೇ ಸಾಲಿನ Best CEO ಅವಾರ್ಡ್ ದೊರೆತಿದೆ. ಇತ್ತೀಚೆಗೆ ಚೆನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ Indian Institute of Material Management (IIMM)ನ ರಾಷ್ಟ್ರೀಯ ಅಧ್ಯಕ್ಷ ಎಚ್.ಕೆ.ಶರ್ಮ ಈ ಪ್ರಶಸ್ತಿ ನೀಡಿದರು. ಬೆಂಗಳೂರು ಜಲಮಂಡಳಿ ಮುಖ್ಯಸ್ಥರಾಗಿ ಕುಡಿಯುವ ನೀರಿನ ಸಮರ್ಪಕ ಪೂರೈಕೆ, ಆರ್ಥಿಕ ಸೋರಿಕೆ ತಡೆಗಟ್ಟಿ ಮಂಡಳಿಗೆ ಆದಾಯ ಸಂಗ್ರಹ, ಮಂಡಳಿ ಸ್ವತ್ತುಗಳ ರಕ್ಷಣೆ, ಜಲಮಂಡಳಿಯಲ್ಲಿ ನೇರ ನೇಮಕಾತಿ […]

ದುಬಾರಿ ಮೊಬೈಲ್‍ಗಳನ್ನು ಎಗರಿಸುತ್ತಿದ್ದ ನಾಲ್ವರ ಬಂಧನ

ಬೆಂಗಳೂರು,ಡಿ. 7- ಮೊಬೈಲ್‍ಗಳನ್ನು ಎಗರಿಸುತ್ತಿದ್ದ ಶಿವಮೊಗ್ಗ ಮೂಲದ ಮೂವರು ಸೇರಿದಂತೆ ನಾಲ್ವರನ್ನು ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿ, 9 ಲಕ್ಷ ರೂ. ಬೆಲೆಬಾಳುವ 27 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ರಾಘವೇಂದ್ರ(27), ಕಿರಣ್(28), ಶೌಕತ್ ಅಲಿ(28) ಮತ್ತು ಬೆಂಗಳೂರಿನ ಬನಶಂಕರಿಯಬಲರಾಮ(38) ಬಂಧಿತ ಆರೋಪಿಗಳು. ಬಂಧಿತರಿಂದ ಐದು ಒನ್‍ಪ್ಲೆಸ್ ಮೊಬೈಲ್, 8 ವಿವೋ ಮೊಬೈಲ್‍ಗಳು, ನಾಲ್ಕು ರೆಡ್ಮಿ ಮೊಬೈಲ್, ಎರಡು ಎಂಐ ಮೊಬೈಲ್, ನಾಲ್ಕು ಸ್ಯಾಮ್‍ಸಾಂಗ್, ಒಂದು ಹಾನರ್ ಮೊಬೈಲ್, ಲಾವ, ಓಪೊ, ಎಕ್ಸಿಮಿ ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. […]

ಸಿದ್ದರಾಮಯ್ಯನವರ ಮತ್ತೊಂದು ಭೂಹಗರಣ ಬಯಲಿಗೆ

ಬೆಂಗಳೂರು,ಡಿ.7- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮತ್ತೊಂದು ಡಿನೋಟಿಫಿಕೇಷನ್ ಹಗರಣವನ್ನು ಬಯಲಿಗೆಳೆದಿರುವ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ಇಡಿ ಪ್ರಕರಣವನ್ನು ಸಿಬಿಐ ಇಲ್ಲವೇ ಸಿಐಡಿ ತನಿಖೆಗೆ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮೂಡಾ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಅವರು ಅತ್ಯಾಪ್ತನ ಮೂಲಕ ಕಾನೂನಿನ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಡಿನೋಟಿಫಿಕೇಷನ್ ನಡೆಸಲಾಗಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿಂದು ದಾಖಲೆ ಬಿಡುಗಡೆ ಮಾಡಿದರು. ಮೈಸೂರಿನ ಹಿನಕಲ್ ಗ್ರಾಮದ ಸಾಕಮ್ಮ ಎಂಬುವವರ ಮಾಲೀಕತ್ವದ […]