ಕಾಂಗ್ರೆಸ್ ಟಿಕೆಟ್‍ಗೆ ಕಂಟಕವಾದ ಕುಟುಂಬ ಪಾರುಪತ್ಯ

ಬೆಂಗಳೂರು,ನ.24- ಚುನಾವಣಾ ಪೂರ್ವಾಭ್ಯಾಸದಲ್ಲಿ ಶರವೇಗದಿಂದ ಮುನ್ನುಗ್ಗುತ್ತಿರುವ ಕಾಂಗ್ರೆಸ್‍ಗೆ ವಂಶಪಾರಂಪರ್ಯ, ಪಕ್ಷಪಾತ, ಕುಟುಂಬ ರಾಜಕಾರಣ ಮುಳುವಾಗಿ ಕಾಡಲಾರಂಭಿಸಿದ್ದು, ಸುಮಾರು 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಭಾವಿಗಳ ಕುಟುಂಬ ಟಿಕೆಟ್‍ಗಾಗಿ ಅರ್ಜಿ ಸಲ್ಲಿಸಿದೆ. ಇದು ಹೈಕಮಾಂಡ್‍ಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದು, ಖುದ್ದು ಉನ್ನತ ನಾಯಕರ ಕುಟುಂಬಗಳಿಂದಲೇ ನಿಯಮ ಉಲ್ಲಂಘನೆಯ ಅನಿವಾರ್ಯತೆ ಎದುರಾಗುತ್ತಿದೆ. ಇತ್ತೀಚೆಗೆ ನಡೆದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಮುಖವಾಗಿ ಸ್ವಜನಪಕ್ಷಪಾತವನ್ನು ಪ್ರಸ್ತಾಪಿಸಿದ್ದರು. ಕುಟುಂಬ ರಾಜಕಾರಣ, ವಂಶಪಾರಂಪರ್ಯ ಆಡಳಿತ ದೇಶದ ಅಭಿವೃದ್ಧಿಗೆ ಮಾರಕ ಎಂದು […]

ಸತೀಶ್ ಜಾರಕಿಹೊಳಿ ಹೇಳಿಕೆಗೆ ಗೃಹ ಸಚಿವರು ಕಿಡಿ

ಬೆಂಗಳೂರು,ನ.8- ಕಾಂಗ್ರೆಸ್ ನಾಯಕರಿಗೆ ಹಿಂದೂ ಪದವೆಂದರೆ ಅಶ್ಲೀಲ ಹಾಗೂ ಅದೇ ರೀತಿಯಲ್ಲಿ ಕೇಸರಿ ಎಂದರೆ ಅಲರ್ಜಿ. ಈ ನಿಲುವು ಆ ಪಕ್ಷದ ಸಿದ್ದಾಂತದ ಒಂದು ಅವಿಭಾಜ್ಯ ಅಂಗವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದರು. ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನ.11ರಂದು ನಡೆಯಲಿರುವ ಸಾರ್ವಜನಿಕ ಸಮಾವೇಶದ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ನಾಯಕ ಸತೀಶ್ ಜಾರಕಹೊಳಿ ಅವರು ಹಿಂದೂ ಪದದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಪ್ರಶ್ನೆಗೆ […]

ಭೂಕುಸಿತದಿಂದ ಮನೆಗೆ ಅಪ್ಪಳಿಸಿದ ಬಂಡೆಕಲ್ಲು

ಜಮ್ಮು, ನ.4 – ಭೂ ಕುಸಿತದಿಂದ ದೊಡ್ಡ ಬಂಡೆಯೊಂದು ಮನೆಗೆ ಅಪ್ಪಳಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಬಫ್ಲಿಯಾಜನ್‍ಡೂನರ್ ಪ್ರದೇಶದಲ್ಲಿ ಬೆಳಿಗ್ಗೆ 5.50 ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಅಕಾರಿಗಳು ತಿಳಿಸಿದ್ದಾರೆ. ಭಾರತೀಯ ಸೇನೆಯ 48 ರಾಷ್ಟ್ರೀಯ ರೈಫಲ್ಸ್ ಮತ್ತು ಪೊಲೀಸರು ಸ್ಥಳೀಯರೊಂದಿಗೆ ತಕ್ಷಣ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇದು ಘನಘೋರ : ಸಕಾಲದಲ್ಲಿ ಚಿಕಿತ್ಸೆ ಸಿಗದೇ ತಾಯಿ ಮತ್ತು ಅವಳಿ ನವಜಾತ ಶಿಶುಗಳ ಸಾವು ಗಾಯಾಳುಗಳನ್ನು ಸುರನಕೋಟೆಯ ಉಪ […]

6 ರಾಜ್ಯಗಳ 7 ಕ್ಷೇತ್ರಗಳ ಉಪಚುನಾವಣೆಗೆ ಇಂದು ಮತದಾನ

ನವದೆಹಲಿ,ನ.3- ದೇಶದ ಆರು ರಾಜ್ಯಗಳಲ್ಲಿ 7 ವಿಧಾನಸಭೆ ಸ್ಥಾನಗಳಿಗೆ ಇಂದು ಉಪಚುನಾವಣೆ ನಡೆದಿದೆ. ಪ್ರಮುಖವಾಗಿ ಮಹಾ ರಾಷ್ಟ್ರ,ದಲ್ಲಿ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಬಿಜೆಪಿ ಮೈತ್ರಿಸರ್ಕಾರಕ್ಕೆ ಮೊದಲ ಪರೀಕ್ಷೆಯಾಗಿದ್ದು, ಅಂಧೇರಿ ಪೂರ್ವ ವಿಧಾನ ಸಭೆಗೆ ಉಪಚುನಾವಣೆ ನಡೆಯು ತ್ತಿದೆ. ಶಿವಸೇನೆ ಶಾಸಕರಾಗಿದ್ದ ರಮೇಶ್ ಲಟ್ಕೆ ನಿಧನದ ಹಿನ್ನೆಲೆಯಲ್ಲಿ ಇಲ್ಲಿ ಉಪಚುನಾವಣೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಕೊನೆ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದ ಕಾರಣ ಏಕನಾಥ್ ಶಿಂಧೆ ಬಣದ ಅಭ್ಯರ್ಥಿ ಗೆಲುವು ನಿಶ್ಚಿತ ಎನ್ನಲಾಗುತ್ತಿದೆ . ಆದರೆ ಶಿವಸೇನೆಯು […]

ಲಂಚದ ಸರ್ಕಾರದಲ್ಲಿ ನ್ಯಾಯಯುತ ಕೆಲಸ ಮಾಡಲು ಸಾಧ್ಯವೇ..?

ಶಿವಮೊಗ್ಗ, ಅ.29- ನಮ್ಮ ಸರ್ಕಾರದ ಅವಧಿಯಲ್ಲಿ ಒಂದು ಪೈಸೆ ತಗೊಂಡು ಕೂಡ ಪೊಲೀಸರ ವರ್ಗಾವಣೆ ಮಾಡುತ್ತಿರಲಿಲ್ಲ. ಈಗ ಒಳ್ಳೆ ಕಮಾಯಿ ಆಗುವ ಸ್ಟೇಷನ್ ಗೆ ವರ್ಗಾವಣೆ ಸಿಗಬೇಕು ಎಂದರೆ 60 ರಿಂದ 70 ಲಕ್ಷ ಲಂಚ ಕೊಡಬೇಕು. ಇಷ್ಟು ಲಂಚ ಕೊಟ್ಟು ನ್ಯಾಯವಾಗಿ ಕೆಲಸ ಮಾಡಿ ಎಂದರೆ, ಅಪರಾಧಗಳು ನಡೆಯದಂತೆ ಕೆಲಸ ಮಾಡಿ ಎಂದರೆ ಆಗುತ್ತಾ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರವನ್ನು ಶೇ.40 ಕಮಿಷನ್ ಸರ್ಕಾರ ಎಂದವರು […]

90 ಮೀಟರ್ ಎತ್ತರದ ಏರಿಯಲ್ ಲ್ಯಾಡರ್ ಮೇಲೆ ಸಿಎಂ

ಬೆಂಗಳೂರು,ಅ.20- ವಿಧಾನಸೌಧ ಮುಂಭಾಗ ಲೋಕಾರ್ಪಣೆಗೊಂಡ 90 ಮೀಟರ್ ಎತ್ತರದ ಏರಿಯಲ್ ಲ್ಯಾಡರ್ ಫ್ಲಾಟ್‍ಫಾರ್ಮ್ ತೊಟ್ಟಿಲಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರಗ ಜ್ಞಾನೇಂದ್ರ, ಶಿವರಾಂ ಹೆಬ್ಬಾರ್, ಎಸ್.ಟಿ.ಸೋಮಶೇಖರ್, ಸಂಸದ ಪಿ.ಸಿ.ಮೋಹನ್, ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್ ಮಹಾನಿರ್ದೇಶಕ ಅಮರ್‍ಕುಮಾರ್ ಪಾಂಡೆ ಕುಳಿತು ವೀಕ್ಷಣೆ ಮಾಡಿದರು. ಪ.ಜಾ ಹಾಗೂ ಪ.ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿ ಸುಗ್ರೀವಾಜ್ಞೆ ಜಾರಿ 90 ಮೀಟರ್ ಎತ್ತರದವರೆಗೂ ಏರಿಯಲ್ ಲ್ಯಾಡರ್‍ನ ತೊಟ್ಟಿಲಿನಲ್ಲಿ ನಿಂತು ಒಂದು ಸುತ್ತು ಬಂದು ವೀಕ್ಷಣೆ ಮಾಡಿದರು. ನಂತರ ಸುದ್ದಿಗಾರರೊಂದಿಗೆ […]

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ: ಸಿದ್ದು ವಾಗ್ದಾಳಿ

ಬೆಂಗಳೂರು, ಅ.19- ಕಾಂಗ್ರೆಸ್ ನಾಯಕರ ಅಕ್ರಮಗಳ ಬಗ್ಗೆ ರಾಹುಲ್ ಗಾಂಧಿಯವರೇ ತನಿಖೆ ನಡೆಸಿ ಶಿಕ್ಷೆ ಕೊಡಬೇಕಾದರೆ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು ನೀವು ಪ್ರಧಾನಿ ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸ ನಾವು ಮಾಡುತ್ತೇವೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಸರಣಿ ಟ್ವೀಟ್ ಮೂಲಕ ಮುಖ್ಯಮಂತ್ರಿಯವರನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ನಾಯಕರ ಅಕ್ರಮದ ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ಕಳುಹಿಸಿ ಕ್ರಮಕೈಗೊಳ್ಳಲು ಒತ್ತಾಯಿಸುತ್ತೇನೆ ಎಂದು ಹೇಳಿರುವ […]

ಮೀಸಲಾತಿ ಹೆಚ್ಚಳಕ್ಕೆ ಸುಗ್ರಿವಾಜ್ಞೆ: ಶ್ರೀರಾಮುಲು

ಬೆಂಗಳೂರು,ಅ.17- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಲಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಪರಿಶಿಷ್ಟ ಜಾತಿಗೆ ಶೇ.15ರಿಂದ 17 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.3ರಿಂದ 7ರಷ್ಟು ಮೀಸಲಾತಿ ಹೆಚ್ಚಿಸಲು ತೀರ್ಮಾನಿಸಲಾಗಿದ್ದು ಇದನ್ನು ಅನುಷ್ಠಾನಗೊಳಿಸಲು ಸುಗ್ರಿವಾಜ್ಞೆ ಹೊರಡಿಸಲಾಗುತ್ತಿದೆ ಎಂದರು. ಈಗಾಗಲೇ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ಕಾನೂನು ಇಲಾಖೆ ಪ್ರಕ್ರಿಯೆಯನ್ನು ಆರಂಭಿಸಿದೆ. ಒಂದೆರಡು ದಿನಗಳಲ್ಲಿ ಸುಗ್ರಿವಾಜ್ಞೆ ಹೊರಡಿಸಲಿದ್ದು, ನಂತರ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗುವುದು. […]

ಪ್ರಾದೇಶಿಕ ಭಾಷೆಯಲ್ಲಿ ಕಾನೂನು ಶಿಕ್ಷಣ

ನವದೆಹಲಿ,ಅ.17- ಈ ವರ್ಷಾಂತ್ಯಕ್ಕೆ ಕೇಂದ್ರ ಸರ್ಕಾರ ಸ್ಥಳೀಯ ಭಾಷೆಗಳಲ್ಲಿ ವಿಷಯಗಳನ್ನು ಹೊಂದಿರುವ 75 ಉತ್ತಮ ಗುಣಮಟ್ಟದ ಪುಸ್ತಕಗಳನ್ನು ಹೊರತರಲಿದೆ. ಆಯಾ ರಾಜ್ಯಗಳ ಮಾತೃಭಾಷೆಯಲ್ಲಿ ಕಾನೂನು ಶಿಕ್ಷಣವನ್ನು ಪ್ರೋತ್ಸಾಹಿಸುವುದು ಇದರ ಉದ್ದೇಶವಾಗಿದೆ. ಕಾನೂನು ಪದವಿ ತರಗತಿ ವಿದ್ಯಾರ್ಥಿಗಳಿಗೆ ಮಾತೃಭಾಷೆಯಲ್ಲಿ ಈ ಪುಸ್ತಕಗಳನ್ನು ಬರೆಯುತ್ತಿದ್ದಾರೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪದವಿ ಕಾನೂನು ತರಗತಿಗಳ ವಿದ್ಯಾರ್ಥಿಗಳಿಗೆ ಸ್ಥಳೀಯ ಭಾಷೆಗಳಲ್ಲಿ ಪುಸ್ತಕ ಪ್ರಕಟಿಸುವ ಕೆಲಸಗಳನ್ನು ಮಾಡುತ್ತಿದ್ದೇವೆ. ಈ ವರ್ಷಾಂತ್ಯಕ್ಕೆ ಪುಸ್ತಕಗಳು ಪ್ರಕಟವಾಗಲಿದೆ. ಮಾತೃಭಾಷೆಗಳಲ್ಲಿ ಕಾನೂನು ಶಿಕ್ಷಣ ಪಡೆಯಬೇಕೆಂಬ ಇಚ್ಛೆಯಿರುವ ವಿದ್ಯಾರ್ಥಿಗಳಿಗೆ […]