ಬೆಂಗಳೂರು,ಡಿ.13- ಚರ್ಮಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟ ಪ್ರಕರಣದಲ್ಲಿ ಮಾಲೀಕರಿಗೆ ಪರಿಹಾರ ನೀಡಲು 30 ಕೋಟಿ ರೂ.ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಚರ್ಮಗಂಟು ರೋಗದಿಂದ ಬಳಲಿ ಮೃತಪಟ್ಟ ಜಾನುವಾರುಗಳ ಮಾಲೀಕರು ಮತ್ತು ರೈತರ ಆರ್ಥಿಕ ನಷ್ಟವನ್ನು ತಪ್ಪಿಸಲು ಮೃತ ರಾಸುಗಳಿಗೆ ಪರಿಹಾರ ನೀಡಲು 30 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಈ ಹಿಂದೆ 7 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಚರ್ಮಗಂಟು ರೋಗವನ್ನು ಹತೋಟಿಗೆ ತರಲಾಗುತ್ತಿದ್ದರೂ ಕೂಡ 17 ಸಾವಿರ ಜಾನುವಾರುಗಳು ಮೃತಪಟ್ಟಿವೆ. ಮೃತಪಟ್ಟ ಜಾನುವಾರುಗಳ ಮಾಲೀಕರ ಆರ್ಥಿಕ ಸ್ಥಿತಿಯನ್ನು ಅರಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 37 ಕೋಟಿ ರೂ.ಪರಿಹಾರ ಧನ ನೀಡಿರುವ ಕ್ರಮವನ್ನು ಅಭಿನಂದಿಸಿರುವ ಸಚಿವರು, ಕೃತಜ್ಞತೆಗಳನ್ನು ಸಲ್ಲಿಸಿ, ನಮ್ಮ ಸರ್ಕಾರ ಸದಾ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸಲಿದೆ ಎನ್ನುವುದನ್ನು ಸಾರಿದೆ.
ಠೇವಣಿ ಸಂಗ್ರಹಿಸಿ ವಂಚಿಸುವ ಕಂಪನಿಗಳ ವಿರುದ್ಧ ಕಠಿಣ ಕ್ರಮ: ಅಶೋಕ್
ಜಾನುವಾರುಗಳ ಆರೋಗ್ಯ ರಕ್ಷಣೆಯಲ್ಲಿ ಸರ್ಕಾರ ಸಕ್ರೀಯವಾಗಿದೆ ಎಂದಿದ್ದಾರೆ. ಚರ್ಮಗಂಟು ರೋಗವು ನೇರವಾಗಿ ಜಾನುವಾರುಗಳ ಉತ್ಪಾದಕತೆಯನ್ನು ಕುಂಠಿತಗೊಳಿಸುವುದರಿಂದ ರೈತರು ಹಾಗೂ ಜಜಾನುವಾರು ಮಾಲೀಕರ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುವುದನ್ನು ತಡೆಗಟ್ಟಲು ಪರಿಹಾರ ನೀಡಲಾಗುತ್ತಿದೆ.
ರೋಗದಿಂದ ಉಂಟಾಗುವ ಜಾನುವಾರುಗಳ ಮರಣದಿಂದ ರೈತರ/ಜಾನುವಾರು ಮಾಲೀಕರಿಗೆ ನಷ್ಟವನ್ನು ಭರಿಸಲು 2022ರ ಆಗಸ್ಟ್ 1ರಿಂದ ಅನ್ವಯ ಆಗುವಂತೆ ಪ್ರತಿ ಹೈನು ರಾಸುಗಳಿಗೆ ಗರಿಷ್ಠ 20000 ರೂ. ಮತ್ತು ಎತ್ತುಗಳಿಗೆ 30000 ರೂ. ಹಾಗೂ ಪ್ರತಿ ಕರುವಿಗೆ 5000 ರೂ. ಪರಿಹಾರ ನೀಡಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.
ರಾಜ್ಯದಲ್ಲಿ ಜಾನುವಾರುಗಳ ಚರ್ಮಗಂಟು ರೋಗವನ್ನು ಹತೋಟಿ ತರಲಾಗುತ್ತಿದೆ. ರಾಜ್ಯಾದ್ಯಂತ 53 ಲಕ್ಷಕ್ಕೂ ಹೆಚ್ಚಿನ ರಾಸುಗಳಿಗೆ ಲಸಿಕೆ ನೀಡಲಾಗಿದ್ದು, ಲಭ್ಯವಿರುವ 40 ಲಕ್ಷ ಡೋಸ್ ಲಸಿಕೆಯನ್ನು ಜಾನುವಾರುಗಳಿಗೆ ನೀಡಲಾಗುತ್ತಿದೆ.
‘ನೀವು ದೇವರು ಕೊಟ್ಟ ವರ’ ರೊನಾಲ್ಡೊ ಬಣ್ಣಿಸಿದ ಕೊಹ್ಲಿ
ಚರ್ಮಗಂಟು ರೋಗ ನಿಯಂತ್ರಣಕ್ಕೆ ಬೇಕಾದ ಔಷಧ, ಚಿಕಿತ್ಸೆ ನೀಡಲಾಗುತ್ತಿದೆ. ರೈತರು ಆತಂಕಕ್ಕೆ ಒಳಗಾಗದೇ ಸರ್ಕಾರದೊಂದಿಗೆ ಸಹಕರಿಸುವಂತೆ ಸಚಿವರು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಈವರೆಗೆ 2 ಲಕ್ಷ ರಾಸುಗಳು ಚರ್ಮಗಂಟು ರೋಗದಿಂದ ಬಳಲುತ್ತಿದ್ದು, ಈ ಪೈಕಿ 1.50 ಲಕ್ಷ ರಾಸುಗಳು ಚೇತರಿಕೆಯಾಗಿವೆ. ಇನ್ನುಳಿದ ರಾಸುಗಳಿಗೆ ಸರ್ಕಾರದಿಂದ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ ಜಾನುವಾರುಗಳ ಮಾಲೀಕರಿಗೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಪರಿಹಾರ ಧನ ವಿತರಣೆ ಮಾಡಲಾಗುತ್ತಿದೆ ಎಂದು ಪ್ರಭು ಚವ್ಹಾಣ್ ಮಾಹಿತಿ ನೀಡಿದ್ದಾರೆ.
ರೋಗಗ್ರಸ್ಥ ದನಗಳು ಜ್ವರದಿಂದ ಬಳಲಿ ಮಂಕಾಗಿ ಮೂಗು, ಕಣ್ಣುಗಳಲ್ಲಿ ಸೋರುವಿಕೆ, ಜೊಲ್ಲು ಸೋರುವುದು, ಮೇವು ತಿನ್ನದೆ ಬಡಕಲಾಗುತ್ತವೆ. ರೋಗ ಕಾಣಿಸಿಕೊಂಡ ತಕ್ಷಣ ಸಮೀಪದ ಪಶು ವೈದ್ಯಾಕಾರಿಗಳನ್ನು ಸಂಪರ್ಕಿಸಿ, ಲಸಿಕೆ ಪಡೆದು ಜಾನುವಾರು ಸಂರಕ್ಷಿಸಿ ಎಂದು ಪ್ರಭು ಚವ್ಹಾಣ್ ರೈತರಲ್ಲಿ ಮನವಿ ಮಾಡಿದ್ದಾರೆ.
ಚರ್ಮಗಂಟು ರೋಗ ಕಾಣಿಸಿಕೊಂಡ ಜಾನುವಾರುಗಳ ಆರೋಗ್ಯ ಸಮಸ್ಯೆ ಹೊತ್ತು ಬರುವ ರೈತರು ಹಾಗೂ ದೂರವಾಣಿ ಕರೆಗಳಿಗೆ ಕೂಡಲೇ ಸ್ಪಂದಿಸಿ, ಸೂಕ್ತ ಚಿಕಿತ್ಸೆ ನೀಡಿ, ರೋಗ ಹರಡದಂತೆ ಪಶು ವೈದ್ಯಾಧಿಕಾರಿಗಳು ಮತ್ತು ಪಶುಸಂಗೋಪನೆ ಇಲಾಖೆ ಅಧಿರಿಗಳು ಶ್ರಮಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ.
cattle, skin disease,compensation, released, Minister prabhu chavan