ನ.7ರಿಂದ ಡಿ.7ರವರೆಗೆ ಕಾಲುಬಾಯಿ ಲಸಿಕೆ ಅಭಿಯಾನ

Social Share

ಬೆಂಗಳೂರು,ನ.7- ಜಾನುವಾರುಗಳಲ್ಲಿ ಕಂಡು ಬರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರುಗಳ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ನವೆಂಬರ್ 7ರಿಂದ ಡಿಸೆಂಬರ್ 7ರವರೆಗೆ ಒಂದು ತಿಂಗಳ ಕಾಲ ರಾಜ್ಯದಲ್ಲಿ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ತಿಳಿಸಿದ್ದಾರೆ.

ರಾಜ್ಯದಾದ್ಯಂತ ಇಂದಿನಿಂದ ಒಂದು ತಿಂಗಳ ಕಾಲ ಎಲ್ಲಾ ತಾಲ್ಲೂಕುಗಳಲ್ಲಿ ಎಲ್ಲಾ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲು ಉದ್ದೇಶಿಸಲಾಗಿದೆ ಎಂದು ಅವರು ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಸಾವಿನ ಪ್ರಕರಣ : ಮೂವರು ವಶಕ್ಕೆ

ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಕಟ್ಟೆಚ್ಚರ ವಹಿಸಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವಂತೆ ಪಶುಪಾಲನಾ ಇಲಾಖೆಯ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರು ಮತ್ತು ಸಹಾಯಕ ನಿರ್ದೇಶಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ, ಆರೋಗ್ಯಾಧಿಕಾರಿಗಳು ಹಾಗು ಇಲಾಖಾ ಸಿಬ್ಬಂದಿಗಳಿಗೆ ಸಹಕಾರ ನೀಡಿ ಸರ್ಕಾರದೊಂದಿಗೆ ಕೈ ಜೋಡಿಸುವಂತೆ ಅವರು ಮನವಿ ಮಾಡಿದ್ದಾರೆ.

ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುವ ಕಾಲುಬಾಯಿ ರೋಗವನ್ನು ನಿಯಂತ್ರಿಸಿ, ನಿರ್ಮೂಲನೆಗೊಳಿಸಲು ಪ್ರತಿ 6 ತಿಂಗಳಿಗೊಮ್ಮೆ ರೋಗದ ವಿರುದ್ಧ ಲಸಿಕೆ ಹಾಕಿಸುವುದು ಪರ್ಯಾಯವಾಗಿದೆ. ಈ ರೋಗದ ವಿರುದ್ಧ ಎಲ್ಲಾ ದನ, ಎಮ್ಮೆ ಮತ್ತು ಕರುಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುವುದು. ಪ್ರತಿ ಜಾನುವಾರುಗಳಿಗೆ ಪ್ರತ್ಯೇಕ ಸಿರಿಂಜ್ ಮತ್ತು ನೀಡಲï.ಗಳನ್ನು ಬಳಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಪ್ರಭು ಚವ್ಹಾಣ್ ಮಾಹಿತಿ ನೀಡಿದರು.

ಕಳೆದ ಮೂರು ದಿನಗಳಿಂದ ಜೆಡಿಎಸ್ ಅಭ್ಯರ್ಥಿಗಳಿಗೆ ಸೀಕ್ರೆಟ್ ಟ್ರೇನಿಂಗ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದರು. ನಾನು ಕೂಡ ಕೇಂದ್ರ ಪಶುಸಂಗೋಪನಾ ಸಚಿವ ಪರುಷೋತ್ತಮ್ ರೂಪಾಲ್ ಜೀ ಅವರನ್ನು ಭೇಟಿ ಮಾಡಿ ಒಂದು ಕೋಟಿ ಲಸಿಕೆ ನೀಡುವಂತೆ ಮನವಿ ಮಾಡಿದ್ದಕ್ಕೆ ಸ್ಪಂದಿಸಿರುವ ಕೇಂದ್ರ ಸರ್ಕಾರವು ರಾಜ್ಯಕ್ಕೆ ಕಾಲು ಬಾಯಿ ರೋಗದ ವಿರುದ್ಧ ಹೋರಾಡಲು 73,79,250 ಲಸಿಕೆ ಕಳುಹಿಸಿಕೊಟ್ಟಿದೆ. ಇದನ್ನು ಎಲ್ಲಾ ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗಿದೆ.

ಸಕಾಲದಲ್ಲಿ ಜಾನುವಾರುಗಳಿಗೆ ಲಸಿಕೆ ಹಾಕಲು ಅಗತ್ಯ ಪಶುವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.

Articles You Might Like

Share This Article