ಮಂಡ್ಯ,ಅ.5- ಜೆಡಿಎಸ್, ಬಿಜೆಪಿ ನಾಯಕರು ಕಾವೇರಿ ನದಿ ನೀರಿನ ವಿಚಾರದಲ್ಲಿ ಪ್ರಚಾರಕ್ಕಾಗಿ ಪ್ರತಿಭಟನೆ ಮಾಡುವುದನ್ನು ಬಿಟ್ಟು ಪ್ರಧಾನಿ ಮಧ್ಯಸ್ಥಿಕೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತ ಹಾಗೂ ಕನ್ನಡಪರ ಸಂಘಟನೆಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನ ಸೆಳೆಯಲು ಪ್ರತಿಭಟನೆ ನಡೆಸುತ್ತಾರೆ. ಬೆಳೆ ಹಾಗೂ ನೀರಿನ ರಕ್ಷಣೆ ವಿಷಯದಲ್ಲಿ ಅವರ ಕಾಳಜಿಗಳು ಸ್ತುತ್ಯಾರ್ಹ ಎಂದು ಹೇಳಿದರು.
ಕಾವೇರಿ ವಿವಾದದಲ್ಲಿ ಸುಪ್ರೀಂಕೋರ್ಟ್‍ನ ತೀರ್ಪು ಹಾಗೂ ಕೇಂದ್ರ ಸರ್ಕಾರದ 2 ತಾಂತ್ರಿಕ ಸಮಿತಿಗಳ ಆದೇಶ ಪ್ರಮುಖವಾಗಿದೆ. ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು. ಬಿಜೆಪಿಯವರಿಗೆ ರಾಜ್ಯದ ಜನರ ವಿಷಯದಲ್ಲಿ ಕನಿಷ್ಠ ಕೃತಜ್ಞತೆ ಇಲ್ಲ. 25 ಜನ ಸಂಸದರು ಗೆದ್ದಿದ್ದಾರೆ. ಕಾವೇರಿ ವಿಷಯದಲ್ಲಿ ಅವರ ಪಾತ್ರ ಏನು. ಮಂಡ್ಯದಲ್ಲಿ ಬಂದು ಮಾದ್ಯಮದ ಎದುರು ಪ್ರತಿಭಟನೆ ಮಾಡಿ ಪ್ರಚಾರ ಮಾಡುವುದಕ್ಕಷ್ಟೇ ಸೀಮಿತವೇ ಎಂದು ಪ್ರಶ್ನಿಸಿದರು.
ರಾಜಕಾರಣಕ್ಕಾಗಿ ಪ್ರಧಾನಿಯವರನ್ನು ಭೇಟಿ ಮಾಡುವ ನಾಯಕರು ಕಾವೇರಿ ವಿಷಯದಲ್ಲಿ ಪ್ರಧಾನಿಯವರ ಜೊತೆ ಏಕೆ ಚರ್ಚೆ ಮಾಡುತ್ತಿಲ್ಲ. ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಏನು ಮಾಡುತ್ತಿದ್ದಾರೆ. ಕಾವೇರಿ ನದಿ ಪಾತ್ರದ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಕೇಂದ್ರ ಮಧ್ಯ ಪ್ರವೇಶ ಮಾಡಬೇಕು ಎಂದರು.
ಈ ನಿಟ್ಟಿನಲ್ಲಿ ರಾಜ್ಯಸರ್ಕಾರ ತನ್ನ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಎರಡು ಬಾರಿ ಸರ್ವಪಕ್ಷ ಸಭೆ ನಡೆಸಿದೆ. ಕೇಂದ್ರದಲ್ಲಿ ಸರ್ವಪಕ್ಷ ಸಂಸದರ ಜೊತೆಯೂ ಚರ್ಚೆ ನಡೆಸಲಾಗಿದೆ. ಮೂರು ದಿನ ದೆಹಲಿಯಲ್ಲೇ ಉಳಿದು ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ವಾಸ್ತವತೆಯನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ. ಪ್ರಧಾನಿಯವರ ಭೇಟಿಗೆ ಎಷ್ಟೇ ಪ್ರಯತ್ನ ನಡೆಸಿದ್ದರೂ ಪ್ರಯೋಜನವಾಗಲಿಲ್ಲ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಹಾಗೂ ಇತರರು ಸಹಾಯ ಮಾಡಲಿಲ್ಲ.
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡ ನಿವಾಸದ ಮೇಲೆ ಇಡಿ ದಾಳಿ
ಪ್ರಧಾನಮಂತ್ರಿಯವರು ಮಧ್ಯಪ್ರವೇಶ ಮಾಡಲಾಗುವುದಿಲ್ಲ ಎಂದು ರಾಜ್ಯದ ಬಿಜೆಪಿ ನಾಯಕರೇ ಹೇಳುತ್ತಿರುವುದು ಸರಿಯಲ್ಲ. ಈ ಹಿಂದೆ ವಾಜಪೇಯಿ ಕೂಡ ಅಂತರಾಜ್ಯ ನದಿ ವಿವಾದದಲ್ಲಿ ಮಧ್ಯಪ್ರವೇಶ ಮಾಡಿದ್ದರು. ಬಿಜೆಪಿಯವರು ಪ್ರಧಾನಿಯವರ ಬಳಿ ಚರ್ಚೆ ಮಾಡದೇ ತಾವಾಗಿಯೇ ಪ್ರಧಾನಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ಘೋಷಿಸುತ್ತಿದ್ದಾರೆ. ಹಾಗಿದ್ದ ಮೇಲೆ ರಾಜಕಾರಣ ಮಾಡುವುದನ್ನು ಬಿಟ್ಟು ಮನೆಯಲ್ಲಿರಲಿ ಎಂದು ಕಿಡಿಕಾರಿದರು.
ಇಂಡಿಯಾ ಘಟಬಂದನ್‍ಗಾಗಿ ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಆರೋಪ ಆಧಾರರಹಿತ. ರಾಜ್ಯ ಹಿತಾಸಕ್ತಿ ವಿಷಯದಲ್ಲಿ ಎರಡೂ ರಾಜ್ಯಗಳು ತಮ್ಮದೇ ಆದ ನಿಟ್ಟಿನಲ್ಲಿ ಕೆಲಸ ಮಾಡುತ್ತವೆ. ರಾಜಕೀಯವೇ ಬೇರೆ, ರಾಜ್ಯದ ಹಿತಾಸಕ್ತಿಯೇ ಬೇರೆ. ರಾಜ್ಯಸರ್ಕಾರ ಹೇಳದೇ, ಕೇಳದೆ ತಮಿಳುನಾಡಿಗೆ ನೀರು ಬಿಟ್ಟಿದೆ ಎಂದು ಬಿಜೆಪಿ ನಾಯಕರು ಆರೋಪ ಮಾಡುತ್ತಾರೆ. ತಾಂತ್ರಿಕ ಸಮಿತಿಗಳ ಆದೇಶವನ್ನು ಎಲ್ಲಾ ಕಾಲದಲ್ಲೂ ಸರ್ಕಾರಗಳು ಪಾಲನೆ ಮಾಡಿವೆ. ಸಂಕಷ್ಟದ ಸಂದರ್ಭದಲ್ಲಿ ಆದೇಶ ಪಾಲನೆ ಮಾಡಲಾಗದ ಬಗ್ಗೆ ನಾವು ಸಾಕಷ್ಟು ಮನವರಿಕೆ ಮಾಡಿಕೊಟ್ಟಿದ್ದೇವೆ.
ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಮಧ್ಯಪ್ರದೇಶ ಸರ್ಕಾರ
ಈ ಪ್ರಯತ್ನದ ಹಂತದಲ್ಲಿ ಬಿಜೆಪಿ, ಜೆಡಿಎಸ್ ಪಕ್ಷಗಳ ನಾಯಕರು ರಾಜ್ಯಸರ್ಕಾರಕ್ಕೆ ಸಹಕಾರ ನೀಡಿಲ್ಲ. ಹೀಗಾಗಿ ಕಾವೇರಿ ವಿಷಯದಲ್ಲಿನ ಹೊಣೆಗಾರಿಕೆ ಬಿಜೆಪಿಯವರದ್ದೇ. ನಾಟಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆಯೇ ಹೊರತು ಪ್ರಾಮಾಣಿಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಕಾವೇರಿ ನೀರು ನಿಯಂತ್ರಣಾ ಸಮಿತಿ ಇದೇ 12 ರಂದು ಮತ್ತೆ ಸಭೆ ನಡೆಸಲಿದ್ದು, ಅಂದು ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದಿಸುತ್ತಿವೆ ಎಂದರು. ರಾಜ್ಯದಲ್ಲಿ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಅದರ ಕುರಿತು ಸಚಿವ ಸಂಪುಟ ಹಾಗೂ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರ ಆಧಾರದ ಮೇಲೆ ಕೇಂದ್ರ ಸರ್ಕಾರದ ಅಕಾರಿಗಳ ಮೂರು ತಂಡಗಳು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ನಾಲ್ಕು ದಿನಗಳ ಕಾಲ ಬರ ಅಧ್ಯಯನ ನಡೆಸಲಿವೆ ಎಂದು ಹೇಳಿದರು.