ನವದೆಹಲಿ,ಅ.26– ಕರೂರ್ ಕಾಲ್ತುಳಿತದ ಪ್ರಕರಣದ ತನಿಖೆಯನ್ನು ಸಿಬಿಐ ರಂಭಿಸಿದೆ. ನಟ,ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ರಾಜಕೀಯ ರ್ಯಾಲಿಯಲ್ಲಿ 41 ಜನರು ಸಾವನ್ನಪ್ಪಿದ ಕರೂರ್ ಕಾಲ್ತುಳಿತದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಮಿಳುನಾಡಿನ ಕರೂರಿನ ವೇಲುಸಾಮಿಪುರಂನಲ್ಲಿರುವ ಸ್ಥಳಕ್ಕೆ ಸಿಬಿಐನ ವಿಶೇಷ ತಂಡ ಈಗಾಗಲೇ ಭೇಟಿ ನೀಡಿದೆ ಎಂದು ಅವರು ಹೇಳಿದರು.ನಿಯಮದಂತೆ, ಸಿಬಿಐ ರಾಜ್ಯ ಪೊಲೀಸರ ಎಫ್‌ಐಆರ್ ಅನ್ನು ಮರು ನೋಂದಾಯಿಸಿದೆ ಮತ್ತು ಬೆಳವಣಿಗೆಯ ಬಗ್ಗೆ ಸ್ಥಳೀಯ ನ್ಯಾಯಾಲಯಕ್ಕೆ ತಿಳಿಸಿದೆ ಎಂದು ಅವರು ಹೇಳಿದರು.
ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸ್ವತಂತ್ರ ತನಿಖೆಗಾಗಿ ಸಲ್ಲಿಸಿದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದೆ.ತನಿಖೆಯನ್ನು ವಹಿಸಿಕೊಳ್ಳಲು ಹಿರಿಯ ಅಧಿಕಾರಿಯನ್ನು ನೇಮಿಸಲು ಮತ್ತು ಅಧಿಕಾರಿಯ ಸಹಾಯಕ್ಕಾಗಿ ಇತರ ಕೆಲವು ಅಧಿಕಾರಿಗಳನ್ನು ನೇಮಿಸಲು ಸುಪ್ರೀಂ ಕೋರ್ಟ್ ಸಿಬಿಐ ನಿರ್ದೇಶಕರಿಗೆ ನಿರ್ದೇಶನ ನೀಡಿತ್ತು.
ಸಿಬಿಐ ತನಿಖೆಯ ಮೇಲ್ವಿಚಾರಣೆಗಾಗಿ ನ್ಯಾಯಾಲಯವು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಜಯ್ ರಸ್ತೋಗಿ ನೇತೃತ್ವದಲ್ಲಿ ಮೂವರು ಸದಸ್ಯರ ಮೇಲ್ವಿಚಾರಣಾ ಸಮಿತಿಯನ್ನು ಸಹ ರಚಿಸಿತು.
