ಸಿಬಿಐ, ಇಡಿ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸುತ್ತಿವೆ : ಶಾ

Social Share

ನವದೆಹಲಿ,ಮಾ.18- ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಂತಹ ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿವೆ. ಎರಡು ಪ್ರಕರಣಗಳನ್ನು ಹೊರತುಪಡಿಸಿದರೆ ಉಳಿದ ಎಲ್ಲಾ ಪ್ರಕರಣಗಳು ಯುಪಿಎ ಸರ್ಕಾರದ ಅವಧಿಯಲ್ಲಿ ದಾಖಲಾಗಿರುವ ಪ್ರಕರಣಗಳಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ.

ದೆಹಲಿಯಲ್ಲಿ ನಡೆದ ಕಾನ್‍ಕ್ಲೇವ್‍ನಲ್ಲಿ ಭಾಗವಹಿಸಿ ಮಾತನಾಡಿದ ಅಮಿತ್ ಶಾ, ತನಿಖಾ ಸಂಸ್ಥೆಗಳು ಏನೇ ಮಾಡಿದರೂ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಅದನ್ನು ಬಿಟ್ಟು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಮುಂದಾಗಬಾರದು ಎಂದು ಕಿವಿಮಾತು ಹೇಳಿದ್ದಾರೆ.

ಸಿಬಿಐ ಮತ್ತು ಇಡಿ ತನಿಖಾ ಸಂಸ್ಥೆಗಳು ನ್ಯಾಯಾಲಯಕ್ಕಿಂತ ಮೇಲಲ್ಲ ಮತ್ತು ಯಾವುದೇ ನೋಟಿಸ್, ಎಫ್‍ಐಆರ್ ಮತ್ತು ಚಾರ್ಜ್ ಶೀಟ್‍ಗಳನ್ನು ನ್ಯಾಯಾಲಯಗಳಲ್ಲಿ ಪ್ರಶ್ನಿಸಬಹುದು ಎಂದು ಗೃಹ ಸಚಿವರು ಹೇಳಿದರು.

ಉರಿಗೌಡ-ನಂಜೇಗೌಡ ಸಿನಿಮಾ ಮಾಡಲು ಮುಂದಾದ ಸಚಿವ ಮುನಿರತ್ನ : ಹೆಚ್ಡಿಕೆ ಕೆಂಡ

ನ್ಯಾಯಾಲಯಕ್ಕೆ ಹೋಗುವ ಬದಲು ಹೊರಗೆ ಯಾಕೆ ಕೂಗಾಡುತ್ತಿದ್ದಾರೆ? ಯಾರ ಮೇಲಾದರೂ ಭ್ರಷ್ಟಾಚಾರದ ಆರೋಪವಿದ್ದರೆ ತನಿಖೆಯಾಗಬೇಕಲ್ಲವೇ ಎಂದು ಜನತೆಯನ್ನು ಕೇಳಬೇಕೆಂದಿದ್ದೇನೆ. ತನಿಖಾ ಸಂಸ್ಥೆಗಳಲ್ಲಿ ದಾಖಲಾಗಿರುವ ಎರಡು ಪ್ರಕರಣಗಳನ್ನು ಹೊರತುಪಡಿಸಿದರೆ ಉಳಿದೆಲ್ಲಾ ಪ್ರಕರಣಗಳು ಯುಪಿಎ ಆಡಳಿತಾವಧಿಯಲ್ಲಿ ದಾಖಲಾಗಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಲ ಎಂದಿದ್ದಾರೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತದ 10 ವರ್ಷಗಳ ಅವಧಿಯಲ್ಲಿ 12 ಲಕ್ಷ ಕೋಟಿ ಮೊತ್ತದ ಹಗರಣಗಳ ಬಗ್ಗೆ ಆರೋಪಗಳು ಬಂದಾಗ, ಪರಿಸ್ಥಿತಿಯನ್ನು ಶಾಂತವಾಗಿರಿಸಲು ಸರ್ಕಾರ ಸಿಬಿಐ ಮೂಲಕ ಪ್ರಕರಣವನ್ನು ದಾಖಲಿಸಿದೆ ಎಂದು ಶಾ ಹೇಳಿದರು. ಅಕ್ರಮ ಹಣ ವರ್ಗಾವಣೆ ಪ್ರಕರಣವಿದ್ದರೆ ಇಡಿ ತನಿಖೆ ನಡೆಸಲಿದೆ ಎಂದರು.

ವಿಧಾನಸಭೆ ಚುನಾವಣೆ : ಇಲ್ಲಿದೆ ಬಿಜೆಪಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ

ತನಿಖಾ ಸಂಸ್ಥೆಗಳು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸುತ್ತಿವೆ ಎಂಬ ಆರೋಪಗಳ ಬಗ್ಗೆ ಕೇಳಿದ ಪ್ರಶ್ನೆಗೆ, ಅವರನ್ನು ನ್ಯಾಯಾಲಯಕ್ಕೆ ಹೋಗದಂತೆ ತಡೆಯುವವರು ಯಾರು? ಅವರ ಪಕ್ಷದಲ್ಲಿ ನಮಗಿಂತ ಉತ್ತಮ ವಕೀಲರಿದ್ದಾರೆ ಎಂದು ಕೇಳಿದರು. ಏಜೆನ್ಸಿಗಳು ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿವೆ, ನೀವು ಕಾನೂನನ್ನು ಅನುಸರಿಸಿ ಎಂದು ನಾನು ಎಲ್ಲರಿಗೂ ಹೇಳಲು ಬಯಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್, ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ ಕವಿತಾ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಸೇರಿದಂತೆ ಹಲವು ನಾಯಕರ ವಿರುದ್ಧ ಸಿಬಿಐ ಮತ್ತು ಇಡಿ ತನಿಖೆ ನಡೆಸುತ್ತಿರುವುದು ಇಲ್ಲಿ ಉಲ್ಲೇಖಾರ್ಹ.

#CBI, #ED, #workingimpartially, #probed, #UPA, #AmitShah,

Articles You Might Like

Share This Article