ನವದೆಹಲಿ,ಜ.1- ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ.
ನಿನ್ನೆಯಷ್ಟೇ ಜೈಹಿಂದ್ ಚಾನಲ್‍ನ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್. ಶಿಜು ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದ ಬೆನ್ನಲ್ಲೇ ಇದೀಗ, ಡಿ.ಕೆ.ಶಿವಕುಮಾರ್ ಹಾಗೂ ಪತ್ನಿ ಉಷಾ ಶಿವಕುಮಾರ್ ಸೇರಿದಂತೆ ಒಟ್ಟು 30 ಮಂದಿಗೆ ಜನವರಿ 11ರಂದು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ತನ್ನ ಮುಂದೆ ಹಾಜರಾಗುವಂತೆ ತಿಳಿಸಿದೆ.
ಸಿಆರ್‍ಪಿಸಿ ಸೆಕ್ಷನ್ 91ರಡಿ ಹೊರಡಿಸಲಾದ ನೋಟಿಸ್‍ನಲ್ಲಿ, ಡಿ.ಕೆ.ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಶಿವಕುಮಾರ್ ಅವರು ಮಾಡಿದ ಹೂಡಿಕೆಗಳು, ಅವರಿಗೆ ಪಾವತಿಸಿದ ಲಾಭಾಂಶಗಳು, ಷೇರು ವಹಿವಾಟುಗಳು, ಹಣಕಾಸಿನ ವಹಿವಾಟುಗಳ ಜೊತೆಗೆ ಅವರ ಬ್ಯಾಂಕ್ ವಿವರಗಳನ್ನು ಒದಗಿಸುವಂತೆ ಸಿಬಿಐ ಚಾನಲ್‍ಗೆ ಕೇಳಿದೆ. ಹಿಡುವಳಿಗಳ ಹೇಳಿಕೆ, ಅವರ ಲೆಡ್ಜರ್ ಖಾತೆಗಳು, ಒಪ್ಪಂದದ ಟಿಪ್ಪಣಿಗಳು ಮತ್ತು ಇತರ ವಿವರಗಳ ಜೊತೆಗೆ ಎಲ್ಲಾ ಷೇರು ವಹಿವಾಟುಗಳ ವಿವರಗಳನ್ನು ಕೇಳಿದೆ.
ಸಿಆರ್ ಪಿಸಿ ಸೆಕ್ಷನ್ 91 ಅವರು ತನಿಖೆ ನಡೆಸಿದ ಪ್ರಕರಣದ ಬಗ್ಗೆ ದಾಖಲೆಗಳನ್ನು ಸಮನ್ಸ್ ಮಾಡಲು ಪೊಲೀಸ್ ತನಿಖಾ ಅಧಿಕಾರಿಗೆ ಅಧಿಕಾರ ನೀಡುತ್ತದೆ. ಶಿವಕುಮಾರ್ ಅವರ ಪುತ್ರ ಮತ್ತು ಇತರ ಕುಟುಂಬ ಸದಸ್ಯರು ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ಪ್ರಸ್ತುತಪಡಿಸುವಂತೆ ಸಿಬಿಐ ಕೇಳಿದೆ.
ಗಣರಾಜ್ಯೋತ್ಸವ ಟ್ಯಾಬ್ಲೋ ಪಾಲ್ಗೊಳ್ಳುವಿಕೆ ಬಗ್ಗೆ ತಾರತಮ್ಯ ಮಾಡಿಲ್ಲ
ಜೈಹಿಂದ್ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್.ಶಿಜು ಅವರು ಸಿಬಿಐ ನೋಟಿಸ್ ಸ್ವೀಕರಿಸಿದ್ದು, ಸಂಸ್ಥೆ ಕೋರಿರುವ ಎಲ್ಲಾ ದಾಖಲೆಗಳನ್ನು ಒದಗಿಸುವುದಾಗಿ ತಿಳಿಸಿದ್ದಾರೆ, ಎಲ್ಲಾ ದಾಖಲೆಗಳು ತಮ್ಮ ಬಳಿ ಇವೆ ಮತ್ತು ಯಾವುದೇ ಅಕ್ರಮ ನಡೆಸಿಲ್ಲ ಎಂದು ಹೇಳಿದ್ದಾರೆ. ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ 2020ರಲ್ಲಿ ಪ್ರಕರಣ ದಾಖಲಿಸಿದ್ದು, 2013 ಮತ್ತು 2018ರ ನಡುವೆ ಅವರು 74 ಕೋಟಿ ರೂ.ಗೂ ಹೆಚ್ಚು ಆಸ್ತಿಗಳಿಸಿದ್ದು, ಅದು ಅವರ ಆದಾಯಕ್ಕೆ ಅನುಗುಣವಾಗಿಲ್ಲ ಎಂದು ಆರೋಪಿಸಿತ್ತು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿದ ಆಸ್ತಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಈ ಹಿಂದೆ ರಾಜ್ಯ ಸಲ್ಲಿಸಿದ್ದ ಅನುಮತಿಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನ.23ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಹಿಂದಿನ ಸರ್ಕಾರ ವಿಧಾನಸಭೆಯ ಸ್ಪೀಕರ್ ಅನುಮತಿಯನ್ನು ಪಡೆಯದೇ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಹಾಗಾಗಿ, ಅದು ಕಾನೂನು ರೀತಿಯಾಗಿ ಸರಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಅನುಮತಿಯನ್ನು ಹಿಂಪಡೆಯಲು ನಿರ್ಧರಿಸಲಾಗಿತ್ತು.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿವಿಚಾರಣೆಯನ್ನು ಹೈಕೋರ್ಟ್ ಜನವರಿ 5ಕ್ಕೆ ಮುಂದೂಡಿದೆ.
ಆದಾಯ ತೆರಿಗೆ ಇಲಾಖೆ ದಾಳಿಗಳು ಮತ್ತು ಜಾರಿ ನಿರ್ದೇಶನಾಲಯದ ತನಿಖೆಯ ಆಧಾರದ ಮೇಲೆ, ಡಿ.ಕೆ.ಶಿವಕುಮಾರ್ ವಿರುದ್ಧ ಎಫ್‍ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು ಮತ್ತು ಅದಕ್ಕೆ ಅಂದಿನ ಬಿಜೆಪಿ ಸರ್ಕಾರ ಸೆಪ್ಟೆಂಬರ್ 25, 2019ರಂದು ಅನುಮತಿ ನೀಡಿತ್ತು. ಸರ್ಕಾರ ಬದಲಾದ ನಂತರ, ಸಿಬಿಐ ನೀಡಿದ್ದ ಅನುಮತಿಯನ್ನು ನವೆಂಬರ್ 28ರಂದು ಹಿಂತೆಗೆದುಕೊಳ್ಳಲಾಗಿದೆ.
ಅಯೋಧ್ಯೆಯಲ್ಲಿ ಜೈಶ್ರೀರಾಮ್ ಘೋಷಣೆಯೊಂದಿಗೆ ಹೊಸ ವರ್ಚಾಚರಣೆ
ಡಿಕೆಶಿ ಮೇಲಿನ ಆರೋಪಗಳೇನು?
2017ರಲ್ಲಿ ಡಿಕೆಶಿ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಡಿ.ಕೆ ಶಿವಕುಮಾರ್ ವಾಸ್ತವ್ಯವಿದ್ದ ಈಗಲ್‍ಟನ್ ರೆಸಾರ್ಟ್ ಮತ್ತು ಅವರ ಆಪ್ತರ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿದ್ದರು. ಇದೇ ಪ್ರಕರಣದಲ್ಲಿ ಇಡಿ ಅಧಿಕಾರಿಗಳೂ ದಾಳಿ ಮಾಡಿದ್ದರು. ಡಿ.ಕೆ. ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಶಿವಕುಮಾರ್ ವಿರುದ್ಧ ತನಿಖೆ ಆರಂಭಿಸಿತ್ತು.
ಜಾರಿ ನಿರ್ದೇಶನಾಲಯದ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‍ಐಆರ್ ದಾಖಲಿಸಲು ಸಿಬಿಐ, ಅಂದಿನ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ಆಗಿನ ಬಿಜೆಪಿ ಸರ್ಕಾರ 2019ರ ಸೆ.25ರಂದು ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. 2020ರ ಅಕ್ಟೋಬರ್ 3ರಂದು ಸಿಬಿಐ ಶಿವಕುಮಾರ್ ವಿರುದ್ಧ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸುತ್ತಿತ್ತು.