ಸಿಬಿಐ ವಿಚಾರಣೆಗೆ ಗೈರಾದ ತೇಜಸ್ವಿಯಾದವ್

Social Share

ನವದೆಹಲಿ,ಮಾ.11-ಸಿಬಿಐ ಎದುರು ವಿಚಾರಣೆಗೆ ಹಾಜರಾಗಲು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತೆ ನಿರಾಕರಿಸಿದ್ದಾರೆ. ಜಮೀನು ಮತ್ತು ಉದ್ಯೋಗಕ್ಕಾಗಿ ಹಗರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟೀಸ್ ನೀಡಿತ್ತು ಆದರೂ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಇಂದು ವಿಚಾರಣೆಗೆ ಹಾಜರಾಗಿಲ್ಲ.

ಈ ಹಿಂದೆ ಮಾರ್ಚ್ 4 ರಂದು ಯಾದವ್ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು ಆದರೆ ಅವರು ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗಿರಲಿಲ್ಲ, ನಂತರ ಇಂದಿಗೆ ಹೊಸ ದಿನಾಂಕ ನಿಗದಿಪಡಿಸಿದ್ದರು ಅವರು ವಿಚಾರಣೆಗೆ ಬಂದಿಲ್ಲ.

ತ್ರಿಪುರಾದಲ್ಲಿ ಸಂಸದೀಯ ನಿಯೋಗದ ಮೇಲೆ ದಾಳಿ

ಸಿಬಿಐ ಇತ್ತೀಚೆಗೆ ಹಗರಣಕ್ಕೆ ಸಂಬಂಧಿಸಿದಂತೆ ಆರ್‍ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಅವರ ಪತ್ನಿ ರಾಬ್ರಿ ದೇವಿ ಅವರನ್ನು ಕ್ರಮವಾಗಿ ದೆಹಲಿ ಮತ್ತು ಪಾಟ್ನಾದಲ್ಲಿ ವಿಚಾರಣೆಗೊಳಪಡಿಸಿತ್ತು.

ಕೆಪಿಸಿಸಿ ಕಾರ್ಯಧ್ಯಕ್ಷ ಆರ್. ಧೃವ ನಾರಾಯಣ್ ನಿಧನ

ಈ ಪ್ರಕರಣವು ಯಾದವ್ ಕುಟುಂಬ ಮತ್ತು ಅದರ ಸಹಚರರಿಗೆ ಭೂಮಿ ಪಾರ್ಸೆಲ್‍ಗಳನ್ನು ಉಡುಗೊರೆಯಾಗಿ ಅಥವಾ ಅಗ್ಗದ ದರದಲ್ಲಿ ಮಾರಾಟ ಮಾಡುವುದಕ್ಕೆ ಪ್ರತಿಯಾಗಿ ರೈಲ್ವೆಯಲ್ಲಿ ಉದ್ಯೋಗವನ್ನು ನೀಡಲಾಗಿತ್ತು ಎಂದು ಆರೋಪಿಸಲಾಗಿದೆ.

CBI, summons, Bihar, deputy CM, Tejashwi Yadav,

Articles You Might Like

Share This Article