ವಿಚಾರಣೆಗೆ ಕಾಲವಕಾಶ ಕೋರಿದ ಮನೀಷ್ ಸಿಸೋಡಿಯಾ

Social Share

ನವದೆಹಲಿ,ಫೆ.19 – ನಗರಾಡಳಿತದ ಬಜೆಟ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆ, ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗಲು ಕಾಲವಕಾಶ ನೀಡುವಂತೆ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸಿಬಿಐಗೆ ಮನವಿ ಮಾಡಿದ್ದಾರೆ.

ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ನಡೆಸಿರುವ ಬಗ್ಗೆ ತನಿಖೆ ನಡೆಸಿದ್ದ ಸಿಬಿಐ 3 ತಿಂಗಳ ಹಿಂದೆ ಚಾರ್ಜ್‍ಶೀಟ್ ಸಲ್ಲಿಸಿತ್ತು. ಭಾನುವಾರ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್ ನೀಡಿತ್ತು. ಆದರೆ ಎರಡು ವಾರಗಳ ಬಳಿಕ ಹಾಜರಾಗಲು ಅವಕಾಶ ನೀಡುವಂತೆ ಸಿಸೋಡಿಯಾ ಸಿಬಿಐಗೆ ಮನವಿ ಮಾಡಿದ್ದಾರೆ.

ಕೋಟಿ ಕೋಟಿ ತೆರಿಗೆ ವಂಚನೆ : ಮಂತ್ರಿ ಮಾಲ್ ಚರಾಸ್ತಿ ಸೀಜ್ ಮಾಡಿದ ಬಿಬಿಎಂಪಿ

ನಾನು ಹಣಕಾಸು ಮಂತ್ರಿಯೂ ಆಗಿರುವುದರಿಂದ ಸೂಕ್ತ ಸಮಯಕ್ಕೆ ಬಜೆಟ್ ಮಂಡಿಸುವುದು ನನ್ನ ಕರ್ತವ್ಯ. ಹಾಗಾಗಿ ಫೆಬ್ರವರಿ ಕೊನೆಯ ವಾರದಲ್ಲಿ ವಿಚಾರಣೆಗೆ ಹಾಜರಾಗುವುದಾಗಿ ಸಿಬಿಐಗೆ ತಿಳಿಸಿದ್ದೇನೆ ಎಂದು ಸಿಸೋಡಿಯಾ ಹೇಳಿದ್ದಾರೆ.

CBI, summons, Manish Sisodia, appear, February, last, week,

Articles You Might Like

Share This Article