ಬೆಂಗಳೂರು, ಆ.1- ಒಬ್ಬಂಟಿ ಯಾಗಿ ದ್ವಿಚಕ್ರ ವಾಹನಗಳಲ್ಲಿ ಬರುವ ಸವಾರರು ಹಾಗೂ ಸಾರ್ವಜನಿಕರ ಅಡ್ಡಗಟ್ಟಿ ಹಣ, ಮೊಬೈಲ್ ಮತ್ತು ಇತರೆ ಬೆಲೆ ಬಾಳುವ ವಸ್ತುಗಳನ್ನು ದೋಚಲು ಮಾರಕಾಸ್ತ್ರಗಳೊಂದಿಗೆ ಸಜ್ಜಾಗಿದ್ದ ಐದು ಮಂದಿ ದರೋಡೆಕೋರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನವಾಜ್ ಅಲಿ ಅಲಿಯಾಸ್ ಅಲಿ, ಜಮೀರ್ ಪಾಷ ಅಲಿಯಾಸ್ ಜಮ್ಮು, ಯಾಸೀನ್ ಖಾನ್, ಅಪ್ರೋಜ್ ಖಾನ್ ಅಲಿಯಾಸ್ ಅಪ್ರೋಜ್ ಮತ್ತು ಅಮೀರ್ ಉದ್ದೀನ್ ಬಂಧಿತ ಆರೋಪಿಗಳು. ಸಂಪಿಗೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಚೇನಹಳ್ಳಿ ಮುಖ್ಯರಸ್ತೆ , ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಭಾಗ ರಸ್ತೆಯಲ್ಲಿ ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಗುಂಫೋ0ದು ಸಂಚು ರೂಪಿಸಿತ್ತು.
ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಸ್ಥಳಕ್ಕೆ ತೆರಳಿ ಐದು ಮಂದಿ ದರೋಡೆಕೋರರನ್ನು ಬಂಧಿಸಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿ ದ್ದಾರೆ. ಆರೋಪಿಗಳ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ತನಿಖೆ ಮುಂದುವರೆದಿರುತ್ತದೆ.
ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರ ಸಿಸಿಬಿ ಸಂಘಟಿತ ಅಪರಾಧ ದಳ (ಪೂರ್ವ) ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿ ಕೈಗೊಂಡಿದ್ದಾರೆ.