ಬೆಂಗಳೂರು, ಆ.3- ಕುಖ್ಯಾತ ರೌಡಿ ನಾಗ ಅಲಿಯಾಸ್ ವಿಲ್ಸನ್‍ಗಾರ್ಡನ್ ನಾಗನನ್ನು ಸಿಸಿಬಿ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಇಪ್ಪತ್ತೈದು ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ ಈತ ಇಂದು ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾನೆ.
ಈತನ ಮೇಲೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ಹತ್ತು ಪ್ರಕರಣಗಳಿವೆ. ಜೈಲಿನಿಂದ ಬಿಡುಗಡೆಯಾದ ನಂತರ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಬಾಗಿಯಾಗಿಲ್ಲವೆಂದು ವಿಚಾರಣೆ ವೇಳೆ ಆತ ಹೇಳಿದ್ದಾನೆ ಎಂದು ಗೊತ್ತಾಗಿದೆ.
ಇಂದು ಖುದ್ದು ಹಾಜರಾಗುವಂತೆ ಸಿಸಿಬಿ ಪೊಲೀಸರು ಸೂಚಿಸಿದ್ದರಿಂದ ಜೈಲಿನಿಂದ ಬಿಡುಗಡೆಯಾದ ಮೇಲೆ ಇದೇ ಮೊದಲ ಬಾರಿಗೆ ರೌಡಿ ನಾಗ ಹಾಜರಾಗಿದ್ದಾನೆ. ಮುಂದೆ ಯಾವುದೇ ರೌಡಿ ಚಟುವಟಿಕೆಗಳಲ್ಲಿ ಬಾಗಿಯಾಗದಂತೆ ಸಿಸಿಬಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಇದೇ ರೀತಿ ಅನೇಕ ರೌಡಿಗಳನ್ನು ಕರೆಸಿಕೊಂಡು, ಅಪರಾಧ ಚಟುವಟಿಕೆಗಳಲ್ಲಿ ಬಾಗಿಯಾದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಸಿಸಿಬಿ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.