ಏಕಕಾಲದಲ್ಲಿ 3 ಕಡೆ ಸಿಸಿಬಿ ದಾಳಿ, 35 ಲಕ್ಷ ಮೌಲ್ಯದ ಮಾಲು ವಶ

Social Share

ಬೆಂಗಳೂರು,ಡಿ.14-ಸಿಸಿಬಿ ಪೊಲೀಸರು ಮೂರು ಕಡೆ ದಾಳಿ ಮಾಡಿ ವಿದೇಶಿ ಪ್ರಜೆ ಸೇರಿದಂತೆ ನಾಲ್ವರು ಡ್ರಗ್ ಪೆಡ್ಲರ್‍ಗಳನ್ನು ಬಂಧಿಸಿ 35 ಲಕ್ಷ ಮೌಲ್ಯದ ಮಾದಕವಸ್ತು ವಶಪಡಿಸಿಕೊಂಡಿದ್ದಾರೆ.

ನಗರದ ಹೆಬ್ಬಾಳ, ಬಾಣಸವಾಡಿ ಮತ್ತು ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮಾದಕವಸ್ತು ಎಂಡಿಎಂಎ ಕ್ರಿಸ್ಟಲ್‍ನ್ನು ಪರಿಚಯಸ್ಥ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಸಿಸಿಬಿ ಮಾದಕದ್ರವ್ಯ ನಿಗ್ರಹದಳದ ಅಧಿಕಾರಿ ಮತ್ತು ಸಿಬ್ಬಂದಿ ತಂಡವು ಮೂರು ಕಡೆಗಳಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಸೂಡಾನ್ ದೇಶದ ಪ್ರಜೆ ಸೇರಿದಂತೆ ಒಟ್ಟು ನಾಲ್ಕು ಮಂದಿ ಡ್ರಗ್ ಪೆಡ್ಲರ್‍ಗಳನ್ನು ಬಂಧಿಸಿದ್ದಾರೆ.

ಸಕಲೇಶಪುರದಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್..!

ಬಂಧಿತರಿಂದ 35 ಲಕ್ಷ ಬೆಲೆ ಬಾಳುವ 240 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್ ಮತ್ತು ಕೃತ್ಯಕ್ಕೆ ಬಳಸಲಾಗುತ್ತಿದ್ದ ಕಾರು , ಎರಡು ಬೈಕ್‍ಗಳು, 5 ಮೊಬೈಲ್ ಫೋನ್‍ಗಳು ಮತ್ತು ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ನೈಜೀರಿಯಾ ಮತ್ತು ಕೇರಳ ಮೂಲದ ವ್ಯಕ್ತಿಯಿಂದ ಕ್ರಿಸ್ಟಲ್‍ನ್ನು ಕಡಿಮೆ ಬೆಲೆಗೆ ಪಡೆದುಕೊಂಡು ಒಂದು ಗ್ರಾಂಗೆ 10 ಸಾವಿರದಿಂದ 12 ಸಾವಿರಕ್ಕೂ ಹೆಚ್ಚಿನ ಬೆಲೆಗೆ ಪರಿಚಯಸ್ಥ ಗಿರಾಕಿಗಳಿಗೆ, ವಿದ್ಯಾರ್ಥಿಗಳಿಗೆ, ಐಟಿಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.

ದೆಹಲಿಯಲ್ಲಿ ಖರ್ಗೆ ನೇತೃತ್ವದಲ್ಲಿ ನಡೆದ ಕರ್ನಾಟಕ ನಾಯಕರ ಸಭೆಯ ಸೀಕ್ರೆಟ್ ಬಿಚ್ಚಿಟ್ಟ ಕಾಂಗ್ರೆಸ್

ಆರೋಪಿಗಳು ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದರಿಂದ ಆರೋಪಿಗಳ ವಿರುದ್ಧ ಹೆಬ್ಬಾಳ, ಬಾಣಸವಾಡಿ ಮತ್ತು ಕೋರಮಂಗಲ ಪೊಲೀಸ್ ಠಾಣೆಗಳಲ್ಲಿ ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ.

CCB police, raids, Four, drug peddlers, arrested,

Articles You Might Like

Share This Article