Friday, December 6, 2024
Homeಬೆಂಗಳೂರುಸ್ಪಾ ಮೇಲೆ ಸಿಸಿಬಿ ದಾಳಿ, 44 ಯುವತಿಯರ ರಕ್ಷಣೆ

ಸ್ಪಾ ಮೇಲೆ ಸಿಸಿಬಿ ದಾಳಿ, 44 ಯುವತಿಯರ ರಕ್ಷಣೆ

ಬೆಂಗಳೂರು, ಜ.7- ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿ 44 ಯುವತಿಯರನ್ನು ರಕ್ಷಿಸಿದ್ದಾರೆ. ಮಹಾದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯ ಓಲ್ಡ್ ಮಾದ್ರಸ್ ರಸ್ತೆಯ ಬಹುಮಹಡಿ ಕಟ್ಟಡ ಒಂದರಲ್ಲಿ ಅನಿಲ್ ಮಸಾಜ್ ಪಾರ್ಲರ್ ನಡೆಸುತ್ತಿದ್ದು, ಇದು ಹೆಸರಿಗೆ ಮಾತ್ರ ಮಸಾಜ್ ಪಾರ್ಲರ್ ಆಗಿದ್ದು ಒಳಗಡೆ ವೇಶ್ಯಾವಾಟಿಕೆ ನಡೆಯುತ್ತಿತ್ತು.

ರೈತರ ನೆರವಿಗೆ ಬರಲು ಆಗದಿದ್ದರೆ ರಾಜೀನಾಮೆ ಕೊಡಿ : ಅಶೋಕ್

ಆರೋಪಿಯು ವಿದೇಶ ಹಾಗೂ ಹೊರ ರಾಜ್ಯಗಳಿಂದ ಯುವತಿಯರನ್ನು ಹಣದ ಆಮಿಷವೊಡ್ಡಿ ಕರೆ ತಂದು ಸ್ಪಾದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದನು. ಇದರ ಬಗ್ಗೆ ಬಂದ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ಯುವತಿಯರನ್ನು ರಕ್ಷಿಸಿದ್ದಾರೆ. ಈ ಸಂಬಂಧಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದು ವರಿದಿದೆ.

RELATED ARTICLES

Latest News