ರೌಡಿಗಳಿಗೆ ಬಿಸಿ ಮುಟ್ಟಿಸಿದ ಸಿಸಿಬಿ ಪೊಲೀಸರು

Social Share

ಬೆಂಗಳೂರು, ನ.23- ಬಿಬಿಎಂಪಿ ವಿಧಾನಸಭೆ ಚುನಾವಣೆಗಳು ಸಮೀಪಿಸುತ್ತಿದ್ದು, ಕೆಲವು ರೌಡಿಗಳು ರಾಜಕೀಯ ಪ್ರವೇಶಿಸಿ ಗಣ್ಯ ವ್ಯಕ್ತಿಗಳಾಗುವ ತಯಾರಿಯಲ್ಲಿರುವಾಗಲೆ ಸಿಸಿಬಿ ಪೊಲೀಸರು ಇಂದು ಬೆಳಗ್ಗೆ ದಿಢೀರ್ ದಾಳಿ ನಡೆಸಿ ಶಾಕ್ ನೀಡಿದ್ದಾರೆ.

ಮುಂಜಾನೆ ಸಿಸಿಬಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ನಗರಾದ್ಯಂತ ರೌಡಿಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಕೆಲ ರೌಡಿಗಳು ನ್ಯಾಯಾಲಯದಿಂದ ವಾರೆಂಟ್ ಜಾರಿ ಆಗಿದ್ದರೂ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರು.

ಇನ್ನೂ ಹಲವರು ಕೆಲವು ಪ್ರಕರಣಗಳಲ್ಲಿ ಬೇಕಾಗಿದ್ದರು. ಈ ಹಿನ್ನೆಲೆಯಲ್ಲಿ ನಗರಾದ್ಯಂತ ಮುಂಜಾನೆಯಿಂದಲೇ ಕಾರ್ಯಾಚರಣೆಗಿಳಿದ ಸಿಸಿಬಿ ಪೊಲೀಸರು 86 ರೌಡಿ ಶೀಟರ್ಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ.
ದಾಳಿ ಸಂದರ್ಭದಲ್ಲಿ ಕೆಲ ರೌಡಿಗಳ ಮನೆಗಳಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

28 ರೌಡಿಗಳನ್ನು ಸಿಸಿಬಿ ಕಚೇರಿಗೆ ಕರೆ ತಂದು ವಿಚಾರಣೆಗೊಳಪಡಿಸಿದ್ದಾರೆ. ಪ್ರಸ್ತುತ ಇವರು ಮಾಡುತ್ತಿರುವ ಕೆಲಸ ಅವರ ಚಟುವಟಿಕೆಗಳ ಬಗ್ಗೆ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಮುಂದೆ ರೌಡಿ ಚಟುವಟಿಕೆಗಳಲ್ಲಿ ಹಾಗೂ ಯಾವುದೇ ಪ್ರಕರಣಗಳಲ್ಲೂ ಭಾಗಿಯಾಗದಂತೆ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರದಂತೆ ರೌಡಿಗಳಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ದಾಳಿ ವೇಳೆ ರೌಡಿಗಳಾದ ಕೋತಿರಾಮ, ಪಾರ್ಥಿಬನ್, ಮಲ್ಲೇಶ್ ಸೇರಿದಂತೆ 28 ರೌಡಿಗಳನ್ನು ಠಾಣೆಗೆ ಕರೆತಂದು ಎಚ್ಚರಿಕೆ ನೀಡಿ ಕಳುಹಿಸಲಾಗಿದೆ.

ರಮೇಶ್ ಕುಮಾರ್ ವಿರುದ್ಧ ಬಳಸಿದ್ದ ಅಸಂಬದ್ಧ ಪದ ವಾಪಸ್ ಪಡೆದ ಹೆಚ್‌ಡಿಕೆ

ರೌಡಿ ಮನೆಗಳ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಸೈಕಲ್ ರವಿ, ವಿಲ್ಸನ್ಗಾರ್ಡನ್ ನಾಗ, ಬೇಕರಿ ರಘು ಸೇರಿದಂತೆ ಇನ್ನು ಕೆಲವರು ಮನೆಯಲ್ಲಿರಲಿಲ್ಲ. ಇವರುಗಳ ಕುಟುಂಬಸ್ಥರಿಂದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.

ಸಿಸಿಬಿ ಜಂಟಿ ಪೊಲೀಸ್ ಆಯುಕ್ತರಾದ ಶರಣಪ್ಪ ಅವರ ಮಾರ್ಗದರ್ಶನದಲ್ಲಿ ಡಿಸಿಪಿ ಯತೀಶ್ ಚಂದ್ರ ನೇತೃತ್ವದಲ್ಲಿ ಎಸಿಪಿಗಳಾದ ಧರ್ಮೇಂದ್ರ, ರೀನಾ ಸುವರ್ಣಾ ಅವನ್ನೊಳಗೊಂಡ ತಂಡ ಇಂದು ಬೆಳ್ಳಂಬೆಳಗ್ಗೆ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿದೆ.

ಭಯೋತ್ಪಾದನೆ ನಿಗ್ರಹಕ್ಕೆ ಸರ್ಕಾರ ಬದ್ಧ : ಆರಗ ಜ್ಞಾನೇಂದ್ರ

ದಾಳಿ ಸಂದರ್ಭದಲ್ಲಿ ಐದು ಮಂದಿ ಎಸಿಪಿಗಳು, 20 ಮಂದಿ ಇನ್ಸ್ಪೆಕ್ಟರ್ಗಳು, 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮುಂಜಾನೆ 2 ಗಂಟೆ ಸುಮಾರಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

CCB, police, rowdies, operation, BBMP, assembly, elections,

Articles You Might Like

Share This Article