Saturday, February 15, 2025
Homeರಾಜ್ಯ14 ವರ್ಷದಿಂದ ತಲೆಮರೆಸಿಕೊಂಡಿದ್ದ ರೌಡಿ ಸೆರೆ

14 ವರ್ಷದಿಂದ ತಲೆಮರೆಸಿಕೊಂಡಿದ್ದ ರೌಡಿ ಸೆರೆ

ಬೆಂಗಳೂರು,ಜು.20- ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯೋಹಾನ್ ಅಲಿಯಾಸ್ ಪಾಪು(36) ಬಂಧಿತ ರೌಡಿ. ಈತನ ವಿರುದ್ಧ ಚಂದ್ರಲೇಔಟ್, ಅನ್ನಪೂರ್ಣೇಶ್ವರಿನಗರ, ಬಾಗಲಗುಂಟೆ ಪೊಲೀಸ್ ಠಾಣೆಗಳಲ್ಲಿ ರೌಡಿ ಪಟ್ಟಿ ತೆರೆಯಲಾಗಿದೆ.

ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಆರೋಪಿ ಯೋಹಾನ್ ವಿರುದ್ಧ 2010ನೇ ಸಾಲಿನಲ್ಲಿ ಎಲ್‍ಪಿಆರ್ ಪ್ರಕರಣ ದಾಖಲಾಗಿದೆ. 2012ರಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಆರೋಪಿ ಪತ್ತೆಗಾಗಿ ತಂಡವನ್ನು ರಚಿಸಲಾಗಿತ್ತು. ಈ ತಂಡ ಆರೋಪಿಯ ಬಗ್ಗೆ ಹಲವು ಮಾಹಿತಿಗಳನ್ನು ಕಲೆ ಹಾಕಿ ಬಂಧಿಸಿ ವೈಯಾಲಿ ಕಾವಲ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಿಸಿಬಿ ಸಂಘಟಿತ ಅಪರಾಧ ದಳದ(ಪಶ್ಚಿಮ) ಅಧಿಕಾರಿ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದರು.

RELATED ARTICLES

Latest News