Friday, January 31, 2025
Homeಬೆಂಗಳೂರುಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಂಗಡಿ ಮೇಲೆ ಸಿಸಿಬಿ ದಾಳಿ 80 ಸಿಲಿಂಡರ್‌ಗಳ ವಶ

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಂಗಡಿ ಮೇಲೆ ಸಿಸಿಬಿ ದಾಳಿ 80 ಸಿಲಿಂಡರ್‌ಗಳ ವಶ

CCB raids illegal gas refilling shop, seizes 80 cylinders

ಬೆಂಗಳೂರು,ಜ.31-ಖಾಸಗಿ ಮತ್ತು ಸರ್ಕಾರಿ ಸ್ವಾಮ್ಯದ ಗೃಹ ಬಳಕೆ ಎಲ್.ಪಿ.ಜಿ ಸಿಲಿಂಡರ್ಗಳನ್ನುಅನಧಿಕೃತವಾಗಿ ದಾಸ್ತಾನು ಮಾಡಿಕೊಂಡು ಚಿಕ್ಕ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ಗಳಿಗೆ ಆಕ್ರಮವಾಗಿ ರೀಫಿಲ್ಲಿಂಗ್ ಮಾಡಿ, ಮಾರಾಟದಲ್ಲಿ ತೊಡಗಿದ್ದ ಅಂಗಡಿಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯೊಬ್ಬನನ್ನು ಬಂಧಿಸಿ 4 ಲಕ್ಷ ರೂ. ಮೌಲ್ಯದ 80 ಸಿಲಿಂಡರ್ಗಳು, 3 ರೀಫಿಲ್ಲಿಂಗ್ ರಾಡ್ ಹಾಗೂ ಒಂದು ತೂಕದ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ.

ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಯನಗರ 1ನೇ ಬ್ಲಾಕ್, ಸೋಮೇಶ್ವರನಗರದಲ್ಲಿರುವ ಅಂಗಡಿ ಮತ್ತು ಗೋದಾಮಿನಲ್ಲಿ ಈ ದಂಧೆ ನಡೆಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ.ನಂತರ ದಾಳಿ ಮಾಡಿ ಒಬ್ಬನನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ವ್ಯಕ್ತಿಗಳು ತಲೆಮರೆಸಿಕೊಂಡಿದ್ದಾರೆ ಇವರ ಪತ್ತೆ ಕಾರ್ಯ ಮುಂದುವರೆದಿದೆ.

ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಯಾವ ಸಂದರ್ಭದಲ್ಲಾದರು ಬೆಂಕಿ ಹೊತ್ತಿಕೊಂಡು ಅನಾಹುತ ಸಂಭವಿಸಿ ಸಾರ್ವಜನಿಕ ಜೀವ ಮತ್ತು ಆಸ್ತಿ-ಪಾಸ್ತಿಗೆ ಹಾನಿವುಂಟಾಗುವ ಸಂಭವವಿದೆಯೆಂದು ಗೊತ್ತಿದ್ದರು ಸಹ ಯಾವುದೇ ಸುರಕ್ಷತಾ ನಿಯಮಗಳನ್ನು ಅನುಸರಿಸದೇ, ಅನಧಿಕೃತವಾಗಿ ಅಕ್ರಮ ಚಟುವಟಿಕೆಯಲ್ಲಿ ಆರೋಪಿಗಳು ಬಾಗಿಯಾಗಿದ್ದಾರೆ ಎಂದು ಹೇಳಿದರು.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ಈ ಕಾರ್ಯಾಚರಣೆಯನ್ನು ಸಿಸಿಬಿ ಆರ್ಥಿಕ ಅಪರಾಧ ದಳದ ಅಧಿಕಾರಿ/ಸಿಬ್ಬಂದಿ ಯಶಸ್ವಿಯಾಗಿ ಕೈಗೊಂಡಿದ್ದಾರೆ ಎಂದು ಕಾರ್ಯಾಚರಣೆ ಬಗ್ಗೆ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

RELATED ARTICLES

Latest News