Monday, February 26, 2024
Homeರಾಜ್ಯಬರ ಪರಿಹಾರ ನೀಡುವಲ್ಲಿ ಕೇಂದ್ರದಿಂದ ಅನ್ಯಾಯ : ಪ್ರಿಯಾಂಕ್ ಖರ್ಗೆ

ಬರ ಪರಿಹಾರ ನೀಡುವಲ್ಲಿ ಕೇಂದ್ರದಿಂದ ಅನ್ಯಾಯ : ಪ್ರಿಯಾಂಕ್ ಖರ್ಗೆ

ಬೆಂಗಳೂರು,ಜ.23- ರಾಜ್ಯದ ಬರ ನಿರ್ವಹಣೆಗೆ ಆರ್ಥಿಕ ನೆರವು ನೀಡುವಂತೆ ಮನವಿ ಸಲ್ಲಿಸಿ 5 ತಿಂಗಳು ಕಳೆದರೂ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಪದೇಪದೇ ಸಭೆಗಳನ್ನು ಮುಂದೂಡುವ ಮೂಲಕ ಅನ್ಯಾಯ ಮಾಡುತ್ತಿದೆ ಎಂದು ಕಂದಾಯ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ನಗರದ ಫ್ರೀಡಂಪಾರ್ಕ್‍ನಲ್ಲಿ ಕಾಂಗ್ರೆಸ್ ವತಿಯಿಂದ ಆಯೋಜನೆಗೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದ ಬರ ಪರಿಸ್ಥಿತಿ ಕುರಿತು ಕಳೆದ ಸೆಪ್ಟೆಂಬರ್‍ನಲ್ಲಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಿ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಈವರೆಗೂ ಒಂದು ರೂಪಾಯಿ ಹಣ ಬಿಡುಗಡೆಯಾಗಿಲ್ಲ. ಕನಿಷ್ಟ ನಾವು ಕೊಟ್ಟಿರುವ ಪ್ರಸ್ತಾವನೆ ಕುರಿತಾಗಿಯಾದರೂ ನಿರ್ಧಾರ ತೆಗೆದುಕೊಳ್ಳಬೇಕಿತ್ತು ಎಂದರು.

ಡಿಸೆಂಬರ್ 23, ಜನವರಿ 16, ಎಂದು ಎರಡು ಬಾರಿ ಸಭೆ ಕರೆದು, ಪದೇಪದೇ ಮುಂದೂಡುತ್ತಿದ್ದಾರೆ. ನಮ್ಮ ರಾಜ್ಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್‍ನ 23 ಎಂಪಿಗಳು ಧ್ವನಿಯೆತ್ತುವ ಧೈರ್ಯ ತೋರಿಸುತ್ತಿಲ್ಲ ಎಂದು ಆರೋಪಿಸಿದರು.

ಅಮೆರಿಕದಲ್ಲಿ ಬಂದೂಕುದಾರಿಯಿಂದ ಗುಂಡಿನ ದಾಳಿ, 8 ಮಂದಿ ಬಲಿ

27 ಮಂದಿ ಸಂಸದರು ರಾಜ್ಯಕ್ಕೆ ಗೋಳಾಗಿದ್ದಾರೆ. ಬರೀ ಹೋಳು ಬಿಡುತ್ತಾ ಕಾಲ ಕಳೆಯುತ್ತಿದ್ದಾರೆ. ಬರ ನಿರ್ವಹಣೆ ಅಷ್ಟೇ ಅಲ್ಲ ವಿವಿಧ ಯೋಜನೆಗಳ ವಿಷಯದಲ್ಲೂ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ.
ಉತ್ತರ ಕರ್ನಾಟಕ ಭಾಗದ ಕುಡಿಯುವ ನೀರಿನ ಯೋಜನೆ ಮಹದಾಯಿ ಜಾರಿಗೆ ನ್ಯಾಯಾಕರಣದ ತೀರ್ಪು ಬಂದಿದೆ. ಕೇಂದ್ರ ಸರ್ಕಾರ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ನಿರಪೇಕ್ಷಣಾ ಪತ್ರ ಕೊಟ್ಟರೆ ಯೋಜನೆ ಕಾರ್ಯಾರಂಭವಾಗಲಿದೆ. ಅದರ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.

ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡುತ್ತಿದ್ದ ತಮಿಳುನಾಡಿಗೆ ಅನುಕೂಲವಾಗಲಿದೆ. ಅದಕ್ಕೂ ಕೇಂದ್ರಸರ್ಕಾರದಿಂದ ಸಹಾಯ ದೊರೆಯುತ್ತಿಲ್ಲ. ಕರ್ನಾಟಕ ಭಾಗದ ಭದ್ರಾ ಮೇಲ್ದಂಡೆ ಯೋಜನೆಗೆ ಕಳೆದ 2023 ರ ಫೆಬ್ರವರಿಯಲ್ಲಿ ಮಂಡಿಸಲಾದ ಬಜೆಟ್‍ನಲ್ಲಿ 5,600 ಕೋಟಿ ರೂ.ಗಳನ್ನು ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಈವರೆಗೂ ಒಂದೂ ರೂಪಾಯಿ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಣಕಾಸು ಯೋಜನೆಗಳಲ್ಲಿ ನೀಡಬೇಕಾದ ಹಣಕಾಸಿನ ಪಾಲಿನಲ್ಲೂ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ. ಕರ್ನಾಟಕ ಸ್ವಾಭಿಮಾನಕ್ಕೆ ಹೆಸರಾದ ರಾಜ್ಯ. ನಾವು ಅವರ ಮುಂದೆ ಕೈಕಟ್ಟಿ ನಿಲ್ಲಬೇಕು ಎಂದು ಕೇಂದ್ರದ ಬಿಜೆಪಿಯವರು ಬಯಸುತ್ತಾರೆ. ನಾವು ನಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡಬೇಕಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.

RELATED ARTICLES

Latest News