ಬೆಂಗಳೂರು, ಮಾ.9- ಮುಂಬರುವ ಸಾರ್ವತ್ರಿಕ ರಾಜ್ಯ ವಿಧಾನಸಭೆ ಚುನಾವಣೆ ಪೂರ್ವ ತಯಾರಿ ಪರಿವೀಕ್ಷಣೆಗಾಗಿ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‍ಕುಮಾರ್ ನೇತೃತ್ವದ ಹಿರಿಯ ಅಧಿಕಾರಿಗಳ ತಂಡ ಇಂದು ರಾಜ್ಯಕ್ಕೆ ಆಗಮಿಸಿದೆ.
ಇಂದಿನಿಂದ ಮೂರುದಿಗಳ ಕಾಲ ಬೆಂಗಳೂರಿನಲ್ಲಿ ಚುನಾವಣೆ ಸಿದ್ಧತೆ ಕುರಿತಂತೆ ವಿವಿಧ ಕಾರ್ಯಕ್ರಮಗಳಲ್ಲಿ ತಂಡ ಪಾಲ್ಗೊಳ್ಳಲಿದೆ. ಇಂದು ಮಧ್ಯಾಹ್ನ ಆಗಮಿಸಿದ ತಂಡದಲ್ಲಿ ಭಾರತ ಚುನಾವಣಾ ಆಯೋಗದ ಚುನಾವಣಾ ಆಯುಕ್ತರಾದ ಅನೂಪ್ ಚಂದ್ರಪಾಂಡೆ, ಅರುಣ್ ಗೋಯಲ್ ಹಾಗೂ ಉಪ ಆಯುಕ್ತರು ಸೇರಿದಂತೆ ಆಯೋಗದ
ಹಿರಿಯ ಅಧಿಕಾರಿಗಳು ಇದ್ದಾರೆ.
ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ರಾಜ್ಯಮಟ್ಟದಲ್ಲಿ ಚುನಾವಣಾ ಪೂರ್ವ ತಯಾರಿ ಕುರಿತು ಇಂದು ಮಧ್ಯಾಹ್ನ ತಂಡ ಸಭೆ ನಡೆಸಿತು.
ನಿಲ್ಲದ ಮೂಲ ವಲಸಿಗರ ಸಂಘರ್ಷ : ಬಿಜೆಪಿಗೆ ಬಿಕ್ಕಟ್ಟು
ಚುನಾವಣೆ ಕುರಿತು ಪ್ರತ್ಯೇಕವಾಗಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆಯನ್ನು ಇಂದು ಸಂಜೆವರೆಗೂ ನಡೆಸಲಿದ್ದು, ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಲಹೆ ಮತ್ತು ಅಭಿಪ್ರಾಯಗಳನ್ನು ಪಡೆಯಲಿದೆ.
ಬಳಿಕ ಹೋಟೆಲ್ ತಾಜ್ ವೆಸ್ಟೆಂಡ್ ನಲ್ಲಿ ಹಮ್ಮಿಕೊಳ್ಳಲಾಗಿರುವ ಪ್ರಜಾಪ್ರಭುತ್ವದ ಒಳಗೊಳ್ಳುವಿಕೆ ಮತ್ತು ಸಮಗ್ರತೆ ವಿಷಯದ ಕುರಿತ ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದಲ್ಲಿ ಪಾಲ್ಗೋಳ್ಳಲಿದ್ದಾರೆ. ಹಲವು ಪ್ರಜಾಪ್ರಭುತ್ವ ದೇಶಗಳ ಚುನಾವಣಾ ಆಯುಕ್ತರುಗಳು ಇದರಲ್ಲಿ ನೇರವಾಗಿ ಪಾಲ್ಗೊಳ್ಳಲಿದ್ದು ಕೆಲವರು ವಿಡಿಯೋ ಕಾನಿರೆನ್ಸ್ ಮೂಲಕ ಪಾಲ್ಗೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಪಾಕ್ ಮೇಲೆ ದಾಳಿಗೆ ಸಜ್ಜಾಗಿದೆ ಭಾರತ : ಅಮೆರಿಕ ಗುಪ್ತಚರ ಇಲಾಖೆ ಎಚ್ಚರಿಕೆ
ನಾಳೆ ರಾಜ್ಯದ 34 ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ಚುನಾವಣೆಯ ಪೂರ್ವಭಾವಿ ತಯಾರಿ ಕುರಿತು ಸಭೆ ನಡೆಸಲಿದೆ. ನಾಳೆ ಸಂಜೆ ನಗರದ ಟಾಟಾ ಸಭಾಂಗಣದಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆವತಿಯಿಂದ ಹಮ್ಮಿಕೊಳ್ಳಲಾಗಿರುವ ಮತದಾರರ ಜಾಗೃತಿ ಕುರಿತ ವಿಶೇಷ ವಸ್ತುಪ್ರದರ್ಶನ, ಏಕಥಾನ್ ಉದ್ಘಾಟಿಸಿದ ನಂತರ ಮತದಾರರ ಜಾಗೃತಿ ಮೂಡಿಸುವ ಎಲ್‍ಇಡಿ ವಾಹನಗಳಿಗೆ ಚಾಲನೆ ನೀಡಲಿದ್ದಾರೆ.
ನಂತರ ನಡೆಯುವ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಚುನಾವಣಾ ರಾಯಭಾರಿಗಳು, ವಿದ್ಯಾರ್ಥಿಗಳು, ದಿವ್ಯಾಂಗರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಅನೇಕ ಗಣ್ಯರೊಂದಿಗೆ ಆಯೋಗ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಶನಿವಾರ ಬೆಳಿಗ್ಗೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಧ್ಯಾಹ್ನ ನಂತರ ಮೂರು ದಿನಗಳ ತಮ್ಮ ಭೇಟಿಯ ಕುರಿತು ಪತ್ರಿಕಾಗೋಷ್ಠಿ ನಡೆಸಿಕೊಡಲಿದ್ದಾರೆ. ಅಂದು ಸಂಜೆ ವೇಳೆಗೆ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.