ನವದೆಹಲಿ, ಏ.7- ಕೇಂದ್ರ ಸರ್ಕಾರ ದೇಶದ ಜನರ ಆರೋಗ್ಯ ರಕ್ಷಣೆಗೆ ಹೆಚ್ಚು ಒತ್ತು ನೀಡಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.ವಿಶ್ವ ಆರೋಗ್ಯ ದಿನದಂದು ತಮ್ಮ ಸಂದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರವು ಆರೋಗ್ಯ ರಕ್ಷಣೆಯ ಮೇಲೆ ಗಮನ ಹರಿಸುತ್ತದೆ ಮತ್ತು ಜನರ ಯೋಗಕ್ಷೇಮದ ವಿವಿಧ ಅಂಶಗಳಲ್ಲಿ ಹೂಡಿಕೆ ಮಾಡುತ್ತದೆ ಎಂದು ಪ್ರತಿಪಾದಿಸಿದ್ದಾರೆ.
ವಿಶ್ವ ಆರೋಗ್ಯ ದಿನದಂದು, ಆರೋಗ್ಯಕರ ಜಗತ್ತನ್ನು ನಿರ್ಮಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ ಎಂದು ಅವರು ಹೇಳಿದರು. ಉತ್ತಮ ಆರೋಗ್ಯವು ಅಭಿವೃದ್ಧಿ ಹೊಂದುತ್ತಿರುವ ಪ್ರತಿಯೊಂದು ಸಮಾಜದ ಅಡಿಪಾಯವಾಗಿದೆ ಎಂದು ಅವರು ತಮ ಎಕ್‌್ಸ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.