Sunday, November 24, 2024
Homeರಾಜ್ಯಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದೆ : ಜೋಶಿ

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದೆ : ಜೋಶಿ

ಕಲಬುರಗಿ, ಮೇ 23- ಹಾಸನ ಜೆಡಿಎಸ್‌‍ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮೆ ಪ್ರಧಾನಿ ನರೇಂದ್ರಮೋದಿಗೆ ಪತ್ರ ಬರೆದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದೆ. ಪಾಸ್‌‍ಪೋರ್ಟ್‌ ರದ್ದತಿಗೆ ಅದರದ್ದೇ ಆದ ಪ್ರಕ್ರಿಯೆಗಳು ಇವೆ. ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದತಿಗೆ ಕೋರ್ಟ್‌ನಲ್ಲಿ ಅರ್ಜಿ ಹಾಕಲಾಗಿದೆ ಎಂದು ಹೇಳಿದರು.

ನನ್ನ ಪ್ರಶ್ನೆಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಹಾಗೂ ಪರಮೇಶ್ವರ್‌ ಈವರೆಗೂ ಉತ್ತರಿಸಿಲ್ಲ. ಪ್ರಜ್ವಲ್‌ ಪೆನ್‌ಡ್ರೈವ್‌ ಹೊರಬಂದಿದ್ದು ಏ.21ರಂದು. ಆದರೆ ಪ್ರಜ್ವಲ್‌ ವಿದೇಶಕ್ಕೆ ಹೋಗಿದ್ದು ಏ.27ರಂದು. ಹಾಗಾದರೆ ಅಲ್ಲಿಯವರೆಗೆ ಇವರೇನು ಕತ್ತೆ ಕಾಯುತ್ತಿದ್ದಾರಾ ಎಂದು ಪ್ರಶ್ನಿಸಿದರು.

ವಿದೇಶಕ್ಕೆ ಹೋದವರನ್ನು ಕರೆತರಲು ಪ್ರಕ್ರಿಯೆಗಳಿವೆ. ರಾಜ್ಯ ಸರ್ಕಾರಕ್ಕೆ ಸಹಕಾರ ನೀಡಲು ಕೇಂದ್ರ ತಯಾರಿದೆ. ಪತ್ರ ಬರೆದ ತಕ್ಷಣ ಪಾಸ್‌‍ಪೋರ್ಟ್‌ ರದ್ದಾಗಬೇಕು ಎಂದರೆ ಹೇಗೆ? ಇದೀಗ ಪ್ರಕರಣವನ್ನು ಬಿಜೆಪಿ ಮೇಲೆ ಹಾಕುವ ಪ್ರಯತ್ನ ಕಾಂಗ್ರೆಸ್‌‍ ಮಾಡುತ್ತಿದೆ. ಒಕ್ಕಲಿಗ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟು ಚುನಾವಣೆ ಮುಗಿಯುವವರೆಗೂ ಏನೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಗಂಭೀರ ಪ್ರಕರಣ. ಪ್ರಜ್ವಲ್‌ ವಿಚಾರಣೆ ಎದುರಿಸಬೇಕು. ಅವರು ತಪ್ಪು ಮಾಡಿದ್ದೇ ಆಗಿದ್ದರೆ ಕಠಿಣ ಕ್ರಮ ಆಗಲೇಬೇಕು. ಇದರಲ್ಲಿ ಯಾವುದೇ ಅನುಕಂಪ ಇಲ್ಲವೇ ಇಲ್ಲ ಎಂದೂ ಜೋಶಿ ಹೇಳಿದರು.ಪ್ರಜ್ವಲ್‌ ಪ್ರಕರಣದಲ್ಲಿ ರಾಜ್ಯ ಸರ್ಕಾರ ತನಿಖೆಗಿಂತ ಹೆಚ್ಚು ರಾಜಕಾರಣ ಮಾಡುತ್ತಿದೆ ಎಂದು ಅವರು ದೂರಿದ್ದಾರೆ.

RELATED ARTICLES

Latest News