ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದೆ : ಜೋಶಿ

ಕಲಬುರಗಿ, ಮೇ 23- ಹಾಸನ ಜೆಡಿಎಸ್‌‍ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮೆ ಪ್ರಧಾನಿ ನರೇಂದ್ರಮೋದಿಗೆ ಪತ್ರ ಬರೆದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದೆ. ಪಾಸ್‌‍ಪೋರ್ಟ್‌ ರದ್ದತಿಗೆ ಅದರದ್ದೇ ಆದ ಪ್ರಕ್ರಿಯೆಗಳು ಇವೆ. ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದತಿಗೆ ಕೋರ್ಟ್‌ನಲ್ಲಿ ಅರ್ಜಿ ಹಾಕಲಾಗಿದೆ ಎಂದು ಹೇಳಿದರು. … Continue reading ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದೆ : ಜೋಶಿ