Friday, September 20, 2024
Homeರಾಜಕೀಯ | Politicsಕೇಂದ್ರ ಸರ್ಕಾರ ಕರ್ನಾಟಕದ ಆರ್ಥಿಕ ಬೆಳವಣಿಗೆ ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ : ಡಿ.ಕೆ.ಸುರೇಶ್‌

ಕೇಂದ್ರ ಸರ್ಕಾರ ಕರ್ನಾಟಕದ ಆರ್ಥಿಕ ಬೆಳವಣಿಗೆ ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ : ಡಿ.ಕೆ.ಸುರೇಶ್‌

ಬೆಂಗಳೂರು,ಜು.29– ಕರ್ನಾಟಕದ ಆರ್ಥಿಕ ಬೆಳವಣಿಗೆಯನ್ನು ಕುಗ್ಗಿಸುವ ಪ್ರಯತ್ನವನ್ನು ಕೇಂದ್ರಸರ್ಕಾರ ಹಿಂಬಾಗಿಲ ಮೂಲಕ ಮಾಡುತ್ತಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಆರೋಪಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಬಜೆಟ್‌ನಲ್ಲಿ ಗುಜರಾತ್‌, ಉತ್ತರಪ್ರದೇಶ ಸೇರಿ ಉತ್ತರಭಾರತದ ರಾಜ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ದಕ್ಷಿಣ ಭಾರತದ ರಾಜ್ಯಗಳನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ನಿನ್ನೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವ ಯತ್ನ ನಡೆಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಎಸ್‌‍ಟಿ ವ್ಯವಸ್ಥೆ ಜಾರಿಗೆ ಬಂದ ಬಳಿಕ ಇಲ್ಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಸಂಗ್ರಹಿಸಿಕೊಳ್ಳುತ್ತದೆ. ಅವರು ಕೊಟ್ಟಾಗ ನಾವು ತೆಗೆದುಕೊಳ್ಳಬೇಕು. ಇನ್ನು ಆದಾಯ ತೆರಿಗೆ ವ್ಯವಸ್ಥೆಯಲ್ಲಿ ನಾವು ಚಕಾರವನ್ನೇ ಎತ್ತುವಂತಿಲ್ಲ. ರಾಜ್ಯಸರ್ಕಾರ ಸಹಕಾರ ನೀಡುವುದಿಲ್ಲ ಎಂದು ದೂರುವ ಕೇಂದ್ರಸರ್ಕಾರ ಸದ್ದಿಲ್ಲದೆ 3.50 ಲಕ್ಷ ಕೋಟಿ ತೆರಿಗೆ ವಸೂಲಿ ಮಾಡಿಕೊಳ್ಳುವಾಗ ಸಹಕಾರದ ಬಗ್ಗೆ ಮಾತನಾಡುವುದಿಲ್ಲ ಎಂದರು.

ಕೇಂದ್ರ ಸರ್ಕಾರದ ಈ ತಾರತಮ್ಯವನ್ನು ವಿರೋಧಿಸಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ವಿಭಜನೆಯ ಅಭಿಪ್ರಾಯಗಳು ಮಡುಗಟ್ಟಿವೆ. ತಮಿಳುನಾಡಿನಲ್ಲಿ ಹಲವು ಬಾರಿ ಈ ಕುರಿತು ಚರ್ಚೆಯಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ದೊರೆಯಬೇಕಾದ ಆರ್ಥಿಕ ನೆರವು ಯಾರ ಭಿಕ್ಷೆಯೂ ಅಲ್ಲ. ಯುಪಿಎ ಸರ್ಕಾರದ ಅವಧಿಯಲ್ಲಿ ಕಡಿಮೆ ಅನುದಾನ ಇತ್ತು ಎಂಬುದು ಹಾಸ್ಯಾಸ್ಪದ. ಆಗಿನ ಬಜೆಟ್‌ ಗಾತ್ರ ಮತ್ತು ಈಗಿನ ಬಜೆಟ್‌ ಗಾತ್ರಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಹೇಳಿದರು.

ದಕ್ಷಿಣ ಭಾರತದವನ್ನು ಮತ ಗಳಿಕೆಗಷ್ಟೇ ಕೇಂದ್ರ ಸರ್ಕಾರ ಬಳಸಿಕೊಳ್ಳುತ್ತಿದೆ. ಉಳಿದಂತೆ ಯಾವುದೇ ನೆರವು ನೀಡುತ್ತಿಲ್ಲ. ಕರ್ನಾಟಕದ ಬೆಳವಣಿಗೆಗೆ ಹಿಂಬಾಗಿಲ ಮೂಲಕ ಅಡ್ಡಿಪಡಿಸುವ ಪ್ರಯತ್ನವನ್ನು ನಿರಂತರವಾಗಿ ನಡೆಸಲಾಗುತ್ತಿದೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಒತ್ತಡದಲ್ಲಿ ಕೆಲಸ ಮಾಡುವುದು ಸರಿಯಲ್ಲ. ಮೊದಲು ಆರೋಗ್ಯದ ಕಡೆ ಗಮನ ಕೊಡಲಿ. ರಾಜ್ಯ ಮತ್ತು ದೇಶಕ್ಕೆ ಅವರ ಸೇವೆ ಅಗತ್ಯವಿದೆ. ಯಾರಿಗೇ ಆಗಲಿ ಕೆಟ್ಟದಾಗಬೇಕೆಂದು ಬಯಸುವ ವಂಶ ತಮದಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮುಡಾ ಹಗರಣ ಬಿಜೆಪಿಯ ಕೂಸು. 1400 ನಿವೇಶನಗಳ ಹಂಚಿಕೆ ಪ್ರಕರಣವನ್ನು ನಮ ಸರ್ಕಾರ ತನಿಖೆ ನಡೆಸುತ್ತಿದೆ. ಅದೇ ರೀತಿ ವಾಲೀಕಿ ನಿಗಮದ ಹಗರಣಗಳು ಗಮನಕ್ಕೆ ಬರುತ್ತಿದ್ದಂತೆ ತನಿಖೆಗೆ ಆದೇಶಿಸಲಾಗಿದೆ.

ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳು ರಾಜ್ಯದಲ್ಲಿ ಕ್ರಿಯಾತಕ ವಿರೋಧಪಕ್ಷವಾಗಿ ಕೆಲಸ ಮಾಡಿದೆ. ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಪ್ರತಿಪಾದಿಸಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಈಗ ತಮ ಮಾತನ್ನೇ ಬದಲಾಯಿಸಿದ್ದಾರೆ ಎಂದು ಡಿ.ಕೆ.ಸುರೇಶ್‌ ಆಕ್ಷೇಪಿಸಿದರು.

RELATED ARTICLES

Latest News